ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಜಗ್ಗೇಶ್

Jaggesh

ನವದೆಹಲಿ : ‌ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿ ಚುನಾಯಿತರಾಗಿರುವ ಕನ್ನಡದ ಹಿರಿಯ ನಟ ಜಗ್ಗೇಶ್‌ (BJP Rajyasabha member jaggesh).

ಇಂದು ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇದಕ್ಕೂ ಮುನ್ನ ನವದೆಹಲಿಯಲ್ಲಿರುವ ರಾಘವೇಂದ್ರ ಸ್ವಾಮಿ ಮಠಕ್ಕೆ ಪತ್ನಿ ಪರಿಮಳ ಅವರೊಂದಿಗೆ ಭೇಟಿ ನೀಡಿ, ಬೃಂದಾವನ ದರ್ಶನ ಪಡೆದುಕೊಂಡಿದ್ದರು(BJP Rajyasabha member jaggesh).


ವಿವಿಧ ರಾಜ್ಯಗಳಿಂದ ರಾಜ್ಯಸಭೆಗೆ ಚುನಾಯಿತರಾದ 24 ಮಂದಿ ಸದಸ್ಯರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಕರ್ನಾಟಕದಿಂದ ಆಯ್ಕೆಯಾದ ಬಿಜೆಪಿಯ ನಿರ್ಮಲಾ ಸೀತರಾಮನ್(Nirmala Sitharaman), ಜಗ್ಗೇಶ್, ಲೆಹರ್ ಸಿಂಗ್ ಮತ್ತು ಕಾಂಗ್ರೆಸ್‌ನ ಜೈರಾಮ್ ರಮೇಶ್ ಪ್ರಮಾಣ ವಚನ ಸ್ವೀಕರಿಸಿದರು‌.

ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಬಿಜೆಪಿಯ ಲೆಹರ್ ಸಿಂಗ್ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ನಟ ಜಗ್ಗೇಶ್‌ ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. 

ಘನಶಾಮ್ ತಿವಾರಿ, ನಾಬುರಾವ್ ನಿಶಾದ್, ಧನಜಯ್ ಮಧು, ಸುರೇಂದ್ರ ಕುಮಾರ್, ಪಿಯೂಷ್ ಗೋಯೆಲ್, ಲಕ್ಷ್ಮಿಕಾಂತ್ ಬಾಜಪೇಯ್, ಮುಕುಲ್ ವಾಸ್ನಿಕ್ ಸೇರಿದಂತೆ ಒಟ್ಟು 24 ಸದಸ್ಯರು ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇನ್ನು ನಟ ಜಗ್ಗೇಶ್‌ ಕಾಂಗ್ರೆಸ್‌ ಪಕ್ಷದ ಮೂಲಕ ರಾಜಕೀಯ ಪ್ರವೇಶಿಸಿದರು. ಕಾಂಗ್ರೆಸ್‌ನಿಂದ ತುರುವೇಕೆರೆ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. ಮುಂದೆ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆಯಾಗಿ, ೨೦೧೦ ರಂದು ಕರ್ನಾಟಕ ವಿಧಾನ ಪರಿಷತ್ತಿಗೆ ಜಗ್ಗೇಶ್ ಅವರು ನಾಮ ನಿರ್ದೇಶನಗೊಂಡರು.

https://vijayatimes.com/nation-first-cable-stayed-rail-bridge/

ಸದ್ಯ ಕರ್ನಾಟಕ ರಾಜ್ಯ ಬಿಜೆಪಿಯ(State BJP) ವಕ್ತಾರನಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅಚ್ಚರಿ ಎಂಬಂತೆ ರಾಜ್ಯಸಭಾ ಚುನಾವಣೆಯಲ್ಲಿ ಜಗ್ಗೇಶ್‌ ಅವರಿಗೆ ಬಿಜೆಪಿಯಿಂದ ಟಿಕೆಟ್‌ ನೀಡಲಾಗಿತ್ತು.
Exit mobile version