Bengaluru: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅವ್ಯವಹಾರದ ವಿರುದ್ಧ ರಾಜ್ಯಾದ್ಯಂತ ಜೂನ್ (June) 28ರಂದು ಪ್ರತಿಭಟನೆಗೆ ಬಿಜೆಪಿ ತೀರ್ಮಾನಿಸಿದ್ದು, ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಚೇರಿಯಲ್ಲಿ ಶನಿವಾರ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (B Y Vijayendra) ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.
![](https://sp-ao.shortpixel.ai/client/to_webp,q_glossy,ret_img,w_1000,h_600/https://vijayatimes.com/wp-content/uploads/2024/01/BY-Vijayendra-BJP-State-President-1.webp)
ಎಸ್ಟಿ ಮುಖಂಡರ ಸಭೆಯಲ್ಲಿ ರಾಜ್ಯಾದ್ಯಂತ ಪ್ರತಿಭಟನೆಗೆ ನಿರ್ಧಾರ ಕೈಗೊಳ್ಳಲಾಯಿತು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಉಲ್ಲೇಖಿಸಿ ಮಾತನಾಡಿದ ಶ್ರೀರಾಮುಲು, ಸಿದ್ದರಾಮಯ್ಯ (Sriramulu, Siddaramaiah) ಸರ್ಕಾರ ಎಸ್ಸಿ, ಎಸ್ಟಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು. ಶಿಕ್ಷಣ, ಮನೆ, ಮೂಲಸೌಕರ್ಯ ಕೊಡಿಸುವ ಕೆಲಸ ಮಾಡಬೇಕು. ಅದಕ್ಕಾಗಿ ಪ್ರತಿ ಇಲಾಖೆ ಶೇಕಡಾ 24ರಷ್ಟು ಹಣ ಮೀಸಲಿಡುತ್ತೆ. ಸಿದ್ದರಾಮಯ್ಯ ಸರ್ಕಾರ ಕಳೆದ ವರ್ಷ 11,000 ಕೋಟಿ ರೂ. ಬಳಸಿದೆ. ಈ ವರ್ಷ 14 ಸಾವಿರ ಕೋಟಿ ಹಣವನ್ನು ದುರ್ಬಳಕೆ ಮಾಡಿದೆ. ಎಸ್ಸಿ, ಎಸ್ಟಿ (SC, ST)ಗೆ ಮೀಸಲಿಟ್ಟಿದ್ದ 25,000 ಕೋಟಿ ರೂ. ದುರ್ಬಳಕೆಯಾಗಿದೆ ಎಂದು ರಾಮುಲು ಆರೋಪಿಸಿದರು.
ಸಚಿವರನ್ನು ನೇಮಕ ಮಾಡಿ ಸಮುದಾಯ ಅಭಿವೃದ್ಧಿಗೆ ಮುನ್ನಡಿ ಬರೆದಿದ್ದರು. ಹಿಂದಿನ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದ ಬಿಜೆಪಿ ಸರ್ಕಾರ ಸಮುದಾಯದ ಸಚಿವಾಲಯ ಮಾಡಿದ್ದರು. ಎಸ್ಟಿ ಸಮುದಾಯದ ಮೀಸಲಾತಿ ಪ್ರಮಾಣ ಶೇ7ಕ್ಕೆ ಹೆಚ್ಚಿಸಿದ್ದರು. ವಾಲ್ಮೀಕಿ ನಿಗಮದ ಅಮಾಯಕ ಅಧಿಕಾರಿ ನೇಣಿಗೆ ಶರಣಾಗಿದ್ದಾರೆ. ಸಚಿವರ ಮೌಖಿಕ ಆದೇಶದಂತೆ ತೆಲಂಗಾಣಕ್ಕೆ ಹಣ ವರ್ಗಾವಣೆಯಾಗಿದೆ. ವೈನ್ ಶಾಪ್ (Wine Shop), ಚಿನ್ನದ ಅಂಗಡಿಗಳಲ್ಲಿ ದಲಿತರ ಹಣ ಡ್ರಾ ಮಾಡಿದ್ರು.
![](https://sp-ao.shortpixel.ai/client/to_webp,q_glossy,ret_img,w_1000,h_600/https://vijayatimes.com/wp-content/uploads/2024/06/Valmiki-Corporation-Scam-case.webp)
ಹಣಕಾಸು ಇಲಾಖೆಯಲ್ಲೇ ಭ್ರಷ್ಟಾಚಾರ ನಡೆದಿರುವ ಅನುಮಾನ ಇದೆ. ಸಿಎಂ ಸಿದ್ದರಾಮಯ್ಯ ಬಳಿಯೇ ಹಣಕಾಸು ಇಲಾಖೆಯಿದೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿದ್ದೇವೆ. ಮುಖ್ಯಮಂತ್ರಿಗೆ ಮಾಹಿತಿ ಇಲ್ಲದೆ ಈ ರೀತಿ ಆಗಲು ಸಾಧ್ಯವಿಲ್ಲ. ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ರಾಜೀನಾಮೆ ಸಾಕಾಗಲ್ಲ. ಜೂನ್ 28ರಂದು ರಾಜ್ಯಾದ್ಯಂತ ಬಿಜೆಪಿ (BJP) ಪ್ರತಿಭಟನೆಗೆ ನಿರ್ಧರಿಸಿದೆ ಎಂದು ರಾಮುಲು ಹೇಳಿದರು.
ಏನಿದು ಹಗರಣ?
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಸಂಬಂಧಿಸಿದ ಬ್ಯಾಂಕ್ ಖಾತೆಯಿಂದ 18 ಖಾತೆಗಳಿಗೆ ಬರೋಬ್ಬರಿ 94.73 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆಯಾಗಿತ್ತು. ಎಂಜಿ ರಸ್ತೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಿಂದ (Union Bank Of India) ಹಣ ವರ್ಗಾವಣೆಯಾಗಿತ್ತು. ಈ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್ಐಟಿ (SIT) ರಚಿಸಿತ್ತು. ಹಗರಣ ಸಂಬಂಧ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್, ಮಾಜಿ ಸಚಿವ ಬಿ. ನಾಗೇಂದ್ರ (B Nagendra) ಅವರ ಆಪ್ತ ಎನ್ನಲಾದ ನಾಗರಾಜ್ ನೆಕ್ಕುಂಟಿ, ನಾಗೇಶ್ವರ್ ರಾವ್ ಎಂಬುವವರನ್ನು ಎಸ್ಐಟಿ ಬಂಧಿಸಿದ್ದು ವಿಚಾರಣೆಗೆ ಒಳಪಡಿಸಿದೆ.