Bangalore : ವಿಧಾನ ಪರಿಷತ್ ಸದಸ್ಯ (Member of Legislative Council) ಹಾಗೂ ಬಿಜೆಪಿ ಹಿರಿಯ ನಾಯಕ ಸಿಟಿ ರವಿ (CT Ravi) ಅವರ ಬಂಧನ ಖಂಡಿಸಿ “ಪ್ರಜಾಪ್ರಭುತ್ವ ಉಳಿಸಿ ಗೂಂಡಾ ಕಾಂಗ್ರೆಸ್ ತೊಲಗಿಸಿ” (“Save Democracy and Get Rid of Goon Congress”) ಎಂಬ ಬೃಹತ್ ಜನಾ೦ದೋಲನವನ್ನು ರಾಜ್ಯಾದ್ಯಂತ ನಡೆಸಲು ರಾಜ್ಯ ಬಿಜೆಪಿ (State BJP) ಅಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಅವರು ಕರೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ (Social media) ಪೋಸ್ಟ್ ಮಾಡಿರುವ ಅವರು, ತುರ್ತು ಪರಿಸ್ಥಿತಿ (emergency situation) ಹೇರಿದ ಕುಖ್ಯಾತಿಯ ಕಾಂಗ್ರೆಸ್,ಕರ್ನಾಟಕದಲ್ಲಿ (Congress in Karnataka) ಇದೀಗ ಪರೋಕ್ಷ ತುರ್ತು ಪರಿಸ್ಥಿತಿ ಹೇರಲು ಹೊರಟಿದೆ,‘ಪ್ರಜಾಪ್ರಭುತ್ವ ದೇಗುಲ’ (‘Temple of Democracy’) ವೆನಿಸಿರುವ ಸುವರ್ಣ ಸೌಧಕ್ಕೆ ಗೂಂಡಾಗಳನ್ನು ಛೂ ಬಿಟ್ಟು ಜನಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸುವ ದುಷ್ಕೃತ್ಯ ನಡೆಸಲು ಪ್ರಚೋದಿಸಿ ಇದೀಗ ಹಲ್ಲೆ ಯತ್ನಕ್ಕೊಳಗಾದ ನಮ್ಮ ಹಿರಿಯ ಶಾಸಕ ಸಿಟಿ ರವಿ (CT Ravi) ಅವರನ್ನೇ ಬಂಧಿಸಿ ಪೊಲೀಸ್ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಗೂಂಡಾ ಸಾಮ್ರಾಜ್ಯವನ್ನು ನಿರ್ಮಿಸುತ್ತಿದೆ. ಸದನದ ಒಳಗಿನ ಘಟನೆಯನ್ನು ಉಲ್ಲೇಖಿಸಿ ದೂರು ಪಡೆದುಕೊಂಡು ಸಿ.ಟಿ.ರವಿ ಅವರನ್ನು ಬಂಧಿಸಿರುವ ಕ್ರಮ ಪ್ರಜಾಪ್ರಭುತ್ವ (Arrested action is democracy) ವ್ಯವಸ್ಥೆಗೆ ಕುಣಿಕೆ ಬಿಗಿಯುವ ಸರ್ವಾಧಿಕಾರಿ ಧೋರಣೆಯಾಗಿದೆ, ವಿಧಾನಮಂಡಲದ ಘನತೆ ಹಾಗೂ ಅದರ ಸಾಂವಿಧಾನಿಕ ಶಕ್ತಿಯನ್ನು ಮಣ್ಣು ಪಾಲಾಗಿಸುವ ದಾರ್ಷ್ಟ್ಯತನ ಮೆರೆಯಲು ಕಾಂಗ್ರೆಸ್ (Congress) ಹೊರಟಿದೆ ಎಂದು ಟೀಕಿಸಿದ್ದಾರೆ.
ಮತ್ತೊಂದು ತುರ್ತು ಪರಿಸ್ಥಿತಿ (Emergency situation) ಹೇರಿಕೆಯ ಪರೋಕ್ಷ ಹವಣಿಕೆಯಲ್ಲಿರುವ ಕಾಂಗ್ರೆಸ್ ಸರ್ಕಾರದ (Congress Government) ವಿರುದ್ಧ ಕರ್ನಾಟಕದಲ್ಲಿ “ಪ್ರಜಾಪ್ರಭುತ್ವ ಉಳಿಸಿ ಗೂಂಡಾ ಕಾಂಗ್ರೆಸ್ ತೊಲಗಿಸಿ” ಎಂಬ ಬೃಹತ್ ಜನಾ೦ದೋಲನ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ನಾಳೆ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ (BJP) ಪ್ರತಿಭಟನೆ ನಡೆಸಲು ಕರೆ ನೀಡಲಾಗಿದೆ. ಸಿ.ಟಿ. ರವಿ ಅವರನ್ನು ಬೇಷರತ್ ಬಿಡುಗಡೆ ಮಾಡಿ ಅವರ ಮೇಲೆ ದೌರ್ಜನ್ಯ ನಡೆಸಿದ ಕಾಂಗ್ರೆಸ್ (Congress) ಗೂಂಡಾಗಳನ್ನು ಜೈಲಿಗೆ ಅಟ್ಟುವ ವರೆಗೂ ಬಿಜೆಪಿ ಹೋರಾಟ ನಿಲ್ಲದು. ಶಾಸಕ ಸಿ ಟಿ ರವಿಯವರ ಮೇಲೆ ಸುವರ್ಣ ಸೌಧದಲ್ಲಿ ಮಾರ್ಷಲ್ ಗಳ ಸುಮ್ಮುಖದಲ್ಲೇ ಹೊರಗಿನ ಗೂಂಡಾಗಳಿಂದ ನಡೆದಿರುವ ದೌರ್ಜನ್ಯ (Atrocity) ಹಾಗೂ ಮಾರಣಾಂತಿಕ ಹಲ್ಲೆಯತ್ನದ ಕುರಿತು ಉಭಯ ಸದನಗಳ ಸ್ಪೀಕರ್ ಗಳು ತಮ್ಮ ನಿಲುವು ಪ್ರಕಟಿಸಿ ಕ್ರಮ ಕೈಗೊಳ್ಳಬೇಕು, ರಾಜ್ಯಪಾಲರು ಈ ಕೂಡಲೇ ಮಧ್ಯ ಪ್ರವೇಶಿಸಬೇಕೆಂದು ಒತ್ತಾಯಿಸುವೆ ಎಂದಿದ್ದಾರೆ.