‘ಹಿಂದುತ್ವ’ವೇ ನಮ್ಮ ಮೊದಲ ಆದ್ಯತೆಯಾಗಿರಬೇಕು : ಬಿಜೆಪಿ ಕಾರ್ಯಕಾರಿಣಿ ನಿರ್ಣಯ!

BJP

ಐತಿಹಾಸಿಕ(Historical) ವಿಜಯನಗರದಲ್ಲಿ(Vijayanagar) ನಡೆಯುತ್ತಿರುವ ರಾಜ್ಯ ಬಿಜೆಪಿ(State BJP) ಕಾರ್ಯಕಾರಿಣಿ ಸಭೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅನುಸರಿಸಬೇಕಾದ ತಂತ್ರ-ಪ್ರತಿತಂತ್ರಗಳ ಕುರಿತು ಗಂಭೀರ ಚರ್ಚೆ ನಡೆಯಿತು. ರಾಜ್ಯ ಬಿಜೆಪಿಯ ಎಲ್ಲ ಶಾಸಕರು, ಸಂಸದರು, ಪದಾಧಿಕಾರಿಗಳು ಸೇರಿದಂತೆ ಎಲ್ಲ ಪ್ರಮುಖ ನಾಯಕರು ಪಾಲ್ಗೊಂಡಿದ್ದ ಈ ಸಭೆಯಲ್ಲಿ 150 ಪ್ಲಸ್ ಸ್ಥಾನಗಳನ್ನು ಗೆಲ್ಲುವತ್ತ ಹೆಚ್ಚಿನ ಗಮನ ಕೇಂದ್ರೀಕರಿಸುವ ಕುರಿತು ಚರ್ಚೆ ನಡೆಯಿತು.

ಈ ವೇಳೆ ‘ಹಿಂದುತ್ವ’ ಅಜೆಂಡಾವನ್ನೇ ಇಟ್ಟುಕೊಂಡು ಚುನಾವಣೆ ಎದುರಿಸಲು ನಿರ್ಣಯ ತೆಗೆದುಕೊಳ್ಳಲಾಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ನಿಟ್ಟಿನಲ್ಲಿ ಸದ್ಯ ಐತಿಹಾಸಿಕ ವಿಜಯನಗರದಲ್ಲಿ ನಡೆಯುತ್ತಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಅತ್ಯಂತ ಮಹತ್ವ ಪಡೆದುಕೊಂಡಿದೆ. ಮುಂಬರುವ ಚುನಾವಣೆಯ ರೂಪರೇಷಗಳನ್ನು ಸಿದ್ದಪಡಿಸುವ ಕುರಿತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕಾರ್ಯಕರ್ತರಿಗೆ ಸೂಚನೆಗಳನ್ನು ನೀಡಿದ್ದಾರೆ.

ವಿಪಕ್ಷಗಳನ್ನು ಹೇಗೆ ಎದುರಿಸಬೇಕು, ವಿಪಕ್ಷಗಳ ತಂತ್ರಗಾರಿಕೆಗಳಿಗೆ ಬಿಜೆಪಿ ರೂಪಿಸಬೇಕಾದ ತಂತ್ರಗಾರಿಕೆಗಳು, ಚುನಾವಣೆಯಲ್ಲಿ ಅನುಸರಿಸಬೇಕಾದ ಕಾರ್ಯತಂತ್ರ, ತಳ ಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸುವ ಕುರಿತು ಅರುಣ್ ಸಿಂಗ್ ಅನೇಕ ಸಲಹೆಗಳನ್ನು ನೀಡಿದ್ದಾರೆ ಎನ್ನಲಾಗಿದೆ. ಇನ್ನು ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಅನುಸರಿಸಿದ ತಂತ್ರವನ್ನೇ ಕರ್ನಾಟಕದಲ್ಲಿಯೂ ಅನುಸರಿಸಲು ರಾಜ್ಯ ಬಿಜೆಪಿ ತೀರ್ಮಾನಿಸಿದೆ. ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಅನುಸರಿಸಿದ ತಂತ್ರಗಾರಿಕೆ ಉತ್ತಮ ಫಲ ನೀಡಿದ್ದು, ಅದೇ ರೀತಿಯಲ್ಲೇ ಕರ್ನಾಟಕದ ವಿಧಾನಸಭಾ ಚುನಾವಣೆ ಎದುರಿಸಲು ರಾಜ್ಯ ಬಿಜೆಪಿ ಮುಂದಾಗಿದೆ.

ಉತ್ತರಪ್ರದೇಶದಲ್ಲಿ ‘ಹಿಂದುತ್ವ’ವನ್ನು ಮುಖ್ಯ ಅಜೆಂಡಾವನ್ನಾಗಿ ಮಾಡಿಕೊಂಡು ಚುನಾವಣೆ ಎದುರಿಸಿದ್ದರು. ಹೀಗಾಗಿಯೇ ರಾಜ್ಯದಲ್ಲಿ ಕೂಡಾ ಹಿಂದುತ್ವದ ಫೈರ್ ಬ್ರಾಂಡ್ ನಾಯಕರಿಗೆ ಮಣೆ ಹಾಕಲು ನಿರ್ಧರಿಸಲಾಗಿದೆ. ಇನ್ನು ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ನಡೆಸದಂತೆ ಎಚ್ಚರಿಕೆ ನೀಡಲಾಗಿದೆ. ಚುನಾವಣೆ ವೇಳೆ ಹೈಕಮಾಂಡ್ ನೀಡುವ ಆದೇಶಗಳಿಗೆ ಬದ್ದರಾಗಿರುವಂತೆ ಸೂಚನೆ ನೀಡಲಾಗಿದೆ. ಎರಡು ದಿನಗಳ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಯಾವುದೇ ಅಪಸ್ವರ ಕಂಡು ಬಂದಿಲ್ಲ.

Exit mobile version