ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

ಮೈಸೂರು : ತಮಿಳುನಾಡು (Tamil Nadu) ರಾಜ್ಯದ ಊಟಿ ಬಳಿ ಕಾರು ಪಲ್ಟಿಯಾಗಿ ಮೈಸೂರಿನ ಬಿಜೆಪಿ ಮುಖಂಡ ಸ್ವಾಮಿಗೌಡ ಎನ್ನುವವರು (BJP leader killed accident) ಮೃತಪಟ್ಟಿದ್ದಾರೆ.

ಮೈಸೂರು (Mysore) ಎನ್.ಆರ್.ಕ್ಷೇತ್ರ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸ್ವಾಮಿಗೌಡ ಅವರು ಸ್ನೇಹಿತರು ಮತ್ತು ಕುಟುಂಬದೊಂದಿಗೆ ಪ್ರಯಾಣ ಬೆಳೆಸಿದರು.

ಈ ವೇಳೆ ದುರಂತ ಸಂಭವಿಸಿದ್ದು, ಸ್ವಾಮಿಗೌಡ ತಕ್ಷಣ ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಸೇರಿದಂತೆ ನಾಲ್ವರನ್ನು ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ : ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?

ಸ್ವಾಮಿಗೌಡ (Swamy Gawda) ಅವರು ತಮ್ಮ ಸ್ನೇಹಿತ ಜಗದೀಶ್ ಗೌಡ ಅವರ ಕುಟುಂಬದೊಂದಿಗೆ ಬುಧವಾರ ತಮಿಳುನಾಡಿನ ಊಟಿಗೆ (Ooty) ಪ್ರಯಾಣ ಬೆಳೆಸಿದ್ದಾರೆ. ಸ್ವಾಮಿಗೌಡ, ಜಗದೀಶ್ ಗೌಡ,

ಅವರ ಪತ್ನಿ ಹಾಗೂ ಇಬ್ಬರು ಮಕ್ಕಳು ಕಾರಿನಲ್ಲಿ ಪ್ರಯಾಣಿಸಿದರು. ಊಟಿಯಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆ ಕೂಡ್ಲೂರು ಬಳಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸ್ವಾಮಿಗೌಡ ಅವರ ತಲೆಗೆ ತೀವ್ರ ಪೆಟ್ಟಾಗಿದೆ.

ಆದರೆ, ಜಗದೀಶ್ ಗೌಡ ಕುಟುಂಬ ಸಣ್ಣಪುಟ್ಟ ಗಾಯಗಳೊಂದಿಗೆ (BJP leader killed accident) ಬದುಕುಳಿದಿದೆ.

ಅಪಘಾತದ ನಂತರ ಸ್ಥಳೀಯರು ತಕ್ಷಣ ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಿದ್ದಾರೆ. ನಂತರ ಪೊಲೀಸರಿಗೆ (Police) ಮಾಹಿತಿ ರವಾನಿಸಿದ್ದಾರೆ.

ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಬಾಗಲಕೋಟೆಯಲ್ಲಿ ಬೈಕ್ಗೆ ಹಿಂಬದಿಯಿಂದ ಲಾರಿ ಡಿಕ್ಕಿ: ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸಾವು :

ಹುನಗುಂದ ತಾಲೂಕಿನ ರಕ್ಕಸಗಿ ಬಳಿ ಬೈಕ್‌ಗೆ ಹಿಂಬದಿಯಿಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ವೃದ್ಧೆ ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ (Bagalkote) ಜಿಲ್ಲೆಯ

ಹುನಗುಂದ ತಾಲೂಕಿನ ರಕ್ಕಸಗಿ ಬಳಿ ನಡೆದಿದೆ. ರಕ್ಕಸಗಿ ಗ್ರಾಮದ ನಿವಾಸಿಗಳಾದ ಶ್ರೀಕಾಂತ ಮಾದರ (39), ಶಾಂತವ್ವ ಕಟ್ಟಿಮನಿ (43), ಮಾಂತವ್ವ ಮುರಡಿ

(75) ಮೃತರು. ಅಮೀನ್ಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚಿತ್ರದುರ್ಗದಲ್ಲಿ ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ, ಮೂವರು ಸಾವು :

ತಾಲೂಕಿನ ಮಲ್ಲಾಪುರ ಬಳಿ ನಡೆದ ಘಟನೆಯಲ್ಲಿ ಲಾರಿಗೆ ಡಿಕ್ಕಿ ಹೊಡೆದು ಆ್ಯಂಬುಲೆನ್ಸ್ ನಲ್ಲಿದ್ದ(Ambulance) ಮೂವರು ಸಾವನ್ನಪ್ಪಿದ್ದಾರೆ. ಕನಕಮಣಿ (72), ಆಕಾಶ್ (17) ಚಾಲಕ ಆ್ಯಂಬುಲೆನ್ಸ್‌ನಲ್ಲಿ ಸಾವನ್ನಪ್ಪಿದ್ದಾರೆ.

ಇಬ್ಬರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಚಿತ್ರದುರ್ಗ(Chitradurga) ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗುಜರಾತ್‌ನಿಂದ ತಮಿಳುನಾಡಿಗೆ ತೆರಳುತ್ತಿದ್ದ ಆಂಬ್ಯುಲೆನ್ಸ್

ಅಹಮದಾಬಾದ್‌ನಿಂದ ತಿರುನಲ್ವೇಲಿಗೆ ತೆರಳುತ್ತಿದ್ದಾಗ ಅಪಘಾತಕ್ಕೀಡಾಗಿದೆ. ಮಲ್ಲಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದ್ದು, ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಶ್ಮಿತಾ ಅನೀಶ್

Exit mobile version