New Delhi: ನವದೆಹಲಿಯ (New Delhi) ಪ್ರಧಾನಿ ಕಚೇರಿಯಲ್ಲಿ ಮೋದಿಯನ್ನು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ (H D Devegowda) ಜೊತೆಗೆ ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ. ರೇವಣ್ಣ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ, ಶಾಸಕ ಸಿ.ಎನ್.ಬಾಲಕೃಷ್ಣ ಇದ್ದು, ಜೆಡಿಎಸ್ ಪಕ್ಷವು ಬಿಜೆಪಿ (BJP) ಜೊತೆಗೆ ಅಧಿಕೃತವಾಗಿ ಸೇರ್ಪಡೆಗೊಂಡ ಬಳಿಕ ಇದೇ ಮೊದಲ ಭಾರಿಗೆ ಭೇಟಿಯಾಗಿದ್ದಾರೆ.

ಜೆಡಿಎಸ್ (JDS) ನಾಯಕರ ಭೇಟಿ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ‘ರಾಷ್ಟ್ರದ ಪ್ರಗತಿಗೆ ದೇವೇಗೌಡರ ಅನುಕರಣೀಯ ಕೊಡುಗೆಯನ್ನು ಭಾರತವು ಬಹಳವಾಗಿ ಗೌರವಿಸುತ್ತದೆ. ವೈವಿಧ್ಯಮಯ ನೀತಿ, ವಿಷಯಗಳ ಕುರಿತು ಅವರ ಆಲೋಚನೆ ಹಾಗೂ ಒಳನೋಟ ದೂರದೃಷ್ಠಿಯಿಂದ ಕೂಡಿದೆ’ ಎಂದು ಬರೆದುಕೊಂಡಿದ್ದಾರೆ.
ಪ್ರಧಾನಿ ಭೇಟಿ ಕುರಿತು ಸಂಸತಸ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ‘ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ (Narendra Modi) ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ. ದೇವೇಗೌಡರ ನಡುವಿನ ಬಾಂಧವ್ಯ, ಅವರಿಬ್ಬರೂ ಪರಸ್ಪರ ಇರಿಸಿಕೊಂಡಿರುವ ಪ್ರೀತಿ, ವಿಶ್ವಾಸವನ್ನು ಕಂಡು ನನ್ನ ಮನಸ್ಸು ಉಕ್ಕಿ ಬಂದಿದೆ.
ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ (Karnataka) ಸೀಟು ಹಂಚಿಕೆ ವಿಚಾರವಾಗಿ ಜೆಡಿಎಸ್ ನಿಯೋಗವು ಮೋದಿಯನ್ನು ಭೇಟಿಯಾಗಿದ್ದು, ಸಂಸತ್ ಭವನದಲ್ಲಿರುವ ಪ್ರಧಾನಿಗಳ ಕಾರ್ಯಾಲಯದಲ್ಲಿ ನಡೆದ ಈ ಭೇಟಿಯು ಅತ್ಯಂತ ಆವಿಸ್ಮರಣೀಯ. ಮಾನ್ಯ ಪ್ರಧಾನಮಂತ್ರಿಗಳು ನಮ್ಮ ಬಗ್ಗೆ ತೋರಿದ ಪ್ರೀತಿ, ವಿಶ್ವಾಸ, ವಾತ್ಸಲ್ಯಕ್ಕೆ ನಾನು ಆಭಾರಿ’ ಎಂದು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.

ಮೋದಿ ಭೇಟಿ ಬಳಿಕ ಮಾತನಾಡಿದ ಹೆಚ್ ಡಿ ಕೆ:
ಪ್ರಧಾನಿ ನರೇಂದ್ರ ಮೋದಿ ಅವರು ದೇವೆೇಗೌಡರ ಬಗ್ಗೆ ಭಾವನಾತ್ಮಕ ಸಂಬಂಧ ಹೊಂದಿದ್ದಾರೆ. ನಮ್ಮ ಕುಟುಂಬದ ಬಗ್ಗೆ ಪ್ರಧಾನಿಗಳು ಇಟ್ಟ ವಿಶ್ವಾಸ ಇವತ್ತು ಹಾಗೇ ಇದೆ. ಈ ಹಿಂದೆಯೂ ಸಲಹೆ ನೀಡಿದ್ರು. ನೀನು ಒಳ್ಳೆ ಕೆಲಸ ಮಾಡಿದ್ರು ಗೌರವ ಸಿಗುತ್ತಿಲ್ಲ. ನೀನು ಯಾಕೆ ಹೀಗೆ ಈ ರೀತಿಯ ಕೆಲಸ ಮಾಡಿದೆ ಅಂತ ಹೇಳಿದ್ರು ಎಂದು ಹೆಚ್ಡಿಕೆ ಅವರು ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು.
2024ರ ಚುನಾವಣೆ ನಂತರ ಕಾಂಗ್ರೆಸ್ (Congress) ಸರ್ಕಾರ ಬೀಳುತ್ತೆ ಎಂಬ ವಿಚಾರಕ್ಕೆ ಹೆಚ್.ಡಿ. ಕುಮಾರಸ್ವಾಮಿ (H D Kumaraswamy) ಅವರು ಮಾರ್ಮಿಕವಾದ ಮಾತನಾಡಿದ್ದಾರೆ. ಪ್ರಧಾನಿ ಮೋದಿ ಬಳಿ ಹೆಚ್.ಡಿ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು ಮೈತ್ರಿ ರಾಜಕೀಯದ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದು, ಲೋಕಸಭಾ ಚುನಾವಣೆಯಲ್ಲಿ 28 ಲೋಕಸಭಾ ಕ್ಷೇತ್ರವನ್ನು ನಾವು ಗೆಲ್ಲಬೇಕು. ಸೀಟು ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎನ್ನಲಾಗಿದೆ.
ಕರ್ನಾಟದ ರಾಜಕೀಯದಲ್ಲಿ ಮಹಾರಾಷ್ಟ್ರದ (Maharashtra) ರಾಜಕೀಯ ಕ್ರಾಂತಿ ಮಾಡಿದ ಏಕನಾಥ್ ಶಿಂಧೆಯು ಇದ್ದಾರೆ, ಅಜಿತ್ ಪವಾರ್ ಸಹ ಇದ್ದಾರೆ. ಯಾರು ಮೊದಲು ಮುಂದೆ ಬರ್ತಾರೆ ನೋಡಬೇಕು. ಸದ್ಯದ ಪರಿಸ್ಥಿತಿಯಲ್ಲಿ ಏನ್ ಬೇಕಾದ್ರು ಆಗಬಹುದು ಎಂದಿದ್ದಾರೆ.
ಭವ್ಯಶ್ರೀ ಆರ್ ಜೆ