ಚಾಲೆಂಜಿಂಗ್ ಸ್ಟಾರ್ ಬೆಂಬಲಕ್ಕೆ ನಿಂತ ಬಿಜೆಪಿ ಸಂಸದ: ದರ್ಶನ್ ಬಗ್ಗೆ ಇಡೀ ಕರ್ನಾಟಕಕ್ಕೆ ಗೊತ್ತು ಎಂದ ಪಿ.ಸಿ ಮೋಹನ್

ಬೆಂಗಳೂರು, ಜು. 20: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ‌ ನಡೆಸಿರುವ ಆರೋಪ ಎದುರಿಸುತ್ತಿರುವ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಪರ ಬ್ಯಾಟ್ ಬೀಸಿರುವ ಬಿಜೆಪಿ ಸಂಸದ ಪಿ.ಸಿ. ಮೋಹನ್, ದರ್ಶನ್ ಅವರ ವ್ಯಕ್ತಿತ್ವ ಎಂತಹದು ಎಂಬುದನ್ನು ಸಾರಿ ಹೇಳಿದ್ದಾರೆ.

ನಟ ದರ್ಶನ್ ಅವರನ್ನ ಬೆಂಬಲಿಸಿ ಟ್ವೀಟ್ ಮಾಡಿರುವ ಅವರು, ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಕಲಾ ಸೇವೆ ಸಲ್ಲುಸುತ್ತಿರುವ ದರ್ಶನ್ ತುಗೂದೀಪ ಅವರು ನನಗೆ ಆತ್ಮೀಯರು. ಚಾಲೆಂಜಿಂಗ್ ಸ್ಟಾರ್ ಯಾರೇ ಕಷ್ಟ ಎಂದರೂ ಸಹಾಯಕ್ಕೆ ನಿಲ್ಲುತ್ತಾರೆ. ರೈತರ ಹೋರಾಟ, ರೈತರ – ಕಲಾವಿದರ ಕಷ್ಟ, ಪ್ರಾಣಿಗಳ ಸಂಕಷ್ಟ ಅಂತಾ ಬಂದಾಗ ಒಂದು ಹೆಜ್ಜೆ ಮುಂದೆ ಬರುವುದು ದರ್ಶನ್ ಎಂದು ಕರ್ನಾಟಕಕ್ಕೇ ತಿಳಿದಿದೆ ಎಂದಿದ್ದಾರೆ.

ಅಲ್ಲದೇ ದರ್ಶನ್ ಅವರ ಕುರಿತು ಕೇಳಿ ಬಂದಿರುವ ಹಲ್ಲೆ ಆರೋಪದ ಬಗ್ಗೆ ಮಾತಾಡಿರುವ ಪಿ.ಸಿ ಮೋಹನ್, ಯಾವುದೇ ಆಧಾರವಿಲ್ಲದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲೆ ಅನಗತ್ಯ ಆರೋಪ ಮಾಡಿ , ಅವರ ತೇಜೋವಧೆಗೆ ಯತ್ನಿಸುತ್ತಿರುವುದು ಕನ್ನಡ ಚಿತ್ರರಂಗಕ್ಕೆ ಶೋಭೆ ತರುವುದಿಲ್ಲ. ಚಿತ್ರರಂಗದ ಹಿರಿಯರು ಹಾಗೂ ವಾಣಿಜ್ಯ ಮಂಡಳಿ ಮಧ್ಯ ಪ್ರವೇಶಿಸಿ ಎಲ್ಲಾ ಗೊಂದಲಗಳನ್ನು ನಿವಾರಿಸಬೇಕೆಂದು ವಿನಂತಿಸಿಕೊಂಡಿದ್ದಾರೆ.

Exit mobile version