ಸಂವಿಧಾನ ಬದಲಾಯಿಸಬೇಕೆಂದರೆ ಬಿಜೆಪಿ ಅಧಿಕಾರಕ್ಕೆ ಬರಬೇಕೆಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ನಾಯಕಿ

New Delhi: ಸಂವಿಧಾನ ಬದಲಾವಣೆಗೆ ಬಿಜೆಪಿ (BJP) ಅಧಿಕಾರಕ್ಕೆ ಬರಬೇಕು. ಅದಕ್ಕಾದರೂ ಜನರ ಬೆಂಬಲ ಬೇಕು. 400 ಸ್ಥಾನಗಳನ್ನು ಬಿಜೆಪಿ ಪಕ್ಷ ಗೆಲ್ಲಬೇಕು ಎಂದು ಬಿಜೆಪಿ ನಾಯಕಿ ಜ್ಯೋತಿ ಮಿರ್ಧಾ (Jyothi Mirdha) ವಿವಾದಾತ್ಮಕ ಹೇಳಿಕೆ ನೀಡಿ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕಾಂಗ್ರೆಸ್‌ (Congress) ತಮ್ಮಿಷ್ಟದಂತೆ ಬದಲಾಯಿಸಿರುವ ಸಂವಿಧಾನಕ್ಕೆ ತಿದ್ದುಪಡಿ ಮಾಡಲು ಈ ಬಾರಿ ಬಿಜೆಪಿ 400 ಸ್ಥಾನ ಗೆಲ್ಲುವುದು ಅಗತ್ಯ ಎಂದು ಹೇಳಿಕೆ ನೀಡಿ ಭಾರೀ ವಿವಾದ ಸೃಷ್ಟಿಸಿದ್ದ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆಯಂತೆ (Ananthakumar Hegde) ಇದೀಗ ಜ್ಯೋತಿ ಮಿರ್ಧಾ ಕೂಡ ಹೇಳಿಕೆ ನೀಡಿದ್ದಾರೆ.

ರಾಜಸ್ಥಾನದ (Rajasthan) ನಾಗೋರ್‌ನ ಬಿಜೆಪಿ ಅಭ್ಯರ್ಥಿ ಜ್ಯೋತಿ ಮಿರ್ದಾ ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ಮುಂದಿನ ದಿನಗಳಲ್ಲಿ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಿದೆ. ಈ ನಿರ್ಧಾರ ತೆಗೆದುಕೊಳ್ಳಲು ಸಂವಿಧಾನಕ್ಕೆ ತಿದ್ದುಪಡಿ ತರಬೇಕಿದೆ. ತಿದ್ದುಪಡಿ ಮಾಡಬೇಕಾದರೆ ಉಭಯ ಸದನದಲ್ಲಿ ಪ್ರಚಂಡ ಬಹುಮತ ಬೇಕಾಗಿದೆ. ಪ್ರಸ್ತುತ ಎನ್‌ಡಿಎಗೆ (NDA) ಲೋಕಸಭೆಯಲ್ಲಿ ಮಾತ್ರ ಬಹುಮತವಿದ್ದು, ರಾಜ್ಯಸಭೆಯಲ್ಲಿಯೂ ಬಹುಮತ ಸಿಕ್ಕರೆ ಸಂವಿಧಾನವನ್ನೇ ತಿದ್ದುಪಡಿ ಮಾಡಬಹುದು ಎಂದು ಹೇಳಿದ್ದಾರೆ.

ಬಿಜೆಪಿ (BJP) ಮತ್ತು ಪ್ರಧಾನಿ ಮೋದಿಯವರು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ದ್ವೇಷಿಸುತ್ತಾರೆ ಎಂಬುದು ಈ ಹೇಳಿಕೆಗಳಿಂದ ಸ್ಪಷ್ಟವಾಗಿದೆ. ಬಾಬಾಸಾಹೇಬರು ನೀಡಿದ ಸಂವಿಧಾನವನ್ನು ರದ್ದುಪಡಿಸುವ ಮೂಲಕ ಬಿಜೆಪಿ ಜನರ ಹಕ್ಕುಗಳನ್ನು ಕಿತ್ತುಕೊಳ್ಳಲು ಹೊರಟಿದೆ ಎಂದು ಹಲವರು ಜನ ಕಿಡಿ ಕಾರಿದ್ದಾರೆ. ಇನ್ನು ಈ ಕುರಿತಾಗಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್‌ (Jairam Ramesh), ಇದೆಲ್ಲಾ ಬಿಜೆಪಿಯ ಮಹಾಸೂತ್ರಧಾರ ಪ್ರಧಾನಿ ಮೋದಿಯ (Modi) ಪ್ಲಾನ್ ಇದು ಬಿಜೆಪಿಯ ಉದ್ದೇಶಪೂರ್ವಕ ತಂತ್ರ ಒಂದು ವೇಳೆ ಅಧಿಕಾರಕ್ಕೆ ಬಂದರೆ ಸಂವಿಧಾನ ತಿದ್ದುಪಡಿ (Constitution Amendment) ಮಾಡೋದ್ರಲ್ಲಿ ಅನುಮಾನವೇ ಇಲ್ಲ ಎಂದು ಆರೋಪಿಸಿದ್ದಾರೆ.

Exit mobile version