ಏಕರೂಪ ನಾಗರಿಕ ಸಂಹಿಂತೆ , ಅರ್ಧ ಲೀಟರ್‌ಹಾಲು : ಬಿಜೆಪಿಯಿಂದ ಭರಪೂರ ಭರವಸೆ

Bengaluru : ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೇವಲ ಹತ್ತು ದಿನಗಳು ಉಳಿದಿದ್ದು, ಇದೀಗ ರಾಜ್ಯ ಬಿಜೆಪಿ (BJP) ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬಿಜೆಪಿಯ ಪ್ರಣಾಳಿಕೆಯನ್ನು ಬಿಜೆಪಿಯ ರಾಷ್ಟ್ರೀಯ (BJP manifesto release)ಅಧ್ಯಕ್ಷ ಜೆ.ಪಿ.ನಡ್ಡಾ(J.P.Nadda) ಬಿಡುಗಡೆ ಮಾಡಿದ್ದಾರೆ. ಪ್ರಮುಖ 16 ಆಶ್ವಾಸನೆಗಳನ್ನು ಬಿಜೆಪಿ ನೀಡಿದೆ.

• ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಣೆ.
• ಗುಣಮಟ್ಟದ ಮತ್ತು ಆರೋಗ್ಯಕರ ಆಹಾರವನ್ನು ಒದಗಿಸಲು ಮಹಾನಗರ ಪಾಲಿಕೆಯ ವಾರ್ಡ್‍ಗಳಲ್ಲಿ ಅಟಲ್ ಆಹಾರ ಕೇಂದ್ರವನ್ನು ಸ್ಥಾಪನೆ.
• ಹಾಲಿ ಇರುವ ಬಿಎಂಟಿಸಿ ಬಸ್‍ಗಳನ್ನು ಎಲೆಕ್ಟ್ರಿಕ್ ಬಸ್‍ಗಳಾಗಿ ಪರಿವರ್ತಿಸುತ್ತೇವೆ. ಜತೆಗೆ ಬೆಂಗಳೂರಿನ ಹೊರವಲಯದಲ್ಲಿ ಇಬಿ ಸಿಟಿ ಅಭಿವೃದ್ಧಿಗೊಳಿಸುವುದು.


• ರಾಜ್ಯದಾದ್ಯಂತ ನಿವೇಶನ ರಹಿತ, ವಸತಿ ರಹಿತ ನಿವಾಸಿಗಳಿಗೆ ಸರ್ವರಿಗೂ ಸೂರು ಯೋಜನೆಯಡಿ 10 ಲಕ್ಷ ವಸತಿ ನಿವೇಶನಗಳನ್ನು ಕಂದಾಯ ಇಲಾಖೆ ಮೂಲಕ ಹಂಚಿಕೆ ಮಾಡುತ್ತೇವೆ.
• ಬೆಂಗಳೂರನ್ನು ಡಿಜಿಟಲ್ ಇನ್ನೋವೇಶನ್‍ನ (Digital Innovation) ಜಾಗತಿಕ ಕೇಂದ್ರವಾಗಿ ರೂಪಿಸಲು ಪೂರಕ ಪರಿಸರ ವ್ಯವಸ್ಥೆ ಕಲ್ಪಿಸುತ್ತೇವೆ.
• ಎಸ್‍ಸಿ, ಎಸ್‍ಟಿ ಸಮುದಾಯದ ಮಹಿಳೆಯರು 5 ವರ್ಷಗಳ ಅವಧಿಗೆ ಮಾಡುವ ಸ್ಥಿರ ಠೇವಣಿಗಳ ಮೇಲೆ – 10 ಸಾವಿರದವರೆಗೆ ತಾಳಿಯಾಗುವ ಠೇವಣಿ ನೀಡಿಕೆ.
• ಕರ್ನಾಟಕ ಅಪಾರ್ಟ್ ಮೆಂಟ್ ಮಾಲೀಕತ್ವ ಕಾಯಿದೆ 1972ಕ್ಕೆ ಸೂಕ್ತ ತಿದ್ದುಪಡಿಗಳನ್ನು ತರುವುದು.


• ವಿಶ್ವೇಶ್ವರಯ್ಯ ವಿದ್ಯಾ ಯೋಜನೆ ಇದರಡಿ ಸರ್ಕಾರಿ ಶಾಲೆಗಳನ್ನು ಅತ್ಯುನ್ನತ ಶ್ರೇಣಿಗೆ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ವಿವಿಧ (BJP manifesto release) ಸಂಸ್ಥೆಗಳ ಜತೆ ಸಹಭಾಗಿತ್ವ
• ಪ್ರತಿಭಾವಂತ ಯುವ ವೃತ್ತಿಪರರಿಗೆ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಕ್ರಿಯಾತ್ಮಕ ಪರಿಸರ ವ್ಯವಸ್ಥೆಯನ್ನು ನಿರ್ಮಾಣ ಮಾಡುತ್ತೇವೆ.
• ಐಎಎಸ್, ಕೆಎಎಸ್ ತರಬೇತಿ ಪಡೆಯಲು ಆರ್ಥಿಕ ಪ್ರೋತ್ಸಾಹವನ್ನು ನೀಡುವ ಮೂಲಕ ಮಹತ್ವಾಕಾ೦ಕ್ಷೆಯ ಯುವಜನರಿಗೆ ವೃತ್ತಿ ಬೆಂಬಲವನ್ನು ಒದಗಿಸುತ್ತೇವೆ.
• ಮಹಾನಗರ ಪಾಲಿಕೆಯ ಪ್ರತಿ ವಾರ್ಡ್‍ನಲ್ಲಿ ಲ್ಯಾಬೊರೇಟರಿ ಸೌಲಭ್ಯ ಹೊಂದಿರುವ ನಮ್ಮ ಕ್ಲಿನಿಕ್ ಸ್ಥಾಪಿಸುತ್ತೇವೆ.


• ಬೆಂಗಳೂರನ್ನು ಅಭಿವೃದ್ಧಿಪಡಿಸಿ, ಅದನ್ನು ರಾಜ್ಯ ರಾಜಧಾನಿ ಪ್ರದೇಶ ಎಂದು ಗುರುತಿಸಲಾಗುತ್ತದೆ.
• ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಿರು ಶೀತಲೀಕರಣ ಸೌಲಭ್ಯಗಳು ಮತ್ತು ಕೃಷಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು 30,000 ಕೋಟಿ ಮೊತ್ತದ ಕೆ-ಅಗ್ರಿ ಫಂಡ್ ಸ್ಥಾಪನೆ.
• ಪ್ರತಿ ಬಿಪಿಎಲ್ ಕುಟುಂಬಗಳಿಗೆ ಪ್ರತಿದಿನ ಅರ್ಧ ಲೀಟರ್ ನಂದಿನಿ (Nandhini) ಹಾಲು ಮತ್ತು ಪ್ರತಿ ತಿಂಗಳು 5 ಕೆಜಿ ಪಡಿತರ ಕಿಟ್ ನೀಡುಲಾಗುವುದು.
• ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸುತ್ತೇವೆ.

Exit mobile version