ಇಂದು ಬಿಜೆಪಿ ನೇತೃತ್ವದಲ್ಲಿ ಎನ್‌ಡಿಎ ಸಭೆ : 34 ಪಕ್ಷಗಳ ಬೆಂಬಲ ಸಾಧ್ಯತೆ

New Delhi : 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ ಅಧಿಕಾರದಿಂದ ಕೆಳಗಿಳಿಸಬೇಕೆಂದು ವಿಪಕ್ಷಗಳು (BJP led NDA meeting) ಬೆಂಗಳೂರಿನಲ್ಲಿ ಸಭೆ ಸೇರಿ,

ಚುನಾವಣಾ ರಣತಂತ್ರ ರೂಪಿಸುತ್ತಿದ್ದರೆ, ಇನ್ನೊಂದೆಡೆ ದೆಹಲಿಯಲ್ಲಿ ವಿಪಕ್ಷಗಳ ಮೈತ್ರಿಕೂಟಕ್ಕೆ ಸೆಡ್ಡು ಹೊಡೆಯಲು ಬಿಜೆಪಿ ಕೂಡಾ ಎನ್ಡಿಎ ಮೈತ್ರಿಕೂಟದ ಸಭೆ ನಡೆಸುತ್ತಿದೆ.

ಆ ಮೂಲಕ ತನ್ನ ಶಕ್ತಿ ಪ್ರದರ್ಶನಕ್ಕೆ ಬಿಜೆಪಿ ಮುಂದಾಗಿದೆ. ಮೂಲಗಳ ಪ್ರಕಾರ ಬಿಜೆಪಿ ನೇತೃತ್ವದಲ್ಲಿ ಇಂದು ದೆಹಲಿಯ ಅಶೋಕ ಹೊಟೇಲ್ನಲ್ಲಿ ನಡೆಯಲಿರುವ ಎನ್ಡಿಎ

ಸಭೆಗೆ ಸುಮಾರು 34 ಪಕ್ಷಗಳು ಆಗಮಿಸುವ ಸಾಧ್ಯತೆಗಳಿವೆ. ಪ್ರಧಾನಿ ನರೇಂದ್ರ ಮೋದಿ (Narendra Modi), ಗೃಹ ಸಚಿವ ಅಮಿತ್ ಶಾ(Amit Shah), ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

(J.P Nadda), ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಸೇರಿ ಅನೇಕ ಹಿರಿಯ ಬಿಜೆಪಿ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ವಿಪಕ್ಷಗಳ ಮೈತ್ರಿಕೂಟದ ಸಭೆಯಿಂದಲೂ ಅಂತರ ಕಾಯ್ದುಕೊಂಡಿರುವ ಜೆಡಿಎಸ್ಗೆ ಎನ್ಡಿಎ ಸಭೆಗೂ ಆಹ್ವಾನ ನೀಡಿಲ್ಲ ಎನ್ನಲಾಗಿದೆ. ಹೀಗಾಗಿ ಜೆಡಿಎಸ್ ದೆಹಲಿಯಲ್ಲಿ ನಡೆಯುತ್ತಿರುವ ಸಭೆಗೆ ಹಾಜರಾಗುತ್ತಿಲ್ಲ.

ಇನ್ನು ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಎಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಹಾಗೂ ಅಜಿತ್ ಪವಾರ್ ನೇತೃತ್ವದ ಎನ್ಸಿಪಿ, ಆರ್ಎಲ್ಜೆಪಿ ಮುಖಂಡ ಚಿರಾಗ್ ಪಾಸ್ವಾನ್, ಹಿಂದೂಸ್ನಾನ್ ಅವಾಮಿ

ಮೋರ್ಚಾದ ನಾಯಕ ಜಿತನ್ ರಾಮ್ ಮಾಂಝಿ, ವಿಕಾಸ್ ಶೀಲ್ ಪಕ್ಷದ ಮುಕೇಶ್ ಸಾಹ್ನಿ, ಉಪೇಂದ್ರ ಸಿಂಗ್ ಖುಶ್ವಾಗೆ ಸಭೆಗೆ ಆಹ್ವಾನ ನೀಡಲಾಗಿದೆ.

