ಅಹಮದಾಬಾದ್ ಸೆ 12 : ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ದಿಢೀರ್ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಗುಜರಾತ್ನ ಮುಂದಿನ ಮುಖ್ಯಮಂತ್ರಿ ಯಾರು ಎಂಬ ದೊಡ್ಡ ಕುತೂಹಲ ಸೃಷ್ಠಿಯಾಗಿತ್ತು. ಈ ಗೊಂದಲಕ್ಕೆ ಇದೀಗ ತೆರೆ ಬಿದ್ದಿದ್ದು, ಹಿರಿಯ ನಾಯಕ ಭೂಪೇಂದ್ರ ಪಟೇಲ್ ಅವರನ್ನು ಗುಜರಾತ್ನ ಮುಂದಿನ ಮುಖ್ಯಮಂತ್ರಿ ಎಂದು ಬಿಜೆಪಿ ಘೋಷಿಸಿದೆ.
ಗುಜರಾತ್ನ ಘಾಟ್ಲೋಡಿಯಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಭೂಪೇಂದ್ರ ಪಟೇಲ್ ಅವರು ಈ ಹಿಂದೆ ಅಹ್ಮದಾಬಾದ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ, ಅಮದ್ವಾಡ ಮುನ್ಸಿಪಲ್ ಕಾರ್ಪೋರೇಶನ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.
ವಿಜಯ್ ರೂಪಾನಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಪ್ರಫುಲ್ ಪಟೇಲ್ ಸೇರಿ ಇನ್ನೂ ಹಲವು ಪ್ರಮುಖ ನಾಯಕರ ಹೆಸರುಗಳು ಕೇಳಿಬಂದಿದ್ದವು. ಆದರೆ ಅಂತಿಮವಾಗಿ ಬಿಜೆಪಿ ಭೂಪೇಂದ್ರ ಪಟೇಲ್ ಅವರನ್ನು ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಿದ್ದು, ಅವರು ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.