ಪ್ರವೀಣ್ ನೆಟ್ಟಾರು ಹತ್ಯೆ : 21 ಮಂದಿ ಬಂಧನ, ಎಲ್ಲರಿಗೂ ಪಿಎಫ್‌ಐ ನಂಟು

Praveen nettar

ಮಂಗಳೂರು : ಬಿಜೆಪಿ(BJP) ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು(Praveen Nettar) ಹತ್ಯೆ(Murder) ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು(Mangaluru Police) 21 ಮಂದಿ ಶಂಕಿತರನ್ನು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಪಿಎಫ್‌ಐ(PFI) ಸಂಘಟನೆಯ ಜೊತೆ ನಂಟು ಹೊಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಯ ಹಿಂದೆ ಪಿಎಫ್‌ಐ ಸಂಚು ನಡೆಸಿದೆಯಾ.? ಎಂಬ ಅನುಮಾನ ಮೂಡಿದೆ.

ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಯ ನಂತರ ದುಷ್ಕರ್ಮಿಗಳನ್ನು ಪತ್ತೆ ಮಾಡಲು ಮಂಗಳೂರು ಪೊಲೀಸರು ಐದು ತಂಡಗಳನ್ನು ರಚಿಸಿದ್ದಾರೆ. ಎಲ್ಲ ತಂಡಗಳು ತನಿಖೆಯನ್ನು ನಡೆಸುತ್ತಿದ್ದು, ಅನೇಕ ಶಂಕಿತರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಲಾಗುತ್ತಿದೆ. ನಿನ್ನೆ ತಡರಾತ್ರಿ ಬೆಳ್ಳಾರೆಯ ಎಸ್ಡಿಪಿಐ ಕಾರ್ಯಕರ್ತರ(SDPI Workers) ಮನೆಗೆ ನುಗ್ಗಿ ಏಳು ಮಂದಿ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಯ ಹಿಂದೆ ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆಗಳ ಪಾತ್ರವಿದೆ ಎಂದು ಪೊಲೀಸರು ಬಲವಾಗಿ ಅನುಮಾನಿಸಿದ್ದಾರೆ ಎನ್ನಲಾಗಿದೆ.

ಇದೊಂದು ರಾಜಕೀಯ(Political) ಪ್ರೇರಿತ ಹತ್ಯೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಇನ್ನು ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಬಿಜೆಪಿ ಯುವಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಅವರನ್ನು ಮಂಗಳವಾರ ರಾತ್ರಿ ಬೈಕಿನಲ್ಲಿ ಬಂದಿದ್ದ ಮೂವರು ಭೀಕರವಾಗಿ ಹತ್ಯೆ ಮಾಡಿದ್ದರು. ಈ ಘಟನೆಯ ನಂತರ ಕರಾವಳಿ ಭಾಗದಲ್ಲಿ ಭಾರೀ ಉದ್ವೀಗ್ನತೆ ಸೃಷ್ಟಿಯಾಗಿದೆ. ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಯನ್ನು ಖಂಡಿಸಿ, ಇಡೀ ಕರಾವಳಿ ಜಿಲ್ಲೆಗಳಲ್ಲಿ ಹಿಂದೂ ಸಂಘಟನೆಗಳ ಆಕ್ರೋಶ ಭುಗಿಲೆದ್ದಿದೆ.

ಬಿಜೆಪಿ ಸರ್ಕಾರದ ಆಡಳಿತದಲ್ಲೇ ಹಿಂದೂ ಕಾರ್ಯಕರ್ತರು ಹತ್ಯೆಯಾಗುತ್ತಿರುವುದು, ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯ ಬಿಜೆಪಿ(State BJP) ನಾಯಕರು ಮತ್ತು ರಾಜ್ಯ ಸರ್ಕಾರದ ವಿರುದ್ದ ಕರಾವಳಿಯಲ್ಲಿ ಆಕ್ರೋಶ ತೀವ್ರಗೊಂಡಿದೆ. ಪರಿಸ್ಥಿತಿ ನಿಭಾಯಿಸಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದೆ.

Exit mobile version