ಅದೇ ರೀತಿ ಉತ್ತರ ಪ್ರದೇಶದ ಓಂ ಪ್ರಕಾಶ್ ರಾಜ್ ಭರ್ ಎನ್ಡಿಎ ಮರುಸೇರ್ಪಡೆಯಾಗುವುದಾಗಿ (BJP led NDA meeting) ಘೋಷಿಸಿದ್ದಾರೆ.

ಪಂಜಾಬಿನ ಅಕಾಲಿದಳ, ಆಂಧ್ರಪ್ರದೇಶದ ತೆಲುಗುದೇಶಂ ಪಕ್ಷಗಳ ನಡೆ ಇನ್ನೂ ನಿಗೂಢವಾಗಿಯೇ ಉಳಿದಿದೆ. ಆಂಧ್ರಪ್ರದೇಶದಲ್ಲಿ ಪವನ್ ಕಲ್ಯಾಣ ಜನಸೇನಾ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.

ಎನ್ಡಿಎ ಮೈತ್ರಿಕೂಟ :

ಬಿಜೆಪಿ, ಯುಪಿಪಿಎಲ್, ಎಐಆರ್ ಎನ್ ಸಿ, ಜನಸೇನಾ, ಎಚ್ ಎ ಎಮ್, ಎನ್ ಸಿಪಿ ಅಜಿತ್ ಪವಾರ್ ಬಣ, ಆರ್ ಎಲ್ ಎಸ್ ಪಿ, ಎನ್ ಪಿ ಪಿ, ಎನ್ ಡಿ ಪಿ ಪಿ, ಎಸ್ ಕೆಎಮ್, ಜೆಜೆಪಿ, ಐಎಂಕೆಎಮ್ ಕೆ, ಎಜೆಎಸ್ ಯು,

ವಿಐಪಿ, ಎಸ್ ಬಿ ಎಸ್ ಪಿ.ಎಐಎಡಿಎಂಕೆ, ಶಿವಸೇನಾ (ಏಕನಾಥ್ ಶಿಂಧೆ ಬಣ), ಆರ್ ಪಿ ಐ, ಎಮ್ ಎನ್ ಎಫ್, ತಮಿಳ್ ಮನಿಲಾ ಕಾಂಗ್ರೆಸ್, ಐಪಿಎಫ್ ಟಿ, ಬಿಪಿಪಿ, ಪಿಎಂಕೆ, ಎಮ್ ಜಿ ಪಿ, ಅಪ್ನಾದಳ್, ಎಜಿಪಿ,

BJP, UPPL, AIRNC, Jana Sena, HAM, NCP Ajit Pawar Bana, RLSP, NPP, NDP, SKM, JJP, IMKMK, AJSU,VIP, SBS P. AIADMK, Shiv Sena (Eknath Shinde faction), RPI, MNF, Tamil Manila Congress, IPF, BPP, PMK, MGP, Apnadal, AGP, RLJP

ಆರ್ ಎಲ್ ಜೆಪಿ, ನಿಷಾದ್ ಪಾರ್ಟಿ ದೇಶದ ಹಿತವನ್ನು ಬಯಸದ ಅವಕಾಶವಾದಿಗಳ ಸಭೆ: ಬಿಜೆಪಿ ವ್ಯಂಗ್ಯ ದೇಶದ ಹಿತವನ್ನು ಬಯಸದ, ಸದಾ ವೈಯುಕ್ತಿಕ ಹಿತಾಸಕ್ತಿಗಳ ಮೇಲಾಟದಲ್ಲಿ ತೊಡಗುವ,

ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ “ಅವಕಾಶವಾದಿಗಳ ಸಭೆ ಇಂದು ಬೆಂಗಳೂರಿನಲ್ಲಿ ನಡೆಯುತ್ತಿದೆ ಎಂದು ರಾಜ್ಯ ಬಿಜೆಪಿ ವಿಪಕ್ಷಗಳ ಸಭೆಯನ್ನು ಲೇವಡಿ ಮಾಡಿದೆ.


