ಖರ್ಗೆ(Kharge) ಜೆಡಿಎಸ್ ಪಕ್ಷದ(JDS Party) ಪರವಾಗಿ ವಕಾಲತ್ತು ಆರಂಭಿಸಿದಾಗಲೇ ಡಿ.ಕೆ.ಶಿವಕುಮಾರ್(DK Shivkumar) ಮತ್ತು ಸಿದ್ದರಾಮಯ್ಯ(Siddaramaiah) ತಮ್ಮ ವೈಮನಸ್ಸು ಮರೆಯುವ ಮಾತುಗಳನ್ನಾಡುತ್ತಿದ್ದಾರೆ.

ಅತಂತ್ರ ಫಲಿತಾಂಶ ನಿರ್ಮಾಣವಾದಲ್ಲಿ ಖರ್ಗೆ ಮುಖ್ಯಮಂತ್ರಿಯಾಗುವ ಭಯವೇ? ದಲಿತರನ್ನು ಕಟ್ಟಿ ಹಾಕಲು ಈಗಲೇ ರಣ ತಂತ್ರವೇ? ಎಂದು ರಾಜ್ಯ ಬಿಜೆಪಿ(State BJP) ಪ್ರಶ್ನಿಸಿದೆ. ಕಾಂಗ್ರೆಸ್ ಪಕ್ಷದಲ್ಲಿ ದಲಿತ ನಾಯಕರನ್ನು ವ್ಯವಸ್ಥಿತವಾಗಿ ತುಳಿಯಲಾಗುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದರೆ, ಜೆಡಿಎಸ್ ಬೆಂಬಲದೊಂದಿಗೆ ಮಲ್ಲಿಕಾರ್ಜುನ್ ಖರ್ಗೆ(Mallikarjun Kharghe) ಮುಖ್ಯಮಂತ್ರಿಯಾಗುವ ಸಾಧ್ಯತೆ ಹೆಚ್ಚು. ಹೀಗಾಗಿ ಖರ್ಗೆ ಮುಖ್ಯಮಂತ್ರಿಯಾಗುವ ಭಯ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯನವರಿಗೆ ಕಾಡುತ್ತಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಕಾಂಗ್ರೆಸ್ ಪಕ್ಷದಲ್ಲಿದ್ದಾಗ ಸಿಎಂ ಇಬ್ರಾಹಿಂ(CM Ibrahim) ಮಾತುಗಳನ್ನು ಕಾಂಗ್ರೆಸ್ ನಾಯಕರು ನಿರ್ಲಕ್ಷಿಸಿದರು. ಇಂದು ಅದೇ ಇಬ್ರಾಹಿಂ ಮಾತಿಗೆ ಬೆಲೆಕೊಡಲೇ ಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ. ಕಾಂಗ್ರೆಸ್ ಈಗ, ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಸೋಲಿಸುತ್ತದೋ ಅಥವಾ ಅಲ್ಪಸಂಖ್ಯಾತ ರಾಜ್ಯಾಧ್ಯಕ್ಷರ ಮಾತನ್ನು ತಿರಸ್ಕರಿಸುತ್ತದೋ? ನವ ಸಂಕಲ್ಪ ಶಿಬಿರಕ್ಕೆ ರಾಜ್ಯ ಕಾಂಗ್ರೆಸ್ ಪಕ್ಷದ ಅನೇಕ ನಾಯಕರು ಕೈಕೊಟ್ಟಿದ್ದಾರೆ. ಕಾಂಗ್ರೆಸ್ ನವ ಸಂಕಲ್ಪ ಶಿಬಿರದಲ್ಲಿ ಅಸಮಾಧಾನದ ಬೆಂಕಿ ಹತ್ತಿಕೊಂಡಿದೆ.

ಈ ಬೆಂಕಿಯ ಕಾವಿನಿಂದ 2023 ಚುನಾವಣೆಯಲ್ಲಿ ಕಾಂಗ್ರೆಸ್ ಹೊತ್ತುರಿದು, ‘ಕಾಂಗ್ರೆಸ್ ಮುಕ್ತ ಕರ್ನಾಟಕ’ ಆಗಲಿದೆ ಎಂದು ಬಿಜೆಪಿ ಕಾಂಗ್ರೆಸ್ ಪಕ್ಷದ ಆಂತರಿಕ ಕಲಹವನ್ನು ಉಲ್ಲೇಖಿಸಿ ವ್ಯಂಗ್ಯವಾಡಿದೆ.