ಐದೇ ವರ್ಷಗಳಲ್ಲಿ ಬರೋಬ್ಬರಿ 30 ಪಟ್ಟು ಆಸ್ತಿ ಹೆಚ್ಚಿಸಿಕೊಂಡ ಬಿಜೆಪಿ ಸಂಸದ ತೇಜಸ್ವಿ ಸೂರ್ಯ

Bengaluru: ಲೋಕಸಭಾ ಚುನಾವಣೆಯಲ್ಲಿ (Loksabha Election) ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಹಾಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತೊಮ್ಮೆ ಅದೃಷ್ಟದ ಪರೀಕ್ಷೆಗೆ ಇಳಿದಿದ್ದಾರೆ.ನಿನ್ನೆ ಅಪಾರ ಬೆಂಬಲಿಗರೊಂದಿಗೆ ರೋಡ್ ಶೋ ಮಾಡಿ ಬಳಿಕ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ಉಮೇದುವಾರಿಗೆಯಲ್ಲಿ ತಮ್ಮ ಆಸ್ತಿ ಎಂದು ಘೋಷಣೆ ಮಾಡಿದ್ದಾರೆ.

ಆದ್ರೆ, ತೇಜಸ್ವಿ ಸೂರ್ಯ ಅವರ ಅವರ ಆಸ್ತಿ ಕೇವಲ ಐದೇ ವರ್ಷದಲ್ಲಿ ಲಕ್ಷದಿಂದ ಕೋಟಿಗೆ ಜಿಗಿದಿದೆ. ಇನ್ನು ತಮ್ಮ ಬಳಿ ಯಾವುದೇ ಸ್ವಂತ ಮನೆ, ಕಾರು ಅಥವಾ ಬೈಕ್ ಇಲ್ಲ ಎನ್ನುವದನ್ನು ಕೂಡಾ ಅಫಿಡವಿಟ್ (Affidavit)ನಲ್ಲಿ ತಿಳಿಸಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಪ್ರಪ್ರಥಮ ಬಾರಿಗೆ ಬಿಜೆಪಿ (BJP) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ತೇಜಸ್ವಿ ಸೂರ್ಯ, ತಮ್ಮ ಪ್ರಮಾಣ ಪತ್ರದಲ್ಲಿ 13.46 ಲಕ್ಷ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿಕೊಂಡಿದ್ದರು.

ಆಗಲೂ ಸಹ ಕಾರು, ಸ್ವಂತ ಮನೆ, ಬೈಕ್ ಯಾವುದೂ ಇರಲಿಲ್ಲ ಇದೀಗ ಐದು ವರ್ಷಗಳ ನಂತರ ಸಂಸದರೂ ಹಾಗೂ ಭಾರತೀಯ ಜನತಾ ಯುವ ಮೋರ್ಚಾದ ಅಧ್ಯಕ್ಷರೂ ಆಗಿರುವ ತೇಜಸ್ವಿ ಸೂರ್ಯರ (Tejaswi Surya) ಆಸ್ತಿ ಮೌಲ್ಯವು ರೂ. 4.10 ಕೋಟಿಗೆ ಏರಿಕೆಯಾಗಿದೆ. ಇದರೊಂದಿಗೆ ಈ ಕಳೆದ ಬಾರಿ ಹಾಗೂ ಈ ಬಾರಿಗೆ ಹೋಲಿಕೆ ಮಾಡಿದರೆ ಆಸ್ತಿಯಲ್ಲಿ ಬರೋಬ್ಬರಿ 30 ಪಟ್ಟು ಹೆಚ್ಚಳವಾಗಿದೆ.

ಇನ್ನು ಅವರೇ ಹೇಳಿರುವ ಪ್ರಕಾರ ಮ್ಯೂಚುವಲ್ ಫಂಡ್, ಈಕ್ವಿಟಿಗಳಲ್ಲಿ 1,99,44,863 ಕೋಟಿ ಹೂಡಿಕೆ ಮಾಡಿದ್ದಾರೆ. 1,79,31,750 ರೂ. ಮಾರುಕಟ್ಟೆ ಮೌಲ್ಯದ ಷೇರುಗಳನ್ನು ಹೊಂದಿದ್ದು, ವಿವಿಧ ವಿಮಾ ಕಂಪನಿಗಳಲ್ಲಿನ 25,28,446 ಲಕ್ಷ ವಿಮೆ ಮಾಡಿಸಿದ್ದಾರೆ. 80 ಸಾವಿರ ನಗದು ಹೊಂದಿದ್ದು, ವಿವಿಧ ಬ್ಯಾಂಕ್‌ಗಳ ಖಾತೆಯಲ್ಲಿ 5,45,430 ರೂ. ಠೇವಣಿ ಇಟ್ಟಿದ್ದಾರೆ. ತೇಜಸ್ವಿ ತಮ್ಮ ಹೆಚ್ಚಿನ ಹಣವನ್ನು ಮ್ಯೂಚುವಲ್ ಫಂಡ್‌ (Mutual Fund) ಮತ್ತು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ದಾರೆ.

ಮಾರುಕಟ್ಟೆಯಲ್ಲಿ ಷೇರುಗಳ ಮೌಲ್ಯ ಹೆಚ್ಚಾಗುತ್ತಿರುವುದೇ ಅವರ ಆಸ್ತಿ ಹೆಚ್ಚಳಕ್ಕೆ ಕಾರಣ ಎಂದು ಹೇಳಲಾಗಿದೆ.ಧಾರ್ಮಿಕ ಭಾವನೆಗಳಿಗೆ ಅವಮಾನ, ನಂಬಿಕೆಗೆ ಚ್ಯುತಿ, ಕಾನೂನುಬಾಹಿರವಾಗಿ ಗುಂಪು ಜಮಾವಣೆ, ಸರ್ಕಾರಿ ಅಧಿಕಾರಿ ಕರ್ತವ್ಯಕ್ಕೆ ಅಡ್ಡಿ ಮತ್ತು ಸಾರ್ವಜನಿಕ ಸ್ಥಳದಲ್ಲಿ ಗಲಾಟೆಗೆ ಸಂಬಂಧಿಸಿದ ಹಲವು ಪ್ರಕರಣ ಹಾಗೂ ಕೇಸ್ ಗಳೂ ಕೂಡಾ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದೆ.

Exit mobile version