ಸಾಮಾನ್ಯ ಜನರ ಜೇಬನ್ನು ಖಾಲಿ ಮಾಡುತ್ತಿದೆ ಬಿಜೆಪಿ ಸರ್ಕಾರ; ರಾಹುಲ್‌ ಗಾಂಧಿ

ನವದೆಹಲಿ, ಫೆ. 22: ದೇಶದ ಜನರ ಜೇಬುಗಳನ್ನು ಖಾಲಿ ಮಾಡುವ ಮಹತ್ತರ, ಘನ ಕಾರ್ಯಗಳನ್ನು ಕೇಂದ್ರದ ಹಾಗೂ ಮೋದಿ ನೇತೃತ್ವದ ಬಿಜೆಪಿ ಸರಕಾರ ಕೆಲಸವಾಗಿದೆ ಎಂದು ರಾಹುಲ್ ಗಾಂಧಿ ದೂರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಪೆಟ್ರೋಲ್ ಪಂಪ್‌ನಲ್ಲಿ ನಿಮ್ಮ ಕಾರನ್ನು ಮರು ಇಂಧನಗೊಳಿಸುವಾಗ, ವೇಗವಾಗಿ ಏರುತ್ತಿರುವ ಮೀಟರ್ ಅನ್ನು ನೋಡಿದಾಗ, ಕಚ್ಚಾ ತೈಲದ ಬೆಲೆ ಹೆಚ್ಚಾಗದೇ ಇಳಿದಿದೆ ಎಂಬುದನ್ನು ನೆನಪಿನಲ್ಲಿಡಬೇಕು. ಮೋದಿ ಸರ್ಕಾರ ಜನರ ಜೇಬು ಖಾಲಿ ಮಾಡುವ ದೊಡ್ಡ ಕೆಲಸವನ್ನು ಮಾಡುತ್ತಿದೆ ಎಂದೂ ಕಿಡಿಕಾರಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಇಂಧನ ಬೆಲೆಗಳು ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ 100 ರೂ.ಗಳ ಗಡಿಯನ್ನುದಾಟಿವೆ . ಹೆಚ್ಚಳಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ನಿರಂತರವಾಗಿ ಕೇಂದ್ರವನ್ನು ಗುರಿಯಾಗಿಸಿಕೊಂಡಿದ್ದರೆ, ಆಮದು ಅವಲಂಬನೆಯನ್ನು ಕಡಿಮೆ ಮಾಡಿಲ್ಲ ಎಂದು ಪ್ರಧಾನಿ ಮೋದಿ ಇದಕ್ಕೆ ಹಿಂದಿನ ಸರ್ಕಾರಗಳನ್ನೇ ದೂಷಿಸಿದ್ದರು. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿಗೆ ಪತ್ರ ಬರೆದು ಅಬಕಾರಿ ಸುಂಕವನ್ನು ಭಾಗಶಃ ಹಿಂತೆಗೆದುಕೊಳ್ಳುವ ಮೂಲಕ ಇಂಧನ ಬೆಲೆ ಕಡಿಮೆ ಮಾಡಿ ಜನರ ಭಾರ ಕಡಿಮೆ ಮಾಡಬೇಕು ಎಂದೂ ಆಗ್ರಹಪಡಿಸಿದ್ದರು.

Exit mobile version