ಸಂಪುಟ ವಿಸ್ತರಣೆ : ಯಾರಿಗೆ ಗೇಟ್‍ಪಾಸ್? ಯಾರಿಗೆ ಸಚಿವ ಸ್ಥಾನ?

bjp

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ(Vidhansabha Election) ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ದಕ್ಷಿಣ ಭಾರತದಲ್ಲಿ ತನ್ನ ಅಧಿಪತ್ಯವನ್ನು ಉಳಿಸಿಕೊಳ್ಳಲು ರಾಜ್ಯ ಬಿಜೆಪಿ(State BJP) ಭಾರೀ ಕಸರತ್ತು ನಡೆಸುತ್ತಿದೆ.

ಬಿಜೆಪಿ ಹೈಕಮಾಂಡ್(Highcommand) ಕೂಡಾ ಮರಳಿ ಅಧಿಕಾರ ಹಿಡಿಯುವ ದೃಷ್ಟಿಯಿಂದ ಎಲ್ಲ ರೀತಿಯ ರಾಜಕೀಯ(Political) ರಣತಂತ್ರಗಳ ಪ್ರಯೋಗಕ್ಕೆ ಸಿದ್ದತೆ ನಡೆಸಿದೆ. ಈಗಾಗಲೇ ಗೃಹ ಸಚಿವ ಅಮಿತ್ ಶಾ(Amith Shah) ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ(JP Nadda) ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಅಮಿತ್ ಶಾ ಭೇಟಿ ವೇಳೆ ಮುಖ್ಯವಾಗಿ ಸಂಪುಟ ವಿಸ್ತರಣೆ ಬಗ್ಗೆ ಗಂಭೀರ ಚರ್ಚೆ ನಡೆದಿದ್ದು, ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಸಂಪುಟ ವಿಸ್ತರಣೆ ಮಾಡಲು ಅಮಿತ್ ಶಾ ಸೂಚಿಸಿದ್ದಾರೆ.

ಹೀಗಾಗಿ ಸಿಎಂ ಬೊಮ್ಮಾಯಿ(Basavaraj Bommai) ಮೇ 10ಕ್ಕೆ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡುವ ಸಾಧ್ಯತೆ ಇದೆ. ಇನ್ನು ಮುಂಬರುವ ಚುನಾವಣೆಯ ದೃಷ್ಟಿಯಿಂದ ಸದ್ಯ ವಿಸ್ತರಣೆಯಾಗಲಿರುವ ಸಂಪುಟದಲ್ಲಿ ಹೊಸ ಮುಖಗಳಿಗೆ ಸ್ಥಾನ ನೀಡಲು ಅಮಿತ್ ಶಾ ಸೂಚಿಸಿದ್ದಾರೆ ಎನ್ನಲಾಗಿದೆ. ಅದೇ ರೀತಿ ಪ್ರಭಾವಿ ಸಮುದಾಯಗಳ ನಾಯಕರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಬಗ್ಗೆಯೂ ಚಿಂತನೆ ನಡೆದಿದೆ. ದಲಿತ, ಒಕ್ಕಲಿಗ, ಹಿಂದುಳಿದ ಮತ್ತು ನಾಯಕ ಸಮುದಾಯಗಳಿಗೆ ಡಿಸಿಎಂ ಪಟ್ಟ ನೀಡಲು ತಂತ್ರ ರೂಪಿಸಲಾಗಿದೆ.

ಸದ್ಯದ ಮಾಹಿತಿ ಪ್ರಕಾರ ಒಕ್ಕಲಿಗ ಸಮುದಾಯದಿಂದ ಆರ್. ಅಶೋಕ, ಹಿಂದುಳಿದ ವರ್ಗದಿಂದ ಸುನೀಲ್ ಕುಮಾರ್, ಪರಿಶಿಷ್ಟ ಪಂಗಡದಿಂದ ಬಿ. ಶ್ರೀರಾಮುಲು ಮತ್ತು ದಲಿತ ಸಮುದಾಯದಿಂದ ಗೋವಿಂದ ಕಾರಜೋಳಗೆ ಉಪಮುಖ್ಯಮಂತ್ರಿ ಸ್ಥಾನ ಸಿಗುವ ಸಾಧ್ಯತೆ ಇದೆ. ಇನ್ನು ಪ್ರಬಲ ಲಿಂಗಾಯತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಲಾಗಿದ್ದರು, ಉತ್ತರಕರ್ನಾಟಕ ಭಾಗದಲ್ಲಿ ಪಕ್ಷವನ್ನು ಇನ್ನಷ್ಟು ಬಲ ಪಡಿಸುವ ದೃಷ್ಟಿಯಿಂದ ಉತ್ತರಕರ್ನಾಟಕದ ಲಿಂಗಾಯತ ನಾಯಕರಿಗೆ ಸಚಿವ ಸ್ಥಾನ ನೀಡಲು ನಿರ್ಧರಿಸಲಾಗಿದೆ.

ಬಿ.ವೈ. ವಿಜಯೇಂದ್ರ, ಅರವಿಂದ್ ಬೆಲ್ಲದ್ ಅವರಿಗೆ ಸಚಿವ ಸ್ಥಾನ ಲಭಿಸುವ ಸಾಧ್ಯತೆ ಇದೆ. ಇನ್ನು ರಾಜ್ಯಾಧ್ಯಕ್ಷ ಸ್ಥಾನಕೆ ಹೊಸಬರನ್ನು ನೇಮಿಸುವ ಬಗ್ಗೆ ಚರ್ಚೆ ನಡೆದಿದೆ. ಸಿಟಿ ರವಿ ಅಥವಾ ಶೋಭಾ ಕರಂದ್ಲಾಜೆ ಈ ಇಬ್ಬರಲ್ಲಿ ಒಬ್ಬರಿಗೆ ರಾಜ್ಯಾಧ್ಯಕ್ಷ ಪಟ್ಟ ಸಿಗಲಿದೆ. ಇನ್ನು ವಲಸಿಗ ಸಚಿವರು ಸಂಪುಟದಿಂದ ಹೊರಬೀಳುವುದು ಬಹುತೇಕ ಖಚಿತ ಎನ್ನಲಾಗಿದೆ.

Exit mobile version