ಸಂತೋಷ್ ಪಾಟೀಲ್, ರಾಹುಲ್ ಗಾಂಧಿ ಸಹಿಯನ್ನು ನಕಲು ಮಾಡಿದ್ದರು : ಬಿಜೆಪಿ!

political

ಸಂತೋಷ್ ಪಾಟೀಲ್ ಬಗ್ಗೆ ಪರೋಕ್ಷವಾಗಿ ಬಿಜೆಪಿ ಪಕ್ಷ ಒಂದರ ಹಿಂದೆ ಒಂದು ಎಂಬಂತೆ ಆರೋಪ ಎಸಗುತ್ತಿದ್ದು, ಸರಣಿ ಟ್ವೀಟ್ ಮಾಡುವ ಮೂಲಕ ಸಂತೋಷ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಎಂದು ಹೇಳುತ್ತಿದೆ. ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಸಾಕಷ್ಟು ಅನುಮಾನ ಹುಟ್ಟುಹಾಕಿದೆ! ಇದು ಕಾಂಗ್ರೆಸ್ ಪಕ್ಷದ “ಬೇನಾಮಿ ಅಧ್ಯಕ್ಷೆ” ಹಾಗೂ “ಮಹಾನಾಯಕ” ಸೃಷ್ಟಿಸಿದ “ಮಹಾಕೈವಾಡವೇ”? ಎಂದು ಹೇಳಿದೆ. ಇದರ ಬೆನ್ನಲ್ಲೇ ಮತ್ತೊಂದು ಟ್ವೀಟ್ ನಲ್ಲಿ, ಅನುಮೋದನೆ ಇಲ್ಲದಯೇ ನೂರಕ್ಕೂ ಹೆಚ್ಚು ಕಾಮಗಾರಿ ನಡೆಸಿದ್ದ ಸಂತೋಷ್.

ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಕಾಮಗಾರಿಯಲ್ಲ ಎಂದು ಗ್ರಾಮೀಣಾಭಿವೃದ್ಧಿ ಅಧಿಕಾರಿಗಳಿಂದ ಸ್ಪಷ್ಟನೆ ನೀಡಿದೆ. ಅನಧಿಕೃತ ಕಾಮಗಾರಿಯ ಹಿಂದೆ ಕೆಪಿಸಿಸಿಯ ” ಅಘೋಷಿತ ಅಧ್ಯಕ್ಷೆಯ” ಪಾತ್ರವೇನು? ಕೇಂದ್ರದ ನಾಯಕರ, ಮಂತ್ರಿಗಳ, ಅಧಿಕಾರಿಗಳ ಬಳಿಗೆ ತರಳಿ ದೂರು ಸಲ್ಲಿಸುವಷ್ಟು ಧೈರ್ಯವಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಮೆತ್ತಗಿನ ಮನುಷ್ಯನೇ? ಇದರ ಹಿಂದೆ ಕಾಂಗ್ರೆಸ್ ಕೈವಾಡವಿದೆ.

ಅರಾಜಕತೆ ಸೃಷ್ಟಿಸಲು ಮುಗ್ಧರನ್ನು ಕಾಂಗ್ರೆಸ್ ನಾಯಕರು ಬಳಸಿಕೊಳ್ಳುತ್ತಿದ್ದಾರೆಯೇ? ಸಂತೋಷ್ ಪಾಟೀಲ್ ಮೂಲತಃ ಕಾಂಗ್ರೆಸ್ ಕಾರ್ಯಕರ್ತ, ಸಂತೋಷನಿಂದ ರಾಹುಲ್ ಗಾಂಧಿ ಸಹಿಯನ್ನು ನಕಲು ಮಾಡಲಾಗಿತ್ತು, 40% ಕಮಿಷನ್ ಕಾಂಗ್ರೆಸ್ ಸೃಷ್ಟಿ, ಸಂತೋಷ್ ಪಾಟೀಲನಿಂದಲೂ 40% ಕಮಿಷನ್ ಪ್ರಸ್ತಾಪವಾಗಿತ್ತು! ಕಾರ್ಯಾದೇಶ ಇಲ್ಲದೇ ಕಾಮಗಾರಿ ನಡೆಸಲಾಗಿದೆ. ಕೆಪಿಸಿಸಿ “ಅಘೋಷಿತ ಅಧ್ಯಕ್ಷೆಯ” ಕ್ಷೇತ್ರದಲ್ಲಿ ಕಾಮಗಾರಿ, ಈಗ ಮೃತನ ಪರ ಬ್ಯಾಟಿಂಗ್ ಮಾಡುತ್ತಿದೆ.

ಮೃತ ವ್ಯಕ್ತಿಯ ಎಲ್ಲಾ ವಿಚಾರಗಳು “ಮಹಾನಾಯಕ” ಮತ್ತು ” ಬೇನಾಮಿ ಅಧ್ಯಕ್ಷೆಯ” ಸುತ್ತ ಸುತ್ತುತ್ತಿರುವುದು ನಿಜವಲ್ಲವೇ ಎಂದು ಪ್ರರೋಕ್ಷವಾಗಿ ತಮ್ಮ ಹೇಳಿಕೆಯನ್ನು ತಿರುಚಿ ಹೇಳಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ!

Exit mobile version