Visit Channel

ಬಿಜೆಪಿ, ಜೆಡಿಎಸ್ ಎಲ್ಲರೂ ನನ್ನ ಮೇಲೆಯೇ ಬೀಳುತ್ತಾರೆ, ನನ್ನ ರಕ್ಷಣೆಗೆ ಜನರೇ ಬರಬೇಕು: ಸಿದ್ದರಾಮಯ್ಯ

WhatsApp Image 2021-01-07 at 8.30.17 PM

ಚಿಕ್ಕಮಗಳೂರು, ಜ. 08: ಬಿಜೆಪಿ, ಜೆಡಿಎಸ್ ಎಲ್ಲರೂ ನನ್ನ ಮೇಲೆಯೇ ಬೀಳುತ್ತಾರೆ, ನನ್ನ ರಕ್ಷಣೆಗೆ ಜನರೇ ಬರಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಚೌಳ ಹಿರಿಯೂರಿನಲ್ಲಿ ಆಯೋಜಿಸಿದ್ದ ಶ್ರೀ ಭಕ್ತ ಕನಕದಾಸರ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾನು ಹಳ್ಳಿಯಿಂದ ಬಂದವನು, ಮಾತು ಸ್ವಲ್ಪ ಒರಟು, ಹಳ್ಳಿಭಾಷೆಯಲ್ಲಿ ಮಾತಾಡ್ತೇನೆ. ಇತ್ತೀಚೆಗೆ ನಾನು ಮಾತಾಡಿದ್ದೆಲ್ಲವನ್ನೂ ವಿವಾದ ಮಾಡುವುದು ಚಾಳಿಯಾಗಿಬಿಟ್ಟಿದೆ. ನಾ ಒಬ್ನೇ ಸಿಕ್ಕವನು ಟೀಕೆ ಮಾಡೋಕೆ, ಬಿಜೆಪಿ, ಜೆಡಿಎಸ್ ಎಲ್ಲರೂ ನನ್ನ ಮೇಲೆಯೇ ಬೀಳುವವರು, ನನ್ನ ರಕ್ಷಣೆಗೆ ಜನರೇ ಬರಬೇಕು.

ದನದ ಮಾಂಸ ತಿನ್ಬೇಕೆಂದರೆ ತಿನ್ತೀನಿ, ನೀ ಯಾವನಯ್ಯಾ ಕೇಳೋಕೆ ಎಂದು ಕೇಳಿದ್ದು ನಿಜ. ನಾನು ಈ ವರೆಗೆ ದನದ ಮಾಂಸ ತಿಂದಿಲ್ಲ, ತಿನ್ನುವುದೂ ಇಲ್ಲ. ಗೋಹತ್ಯೆ ನಿಷೇಧ ಕಾಯ್ದೆಯ ಹಿಂದಿನ ಬಿಜೆಪಿಯ ಆತ್ಮವಂಚಕ ನಡವಳಿಕೆಯನ್ನು ಪ್ರಶ್ನಿಸಲು ಆ ರೀತಿ ಹೇಳಿದ್ದೆ. ಇದರಲ್ಲೇನಿದೆ ವಿವಾದ?

ಓಟು ಹಾಕಲು ಊರಿಗೆ ಹೋಗಿದ್ದಾಗ ಕಾರ್ಯಕರ್ತರ ಮನೆಗೆ ಊಟಕ್ಕೆ ಹೋಗಿದ್ದೆ. ಅಲ್ಲಿ ಕೋಳಿ ಮಾಡಿದ್ದರು. ನಮ್ಮೂರ ಯುವಕನೊಬ್ಬ ಇಂದು ಹನುಮಜಯಂತಿ ಮಾಂಸ ತಿನ್ನೋದಿಲ್ಲ ಎಂದು ಹೇಳಿದಾಗ, ಹನುಮ ಜಯಂತಿ ದಿನ ಕೆಲವು ಕಡೆ ಮರಿ ಹೊಡೆಯುತ್ತಾರೆ, ಮಾಂಸ ತಿಂದರೆ ತಪ್ಪೇನು ಎಂದು ಕೇಳಿದ್ದೆ. ಅದನ್ನೂ ಕೂಡಾ ವಿವಾದ ಮಾಡಿಬಿಟ್ಟರು ಎಂದು ಹೇಳಿದರು.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.