ಸಂತೋಷ್ ಪಾಟೀಲ್ ಮೂಲತಃ ಕಾಂಗ್ರೆಸ್ ಕಾರ್ಯಕರ್ತ ಎಂದ ಬಿಜೆಪಿ!

bjp

ರಾಜ್ಯದಲ್ಲಿ ಗುತ್ತಿಗೆದಾರ, ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಉಡುಪಿ ಜಿಲ್ಲೆಯ ಲಾಡ್ಜ್‍ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟ ಸಂತೋಷ್ ಪಾಟೀಲ್, ತನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ನೇರ ಕಾರಣ. 40% ಕಮೀಷನ್ ಹಿಂಸೆ ನೀಡುತ್ತಿದ್ದರು ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಸಂತೋಷ್ ಸಹೋದರ ಸಚಿವ ಸ್ಥಾನದಿಂದ ಈಶ್ವರಪ್ಪನನ್ನು ವಜಾಗೊಳಿಸಬೇಕು. ಈ ಮೂಲಕ ಸಂತೋಷ್ ಸಾವಿಗೆ ನ್ಯಾಯ ಕೊಡಿಸಿ ಎಂದು ಅಂಗಲಾಚಿ ಬೇಡಿಕೊಂಡಿದ್ದಾರೆ.

ಆದ್ರೆ ಈ ಬಗ್ಗೆ ಬಿಜೆಪಿ ನಕಾರಾತ್ಮಕ ಹೇಳಿಕೆಗಳನ್ನು ಕೊಡುತ್ತಿದೆ, ಎಲ್ಲೂ ಕೂಡ ಸ್ಪಷ್ಟವಾಗಿ ಈಶ್ವರಪ್ಪ ರಾಜೀನಾಮೆ ಬಗ್ಗೆ ಹೇಳುತ್ತಿಲ್ಲ! ಸಚಿವ ಈಶ್ವರಪ್ಪನವರು ನಾನು ರಾಜೀನಾಮೆ ಕೊಡುವ ಮಾತೇ ಇಲ್ಲ, ತನಿಖೆ ಮಾಡಲಿ ಉತ್ತರ ಹೊರಬರಲಿ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲೇಬೇಕು ಎಂಬ ಕೂಗು ಜೋರಾಗುತ್ತಿದೆ. ಸದ್ಯ ಪರಿಸ್ಥಿತಿ ತೀವ್ರ ಉದ್ವಿಗ್ನಗೊಂಡಿದ್ದು, ಈ ಮಧ್ಯೆ ಬಿಜೆಪಿ ಕರ್ನಾಟಕ ತನ್ನ ಟ್ವಿಟರ್ ಖಾತೆಯಲ್ಲಿ ಸಂತೋಷ್ ಪಾಟೀಲ್ ವಿರುದ್ಧ ಆರೋಪಗಳನ್ನು ಎಸಗಿದೆ.

ಹೌದು, ಸರಣಿ ಟ್ವೀಟ್‍ಗಳನ್ನು ಮಾಡಿರುವ ಬಿಜೆಪಿ, ” ಗುತ್ತಿಗೆದಾರ ಸಂತೋಷ ಪಾಟೀಲ್ ಅವರ ಸಾವಿಗೆ ನ್ಯಾಯ ಸಿಗಲೇಬೇಕು. ನ್ಯಾಯದ ಜೊತೆಗೆ ಸಾವಿನ ಹಿಂದಿರುವ ರಹಸ್ಯಗಳಿಗೂ ಉತ್ತರ ಸಿಗಬೇಕು. ಮೃತ ಸಂತೋಷ್ ದೆಹಲಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿದ್ದ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಇದೇ ವಿಷಯವಾಗಿ ಪತ್ರಿಕಾಗೋಷ್ಟಿ ನಡೆಸಿದ್ದರು.

ಇದು ಕಾಕತಾಳಿಯವಾಗಲು ಸಾಧ್ಯವಾ? ಎಂದು ಹೇಳಿ ಬಳಿಕ, 40% ಕಮಿಷನ್ ಆರೋಪ ಪಕ್ಷ ಸೃಷ್ಟಿಸಿದ ಬಹುದೊಡ್ಡ ಟೂಲ್ ಕಿಟ್. ಈ ಷಡ್ಯಂತ್ರವನ್ನು ಘೋಷಿಸುವುದಕ್ಕಾಗಿ ಕಾಂಗ್ರೆಸ್ ಖಳನಾಯಕರು ಮಗದೊಂದು ಪ್ರಹಸನ ಹೆಣೆದರೇ? ಸಾವಿನ ರಾಜಕಾರಣಕ್ಕೆ ಕಾಂಗ್ರೆಸ್ ಮುನ್ನುಡಿ ಬರೆಯುತ್ತಿದೆಯೇ? ಎಂದು ಪರೋಕ್ಷವಾಗಿ ಚಾವಟಿ ಬೀಸಿದ್ದಾರೆ.

Exit mobile version