ಅನಾರೋಗ್ಯದಿಂದ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ ಇನ್ನಿಲ್ಲ

ಬೆಂಗಳೂರು, ಜೂ. 08: ಅನಾರೋಗ್ಯದಿಂದ ಬಳಲುತ್ತಿದ್ದಂತ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ ಚಿಕಿತ್ಸೆ ಫಲಕಾರಿಯಾಗದೇ ನಿಧರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದಂತ ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ(77)ಯವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಶಾಸಕ ಸಿಎಂ ಉದಾಸಿ, ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.

 ಅನಾರೋಗ್ಯದಿಂದ ಬಳಲುತ್ತಿರುವ ಹಾವೇರಿ ಜಿಲ್ಲೆ, ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸಿ.ಎಂ.ಉದಾಸಿ ಅವರ ಪರಿಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತು. ಈ ಕುರಿತಂತೆ ಸಿಎಂ ಉದಾಸಿ ಪುತ್ರ ಶಿವಕುಮಾರ ಉದಾಸಿ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ನನ್ನ ತಂದೆಯವರಾದ ಶ್ರೀ ಸಿ.ಎಂ. ಉದಾಸಿ ಅವರು ಅನಾರೋಗ್ಯದ ಹಿನ್ನೆಲೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿರಂತರವಾಗಿ ವೈದ್ಯರ ಆರೈಕೆಯಲ್ಲಿರುವ ಅವರ ಆರೋಗ್ಯ ಸುಧಾರಣೆಗಾಗಿ ನಮ್ಮೆಲ್ಲರ ಪ್ರಾರ್ಥನೆ ಅವರೊಂದಿಗೆ ಇರಲಿ ಎಂದು ಮೇ.28ರಂದು ತಿಳಿಸಿದ್ದರು.

ಅಲ್ಲದೇ ರಕ್ತ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ 77 ವರ್ಷದ ಉದಾಸಿ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಇನ್ನೂ, ಗುರುವಾರ ಸಂಜೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದರು. ಇಂತಹ ಶಾಸಕ ಸಿಎಂ ಉದಾಸಿಯವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಈ ಮೂಲಕ ಬಿಜೆಪಿ ಶಾಸಕ ಸಿಎಂ ಉದಾಸಿ ಇನ್ನಿಲ್ಲವಾಗಿದ್ದಾರೆ.

Exit mobile version