ಈ ಕುರಿತು ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಜಗಮೆಚ್ಚಿದ ನಾಯಕ ನರೇಂದ್ರ ಮೋದಿ ಅವರ ಮೇಲೆ ದ್ವೇಷ ಕಾರುವುದಷ್ಟೇ ಇವರ ಪ್ರಮುಖ ಅಜೆಂಡಾ. ಸೋನಿಯಾ ಗಾಂಧಿಗೆ ಕಾಂಗ್ರೆಸ್

ಅಧ್ಯಕ್ಷ ಸ್ಥಾನ ನೀಡಬಾರದೆಂದು, ಕಾಂಗ್ರೆಸ್ ಪಕ್ಷವನ್ನೇ ತುಂಡರಿಸಿ ಹೊರ ಬಂದ ಎನ್.ಸಿ.ಪಿ ಸಹ ಇಲ್ಲಿ ಅತಿಥಿಯಂತೆ. ಒಬ್ಬರಿಗೊಬ್ಬರು ಹೊಡೆದಾಡಿಕೊಂಡು ಬಿಹಾರವನ್ನು ‘ಬಿಮಾರು’ಗೊಳಿಸಿದ್ದ

ನಿತೀಶ್ ಕುಮಾರ್ & ಲಾಲೂ ಪ್ರಸಾದ್ ಯಾದವ್, ಇಲ್ಲಿ ಭಾಯಿ-ಭಾಯಿಗಳಂತೆ. ಭಾರತವನ್ನು ತುಂಡರಿಸುವಂತಹ ಹೇಳಿಕೆಗಳನ್ನು ನೀಡುವ, ಪಾಕಿಸ್ಥಾನ ಪ್ರೇಮಿ ಫಾರೂಕ್ ಅಬ್ದುಲ್ಲಾಗೂ ಸಹ ಇಲ್ಲಿಗೆ

ಆಹ್ವಾನವಿದೆಯಂತೆ. ಹಿಂದೂ ಧರ್ಮವನ್ನು ಸದಾ ಅವಹೇಳನ ಮಾಡುವ, ಹಿಂದೂಗಳನ್ನು ಅತ್ಯಂತ ಕೆಟ್ಟದಾಗಿ ನಿಂದಿಸುವ, ದ್ವೇಷಿಸುವ ತಮಿಳುನಾಡಿನ ತೋಳ್ ತಿರುಮಾವಳವನ್, ಮುಸ್ಲಿಂ ಲೀಗ್ಗೆ ಇಲ್ಲಿ

ಪಾಲಿದೆಯಂತೆ. ಇಂತಹವರಿಂದ ಸಧೃಡ ಭಾರತ ಹಾಗೂ ಸಶಕ್ತ ಭಾರತವನ್ನು ನಿರ್ಮಿಸಲು ಸಾಧ್ಯವೇ..? ಎಂದು ಪ್ರಶ್ನಿಸಿದೆ.


ಇನ್ನೊಂದು ಟ್ವೀಟ್ನಲ್ಲಿ, ತಿಂಡಿ ತಿನ್ನುವ ವೇಳೆ ಇರುವ ಇವರುಗಳ ಸ್ನೇಹ, ಊಟದ ವೇಳೆಗೆ ಮಾಯವಾದರೂ ಅಚ್ಚರಿ ಇಲ್ಲ. ಸದಾ ಅಧಿಕಾರಕ್ಕಾಗಿ ಕಚ್ಚಾಡುವ ಇವರುಗಳು ರಾಜಕಾರಣದಲ್ಲಿ ಇದುವರೆಗೂ ಬದ್ಧತೆ

ಎಂಬುದನ್ನು ಒಮ್ಮೆಯೂ ಪ್ರದರ್ಶಿಸಿಲ್ಲ. ಭ್ರಷ್ಟಾಚಾರ, ಕುಟುಂಬ ರಾಜಕಾರಣ, ಸ್ವಜನ ಪಕ್ಷಪಾತಗಳು ಇವರ ಮುಖ್ಯ ಸಿದ್ದಾಂತವಾಗಿದ್ದು, ಅದನ್ನು ಸಾಧಿಸಲು ಈಗ ಒಂದಾಗುವ ನಾಟಕವಾಡುತ್ತಿದ್ದಾರೆ.

