ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ 10 ಬಿಜೆಪಿ ಸಂಸದರು..!

New Delhi: ಸಂಸತ್ ಅಧಿವೇಶನದ ಮಧ್ಯೆಯೇ 10ಕ್ಕೂ ಹೆಚ್ಚು ಬಿಜೆಪಿ (BJP) ಸಂಸದರು ತಮ್ಮ ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಶಾಸಕರಾಗಿರುವ ಸಂಸದರು ಇದೀಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (J P Nadda) ಅವರ ನೇತೃತ್ವದಲ್ಲಿ 10ಕ್ಕೂ ಹೆಚ್ಚು ಸಂಸದರು ಇಂದು ಲೋಕಸಭೆಯ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ (OM Prakash Birla) ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ. ಮಧ್ಯಪ್ರದೇಶ ವಿಧಾನಸಭೆಗೆ ಶಾಸಕರಾಗಿ ಆಯ್ಕೆಯಾಗಿರುವ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ (Narendra Singh Tomar), ಪ್ರಹ್ಲಾದ್ ಪಟೇಲ್, ರಿತಿ ಪಾಠಕ್, ರಾಕೇಶ್ ಸಿಂಗ್ (Rakesh Singh), ಉದಯ್ ಪ್ರತಾಪ್ ಸಿಂಗ್, ರಾಜಸ್ಥಾನ ವಿಧಾನಸಭೆಗೆ ಶಾಸಕರಾಗಿ ಆಯ್ಕೆಯಾಗಿರುವ ರಾಜ್ಯವರ್ಧನ್ ರಾಥೋಡ್, ಕಿರೋಡಿ ಲಾಲ್ ಮೀನಾ ಮತ್ತು ದಿಯಾ ಕುಮಾರಿ ಮತ್ತು ಛತ್ತೀಸ್ಘಡ್ ವಿಧಾನಸಭೆಗೆ ಶಾಸಕರಾಗಿ ಆಯ್ಕೆಯಾಗಿರುವ ಅರುಣ್ ಸಾವೊ ಮತ್ತು ಗೋಮತಿ ಸಾಯಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಮಧ್ಯಪ್ರದೇಶ(Madhyapradesh) ವಿಧಾನಸಭೆಗೆ ಆಯ್ಕೆಯಾಗಿರುವ ಬಾಬಾ ಬಾಲಕನಾಥ್(Baba Balakanath) ಮತ್ತು ರೇಣುಕಾ ಸಿಂಗ್(Renuka Sing) ಇನ್ನೂ ತಮ್ಮ ಸಂಸತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿಲ್ಲ. ಇವರಿಬ್ಬರು ಶೀಘ್ರದಲ್ಲೇ ರಾಜೀನಾಮೆ(Resignation)ಸಲ್ಲಿಕೆ ಮಾಡಲಿದ್ದಾರೆ ಎಂದು ಬಿಜೆಪಿ ಪಕ್ಷದ ಮೂಲಗಳು ತಿಳಿಸಿದ್ದು, ಇನ್ನು ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶ, ಛತ್ತೀಸ್ಗಢ, ರಾಜಸ್ಥಾನ ರಾಜ್ಯಗಳಲ್ಲಿ ಬಿಜೆಪಿ ಬಹುಮತವನ್ನು ಪಡೆದಿದ್ದು, ಸರ್ಕಾರ ರಚಿಸುವ ಕಸರತ್ತು ಆರಂಭಿಸಿದೆ. ಈ ಮೂರು ರಾಜ್ಯಗಳಲ್ಲಿ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ.

ಬಿಜೆಪಿಯ(BJP) ಕೇಂದ್ರೀಯ ಕಾರ್ಯಕಾರಣಿ ಮಂಡಳಿ ಈ ಕುರಿತು ದೆಹಲಿಯಲ್ಲಿ ಸಭೆ ನಡೆಸಲಿದೆ. ಇನ್ನೊಂದೆಡೆ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ ಮತ್ತು ತೆಲಂಗಾಣ ಮುಖ್ಯಮಂತ್ರಿಗಳು ರಾಜ್ಯಪಾಲರಿಗೆ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ತೆಲಂಗಾಣದಲ್ಲಿ ಕಾಂಗ್ರೆಸ್ನಿಂದ ಮುಖ್ಯಮಂತ್ರಿಯಾಗಿ ರೇವಂತ ರೆಡ್ಡಿ ಡಿಸೆಂಬರ್ 7ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಉಳಿದ ಒಂಬತ್ತು ಮಂದಿ ಸೋತಿದ್ದಾರೆ ಎಂದು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಮಾಹಿತಿ ಲಭ್ಯವಾಗಿದ್ದು ಸೋತವರಲ್ಲಿ ಮಧ್ಯಪ್ರದೇಶದ ನಿವಾಸ್‌ನಿಂದ ಸ್ಪರ್ಧಿಸಿದ್ದ ಕೇಂದ್ರ ಸಚಿವ ಫಗ್ಗನ್ ಸಿಂಗ್ ಕುಲಸ್ತೆ ಸೇರಿದ್ದಾರೆ. ಪಂಚರಾಜ್ಯ ಚುನಾವಣೆ ಫಲಿತಾಂಶ ಹೊರ ಬಿದ್ದಾಗ 21 ಸಂಸದರ ಪೈಕಿ 12 ಮಂದಿ ಜಯಗಳಿಸಿದ್ದರು.

ರಾಜೀನಾಮೆ ನೀಡದಿದ್ದರೆ ಏನಾಗುತ್ತೆ?
ಸಂವಿಧಾನದ 101ನೇ ವಿಧಿಯ ಅಡಿಯಲ್ಲಿ 1950ರಲ್ಲಿ ರಾಷ್ಟ್ರಪತಿ ಅಂಕಿತ ಹಾಕಿದ ಸದಸ್ಯತ್ವ ನಿಯಮದ ಪ್ರಕಾರ, ಸಂಸದರು ವಿಧಾನಸಭೆಗೆ ಆಯ್ಕೆಯಾದರೆ ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲದಿದ್ದೆ 14 ದಿನಗಳಲ್ಲಿ ಅವರ ಸಂಸತ್ ಸದಸ್ಯತ್ವ ರದ್ದಾಗಲಿದೆ ಎಂದು ಸಂವಿಧಾನ ತಜ್ಞ ಮತ್ತು ಮಾಜಿ ಲೋಕಸಭೆಯ ಕಾರ್ಯದರ್ಶಿ ಪಿಡಿಟಿ ಆಚಾರಿ ಅವರನ್ನು ಉಲ್ಲೇಖಿಸಿ ಝೀ ಬ್ಯುಸಿನೆಸ್ ವರದಿ ಮಾಡಿದೆ.

Exit mobile version