ಬಿಜೆಪಿ ನಾಯಕನ ಹತ್ಯೆ: 15 ಪಿಎಫ್ಐ ಕಾರ್ಯಕರ್ತರಿಗೆ ಗಲ್ಲು ಶಿಕ್ಷೆ

Tiruvanthapura: ಕೇರಳದ (Kerala) ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ನ್ಯಾಯಾಲಯವು ತೀರ್ಪು ನೀಡಿದ್ದು, ಈ ಹತ್ಯೆಯಲ್ಲಿ ಭಾಗಿಯಾಗಿರುವ 15 ಪಿಎಫ್ಐ (PFI) ಕಾರ್ಯಕರ್ತರಿಗೆ ಗಲ್ಲು ಶಿಕ್ಷೆ ವಿಧಿಸಿದೆ. ಈ ಆರೋಪಿಗಳು ಯಾವುದೇ ರೀತಿಯ ಕ್ಷಮೆಗೆ ಅರ್ಹರಲ್ಲ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ.

ಡಿಸೆಂಬರ್ (December) 2021ರಲ್ಲಿ ಕೇರಳದ ಬಿಜೆಪಿ ಒಬಿಸಿ ಮೋರ್ಚಾದ ನಾಯಕ ರಂಜಿತ್ ಶ್ರೀನಿವಾಸನ್ ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ 15 ಆರೋಪಿಗಳಿಗೆ ಮಾವೇಲಿಕ್ಕರ ಹೆಚ್ಚುವರಿ ಜಿಲ್ಲಾ ಸೆಷನ್ ನ್ಯಾಯಾಲಯ-1 ಮರಣದಂಡನೆ ವಿಧಿಸಿದ್ದು, ಈ ಎಲ್ಲಾ 15 ಆರೋಪಿಗಳು ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ನೊಂದಿಗೆ ಸಂಬಂಧ ಹೊಂದಿದ್ದಾರೆ.

ಬಿಜೆಪಿ ಒಬಿಸಿ (BJP, OBC) ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿದ್ದ ರಂಜಿತ್ ಶ್ರೀನಿವಾಸನ್ ಅವರನ್ನು ಡಿಸೆಂಬರ್ 19, 2021 ರಂದು ಅವರ ಮನೆಯಲ್ಲೇ ಅವರ ಕುಟುಂಬದ ಸಮ್ಮುಖದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಗಳಾಗಿರುವ 15 ಜನರಲ್ಲಿ ಎಂಟು ಜನರು ನೇರವಾಗಿ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ನ್ಯಾಯಾಲಯವು ಗುರುತಿಸಿತ್ತು. ನ್ಯಾಯಾಲಯವು ಇತರ ನಾಲ್ವರನ್ನು ಕೂಡಾ ತಪ್ಪಿತಸ್ಥರೆಂದು ಘೋಷಿಸಿದೆ.

ಏಕೆಂದರೆ ಅವರು ನೇರವಾಗಿ ಅಪರಾಧದಲ್ಲಿ ಭಾಗಿಯಾಗಿರುವವರೊಂದಿಗೆ ಮಾರಕಾಯುಧಗಳೊಂದಿಗೆ ಸ್ಥಳಕ್ಕೆ ಬಂದಿದ್ದರು. ಸಂಚುಕೋರರಾಗಿದ್ದ ಮೂವರು ಆರೋಪಿಗಳು ಕ್ರಿಮಿನಲ್ (Criminal) ಪಿತೂರಿ ಮತ್ತು ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದೆ. ಹೀಗಾಗಿ ಎಲ್ಲಾ 15 ಆರೋಪಿಗಳ ವಿರುದ್ಧ ಕೊಲೆ ಆರೋಪ ಸಾಬೀತಾಗಿದೆ.

ಆರೋಪಿಗಳ್ಯಾರು..?
ಪಾಪ್ಯುಲರ್ ಫ್ರಂಟ್ ಕಾರ್ಯಕರ್ತರಾದ, ಅನೂಪ್, ಶೆರ್ನಾಝ್ ಅಶ್ರಫ್ ಮಣ್ಣಂಜೇರಿ ಞರವೇಲಿ ಅಬ್ದುಲ್ ಕಲಾಂ ಅಲಿಯಾಸ್ ಸಲಾಂ, ಮುಹಮ್ಮದ್ ಅಸ್ಲಂ, ಅಬ್ದುಲ್ ಕಲಾಂ, ಸರಫುದ್ದೀನ್ (Muhammad Aslam, Abdul Kalam, Sarafuddin), ಮನ್ಷಾದ್, ಜಸೀಬ್ ರಾಜ, ನವಾಸ್, ಸಮೀರ್, ನಸೀರ್, ಝಕೀರ್ ಹುಸೈನ್, ಷಾಜಿ, ನವಾಜ್, ನಿಸಾಮ್, ಅಜ್ಮಲ್

Exit mobile version