ಈ ಸಭೆಯ ಆಯೋಜಕರು ಯಾರು? ಸಭೆಯ ಅಧ್ಯಕ್ಷರು ಯಾರು? ಈ ಸಭೆಯ ಸಂಯೋಜನೆ ಯಾವ ಪಕ್ಷದ್ದು? ಇದ್ಯಾವುದರ ಬಗ್ಗೆ ಸ್ವಲ್ಪವೂ ಸ್ಪಷ್ಟತೆ ಇಲ್ಲ. “ಯುನೈಟೆಡ್ ವಿ ಸ್ಟಾಂಡ್” ಎಂಬ ಈ

ಕಿಟ್ಟಿ ಪಾರ್ಟಿಯ ಹೆಸರೇ ಇವರ ಮಧ್ಯೆ ಒಗ್ಗಟ್ಟು ದೂರದ ಬೆಟ್ಟ ಎಂಬುದನ್ನು ನಿರೂಪಿಸುತ್ತದೆ. ದಶಕಗಳಿಂದ ಪಶ್ಚಿಮ ಬಂಗಾಳದಲ್ಲಿ ಪರಸ್ಪರ ಕಚ್ಚಾಡುತ್ತಿರುವ ಮಮತಾ ಬ್ಯಾನರ್ಜಿಯ ಟಿಎಂಸಿ ಹಾಗೂ

ಕಮ್ಯುನಿಸ್ಟರು ಇಂದು ಒಂದೇ ಟೇಬಲ್ನಲ್ಲಿ ಕುಳಿತು ಒಗ್ಗಟ್ಟು ಪ್ರದರ್ಶಿಸುತ್ತಾರಂತೆ. ಕೇರಳದಲ್ಲಿ ಅಧಿಕಾರಕ್ಕಾಗಿ ಹೊಡೆದಾಡುವ ಕಾಂಗ್ರೆಸ್ ಮತ್ತು ಕಮ್ಯುನಿಸ್ಟರು ಬೆಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ

ಕಾಮ್ರೇಡ್ಗಳಂತೆ ಎಂದು ಲೇವಡಿ ಮಾಡಿದೆ.ಇನ್ನೊಂದು ಟ್ವೀಟ್ನಲ್ಲಿ, ಪಂಜಾಬ್ನಲ್ಲಿ ಬಾಯಿಗೆ ಬಂದಂತೆ ಪರಸ್ಪರ ಬೈದಾಡಿಕೊಳ್ಳುವ ಆಮ್ ಆದ್ಮಿ ಪಕ್ಷದವರು ಹಾಗೂ ಕಾಂಗ್ರೆಸ್ನವರು,

ಇಲ್ಲಿ ಮಾತ್ರ ಬಾಂಧವರಂತೆ. ಕನ್ನಡಿಗರ ಕುಡಿಯುವ ನೀರಿಗೆ, ಕಾವೇರಿ ಹಾಗೂ ಮೇಕೆದಾಟು ಯೋಜನೆಗಳಿಗೆ ಸದಾ ಇನ್ನಿಲ್ಲದಂತೆ ತೊಂದರೆ ಕೊಡುವ ತಮಿಳುನಾಡಿನ ಸಿಎಂ ಸ್ಟಾಲಿನ್ಗೆ,

ಕರ್ನಾಟಕದ ಕಾಂಗ್ರೆಸ್ ಪಕ್ಷ ಚಿನ್ನತಂಬಿಯಂತೆ. ಕನ್ನಡಿಗರಿಗೆ ಮಹಾದಾಯಿ ನದಿಯ ಒಂದು ತೊಟ್ಟು ನೀರು ಬಿಡುವಿದೆಲ್ಲವೆಂದು ಗೋವಾದಲ್ಲಿ ಘೋಷಿಸಿದ್ದ ಸೋನಿಯಾ ಗಾಂಧಿಗೆ ಇಲ್ಲಿ ದೊಡ್ಡ

ಕುರ್ಚಿಯಂತೆ ಎಂದು ರಾಜ್ಯ ಬಿಜೆಪಿ ವ್ಯಂಗ್ಯವಾಡಿದೆ.

Exit mobile version