ಬಿಜೆಪಿ ಸರ್ಕಾರ ಘೋಷಿಸಿರುವ ಪ್ರಶಸ್ತಿ, ಪುರಸ್ಕಾರಗಳನ್ನು ತಡೆಹಿಡಿಯಿರಿ: ಪ್ರಗತಿಪರರಿಂದ ಸಿಎಂಗೆ ಒತ್ತಾಯ

Bengaluru: ಈ ಹಿಂದಿನ ರಾಜ್ಯ ಬಿಜೆಪಿ (BJP) ಸರ್ಕಾರ ಘೋಷಿಸಿರುವ ಪ್ರಶಸ್ತಿ, ಪುರಸ್ಕಾರಗಳನ್ನು ಕೂಡಲೇ ತಡೆಹಿಡಿಯಬೇಕು. ಕೋಮುವಾದಿ ವ್ಯಕ್ತಿಗಳಿಗೆ ಶಕ್ತಿ ತುಂಬುವ ಸಲುವಾಗಿ (BJP Awards on hold) ಬಿಜೆಪಿ ಸರ್ಕಾರ ಅನೇಕ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ. ಹೀಗಾಗಿ ಎಲ್ಲ ಪ್ರಶಸ್ತಿ, ಪುರಸ್ಕಾರಗಳನ್ನು ತಡೆಹಿಡಿಯಬೇಕೆಂದು ರಾಜ್ಯದ ಕೆಲ ಪ್ರಗತಿಪರ ಸಾಹಿತಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು (Siddaramaiah) ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಅನೇಕ ವಿಷಯಗಳ ಕುರಿತು ಚರ್ಚೆ ನಡೆಸಲಾಗಿದೆ.

https://youtube.com/shorts/v_467g-UD_E?feature=share

ಅದರಲ್ಲೂ ಮೂಖ್ಯವಾಗಿ ಹಿಜಾಬ್ (Hijab) ಕುರಿತು ಹಿಂದಿನ ಬಿಜೆಪಿ ಸರ್ಕಾರ ನೀಡಿರುವ ಆದೇಶವನ್ನು ರದ್ದುಗೊಳಿಸುವಂತೆ ಕೂಡಾ ಒತ್ತಾಯಿಸಿದ್ದು, ಪ್ರಗತಿಪರ ಸಾಹಿತಿಗಳು (BJP Awards on hold) ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದಿಟ್ಟಿರುವ ಪ್ರಮುಖ ಬೇಡಿಕೆಗಳೆಂದರೆ,

• ವಿಶ್ವವಿದ್ಯಾಲಯಗಳಲ್ಲಿನ ಸಿಂಡಿಕೇಟ್ಗಳನ್ನು (Syndicates) ಕೂಡಲೇ ಬದಲಾಯಿಸಿ, ಜಾತ್ಯತೀತ ವ್ಯಕ್ತಿಗಳನ್ನು ಸದಸ್ಯರನ್ನಾಗಿ ನೇಮಕ ಮಾಡಬೇಕು.
• ಮುಖ್ಯಮಂತ್ರಿಗಳ ಸಾಂಸ್ಕೃತಿಕ ಸಲಹೆಗಾರರನ್ನು ಸರ್ಕಾರ ನೇಮಿಸಬೇಕು.
• ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಿರುವ ನೀಟ್ (Neat) ವ್ಯವಸ್ಥೆಯಿಂದ ಹೊರ ಬರಬೇಕು.
• ಸಾಂಸ್ಕೃತಿಕ, ಸಾಹಿತ್ಯಿಕ ಸಂಸ್ಥೆಗಳಿಗೆ ಜಾತ್ಯತೀತ ವ್ಯಕ್ತಿಗಳ ನೇಮಕ ಮಾಡಬೇಕು
• ಬರಗೂರು ರಾಮಚಂದ್ರಪ್ಪ (Baraguru Ramachandrappa) ಸಮಿತಿಯ ಪಠ್ಯಗಳನ್ನೇ ಮುಂದುವರಿಸಬೇಕು.
• ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ (College) ಮೀಸಲಾತಿ ಅನುಷ್ಠಾನ ಸಮರ್ಪಕವಾಗಿ ಆಗಬೇಕು.
• ಬಿಜೆಪಿ (BJP) ಸರ್ಕಾರ ಘೋಷಿಸಿರುವ ಪ್ರಶಸ್ತಿ, ಪುರಸ್ಕಾರಗಳನ್ನು ಕೂಡಲೇ ತಡೆಹಿಡಿಯಬೇಕು. ಹೆಣ್ಣುಮಕ್ಕಳ ದೌರ್ಜನ್ಯ ಅಧ್ಯಯನ ಸಮಿತಿಯ ವರದಿಯ ಶಿಫಾರಸುಗಳ ಜಾರಿ ಮಾಡಬೇಕು.
• ಕನ್ನಡ ಸಾಹಿತ್ಯ ಪರಿಷತ್ತಿನ ಸ್ವಾಯತ್ತತೆ ರಕ್ಷಣೆಗೆ ಮಸೂದೆ ಮಂಡಿಸಬೇಕು.


• ಹಿಂದಿನ ಬಿಜೆಪಿ ಸರ್ಕಾರ ಪರಿಷ್ಕರಣೆ ಮಾಡಿದ್ದ ಪಠ್ಯ ತೆಗೆಯಬೇಕು.
• ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಗೊಳಿಸಬೇಕು.
• ಹೊಸ ಶಿಕ್ಷಣ ವ್ಯವಸ್ಥೆಯನ್ನು ರೂಪಿಸಿ ಕೊಡಬೇಕು.
• ಶಾಲಾ ಮಕ್ಕಳಿಗೆ ಸಮವಸ್ತ್ರ, ಪುಸ್ತಕ, ಶೂ, ಸಾಕ್ಸ್ ಒದಗಿಸಬೇಕು.
• ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡುವ ಕುರಿತ ಸರ್ಕಾರಿ ಆದೇಶವನ್ನು ಹಿಂಪಡೆಯಬೇಕು.
• ಸೈಕಲ್ (Cycle) ಭಾಗ್ಯ ಮರು ಜಾರಿಗೊಳಿಸಿ, ಶಾಲಾ ಮಕ್ಕಳಿಗೆ ಸೈಕಲ್ ವಿತರಿಸಬೇಕು.
• ಸಾಂಸ್ಕೃತಿಕ ಪ್ರತಿಷ್ಠಾನಗಳ ಅಧ್ಯಕ್ಷರು ಹಾಗೂ ಸದಸ್ಯರನ್ನು ಕೂಡಲೇ ಬದಲಾಯಿಬೇಕು.
• ಶಾಲೆಗಳಲ್ಲಿ ಬಿಸಿಯೂಟದ ಮಾದರಿಯಲ್ಲಿ ಬೆಳಗಿನ ಉಪಾಹಾರ ಒದಗಿಸಬೇಕು

Exit mobile version