Bengaluru: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಬಿಡುಗಡೆ ಆಗಲಿದ್ದು, ಹತ್ತು ಹಲವು ಲೆಕ್ಕಾಚಾರಗಳಿಗೆ ತೆರೆ ಬೀಳಲಿದೆ. ರಾಜ್ಯ ವಿಧಾನಸಭಾ ಚುನಾವಣೆಯನ್ನು ಗುಜರಾತ್ (Gujurat) ಮಾದರಿಯಲ್ಲಿ ಎದುರಿಸಲಿದೆಯಾ? ಹಳೆ ಮುಖಗಳಿಗೆ ಕೋಕ್ ಕೊಟ್ಟು ಹೊಸ ಆಭ್ಯರ್ಥಿಗಳಿಗೆ ಆದ್ಯತೆ ಸಿಗುತ್ತಾ (BJP list release today) ಎಂಬ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ. ಈ ಮಾದರಿ ಈಗ ಅನೇಕ ಹಿರಿಯ ನಾಯಕರಲ್ಲಿ ಆತಂಕ ಸೃಷ್ಟಿಸಿದೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ 1ತಿಂಗಳಷ್ಟೆ ಬಾಕಿಯಿದ್ದು ಬಿಜೆಪಿಯ(BJP) ಮೊದಲ ಪಟ್ಟಿ ಸೋಮವಾರ ಬಿಡುಗಡೆ ಆಗಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಕೇಂದ್ರ ಸಂಸದೀಯ ಮಂಡಳಿ ಸಭೆಯಲ್ಲಿ ಈ ವಿಚಾರವಾಗಿ ಭಾನುವಾರ ಸುದೀರ್ಘ ಚರ್ಚೆ ನಡೆಸಲಾಗಿತ್ತು.
ಮೊದಲ ಪಟ್ಟಿಯಲ್ಲಿ ಅಚ್ಚರಿಯ ಹೊಸ ಹೆಸರುಗಳು ಇರಲಿದೆಯಾ ಎಂಬುದೇ ಈಗ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಇಂದು ಮಧ್ಯಾಹ್ನದೊಳಗೆ ಬಿಜೆಪಿ ಅಭ್ಯರ್ಥಿಗಳು ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಮೊದಲ ಪಟ್ಟಿಯಲ್ಲಿ 170 ರಿಂದ 180 ಅಭ್ಯರ್ಥಿಗಳ ಹೆಸರು (BJP list release today) ಘೋಷಣೆಯಾಗುವ ಸಾಧ್ಯತೆಯಿದೆ.
ಗುಜರಾತ್ ಮಾದರಿಯಂತೆ ರಾಜ್ಯದಲ್ಲಿ ಸಹ ಹಾಲಿ ಶಾಸಕರ ಬದಲಾಗಿ ಕೆಲವೊಂದು ಕಡೆ ಹೊಸ ಮುಖಗಳಿಗೆ ಚಾನ್ಸ ಕೊಡುವ ಸಾಧ್ಯತೆ ಹೆಚ್ಚಿದೆ.
ಈ ಬಗ್ಗೆ ಬಿಜೆಪಿ ಹೈಕಮಾಂಡ್‌ನಲ್ಲಿ (High Command) ಸಾಕಷ್ಟು ಚರ್ಚೆ ನಡೆದಿದೆ. ಕೆಲವು ಕ್ಷೇತ್ರಗಳಲ್ಲಿ ಮಾತ್ರ ಹೊಸ ಮುಖಗಳಿಗೆ ಟಿಕೆಟ್ (Ticket) ಸಿಗುವ ಸಾಧ್ಯತೆ ನಿಚ್ಛಳವಾಗಿದೆ.

ಇನ್ನು ಕಾಂಗ್ರೆಸ್‌ನ (Congress) ಕುಟುಂಬ ರಾಜಕಾರಣದ ವಿರುದ್ಧ ನಿರಂತರವಾಗಿ ಹೋರಾಟ ಮಾಡುತ್ತಿದ್ದ ಬಿಜೆಪಿ, ಯಡಿಯೂರಪ್ಪ(Yeddiyurappa) , ಈಶ್ವರಪ್ಪ ಮುಂತಾದ ಪ್ರಮುಖ ನಾಯಕರ ಮಕ್ಕಳಿಗೆ ಟಿಕೆಟ್ ಸಿಗುತ್ತಾ ಅನ್ನೋದು ಕೂಡ ಕುತೂಹಲ ಮೂಡಿಸಿರುವ ಅಂಶ.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಈಗಾಗಲೇ ಚುನಾವಣೆಯಲ್ಲಿ ಸ್ಪರ್ಧೆ ನಡೆಸುವುದಿಲ್ಲ ಎಂಬುವುದನ್ನು ಘೋಷಣೆ ಮಾಡಿದ್ದಾರೆ.
ಶಿಕಾರಿಪುರದಲ್ಲಿ ಅವರ ಪುತ್ರ ಬಿವೈ ವಿಜಯೇಂದ್ರ ಕಣಕ್ಕಿಳಿಯಲಿದ್ದಾರೆ. ಇನ್ನು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಟಿಕೆಟ್‌ಗಾಗಿ ಪ್ರಯತ್ನ ನಡೆಸುತ್ತಿದ್ದರೂ,
https://youtube.com/shorts/nonjJbhIJRU?feature=share
ಅವರ ಪುತ್ರ ಕಾಂತೇಶ್‌ಗೆ ಟಿಕೆಟ್ ಸಿಗುವಂತೆಯೂ ಲಾಬಿ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲ ಹೊಸಕೋಟೆಯಲ್ಲಿ ಬಿಟಿ ನಾಗರಾಜ್ ಅವರೂ ತಮ್ಮ ಮಗನಿಗೆ ಟಿಕೆಟ್ ಕೊಡಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ
ಸೇರಿದಂತೆ ಹಲವು ರಾಜ್ಯ ನಾಯಕರು ಬಿಜೆಪಿ ಕೇಂದ್ರೀಯ ಚುನಾವಣಾ ಸಭೆಯಲ್ಲಿ ಪಾಲ್ಗೊಂಡು ಇಂದು ಈ ಸಭೆಯಲ್ಲಿ ಅಂತಿಮವಾಗಿ ಕೆಲ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಮಾಡುವ ಸಾಧ್ಯತೆ ಇದೆ.
ರಂಜಿತಾ ಬಿ ಆರ್