PSI Exam on The Same Date as UPSC Exam: BJP Sparks Against State Govt
Bengaluru: ಕೇಂದ್ರ ಲೋಕಸಭಾ ಆಯೋಗ ನಡೆಸುವ UPSC ಪರೀಕ್ಷೆಯ ದಿನಾಂಕದಂದೇ PSI ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿರುವುದಕ್ಕೆ ವಿಪಕ್ಷ ಬಿಜೆಪಿ (BJP) ಕಿಡಿಕಾರಿದೆ.
ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ (BJP), ಯುವಕರ ಭವಿಷ್ಯದ ಕುರಿತು ಎಳ್ಳಷ್ಟು ಕಾಳಜಿಯಿಲ್ಲದ ಭ್ರಷ್ಟ ಕಾಂಗ್ರೆಸ್ ಸರ್ಕಾರ, ಯುಪಿಎಸ್ಸಿ ಪರೀಕ್ಷೆ ನಡೆಯುವ ದಿನಾಂಕದಂದೇ ಪಿಎಸ್ಐ ಪರೀಕ್ಷೆ (PSI Exam) ದಿನಾಂಕ ನಿಗದಿ ಮಾಡುವ ಮೂಲಕ ಯುವಕರ ಭವಿಷ್ಯಕ್ಕೆ ಕಲ್ಲು ಹಾಕಲು ಹೊರಟಿದೆ. ಯುಪಿಎಸ್ಸಿ ಹಲವು ತಿಂಗಳುಗಳ ಮೊದಲೇ ಪರೀಕ್ಷೆ ದಿನಾಂಕ ಪ್ರಕಟಿಸುತ್ತಿದೆ.
ಅದರಂತೆ, ಜೂನ್ (June)16ರಂದು ಯುಪಿಎಸ್ಸಿ ಪ್ರಿಲಿಮ್ಸ್ ಪರೀಕ್ಷೆ ನಡೆದಿದ್ದು, ಸೆಪ್ಟೆಂಬರ್ 22ಕ್ಕೆ ಮುಖ್ಯ ಪರೀಕ್ಷೆ ನಡೆಯಲಿದೆ. ವಿವೇಚನೆ, ಸಂವೇದನೆ ಇಲ್ಲದ ಸಿಎಂ ಸಿದ್ದರಾಮಯ್ಯನವರ (Siddaramaiah) ಸರ್ಕಾರ ಪಿಎಸ್ಐ ಪರೀಕ್ಷೆಯನ್ನು ಸೆ.22ರಂದೇ ನಡೆಸುವುದಾಗಿ ಜುಲೈ 31ರಂದು ಪ್ರಕಟಿಸಿದೆ. ಈ ಮೂಲಕ ಯುವಕರ ಉದ್ಯೋಗದ ಕನಸಿಗೆ ಕೊಳ್ಳಿಯಿಡುವ ಕೆಲಸ ಮಾಡಿದೆ. ಸೆ.22ರಂದು ನಿಗದಿಯಾಗಿರುವ ಯುಪಿಎಸ್ಸಿ ಮುಖ್ಯ ಪರೀಕ್ಷೆ, ಎಸ್ಎಸ್ಸಿ ಪರೀಕ್ಷೆ ಜೊತೆಗೆ ಪಿಎಸ್ಐ ಪರೀಕ್ಷೆಯೂ ನಡೆದರೆ ಮೂರೂ ಪರೀಕ್ಷಾರ್ಥಿಗಳಿಗೆ ತೊಂದರೆಯಾಗಲಿದೆ ಎಂದಿದೆ.
ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ ನಿಗದಿ ಗೊಂದಲದ ಕುರಿತು ವಿಧಾನ ಪರಿಷತ್ ಸದಸ್ಯರಾದ ಶ್ರೀ ಶಶಿಲ್ ನಮೋಶಿ ಅವರು ಈ ಹಿಂದೆ ಮೇಲ್ಮನೆಯಲ್ಲಿ ಕೇಳಿದ್ದ ಪ್ರಶ್ನೆಗೆ, ಯುಪಿಎಸ್ಸಿ, ಎಸ್ಎಸ್ಸಿ ಹಾಗೂ ಎನ್ಟಿಎ ಮತ್ತು ಇತರ ನೇಮಕಾತಿ ಪ್ರಾಧಿಕಾರಗಳಿಂದ ಪ್ರಕಟಿತವಾಗುವ ವೇಳಾಪಟ್ಟಿ ಗಮನದಲ್ಲಿಟ್ಟುಕೊಂಡು ತಾತ್ಕಾಲಿಕ ಪರೀಕ್ಷಾ ದಿನಾಂಕ ನಿಗದಿಪಡಿಸಲಾಗುತ್ತಯೇ? ಎಂಬ ಪ್ರಶ್ನೆಗೆ ಇಲ್ಲ ಒಂದು ವೇಳೆ ಪರೀಕ್ಷೆಗೆ ತೊಂದರೆಯಾದರೇ ಪರೀಕ್ಷೆ ದಿನಾಂಕ ಮರು ನಿಗದಿಪಡಿಸಲಾಗುವುದು ಎಂಬುದಾಗಿ ಸ್ವತಃ ಮುಖ್ಯಮಂತ್ರಿಗಳೇ ವಿಧಾನ ಪರಿಷತ್ತಿನಲ್ಲಿ ಉತ್ತರಿಸಿದ್ದಾರೆ.
ಸದ್ಯ ಉಲ್ಟಾ ಹೊಡೆದಿರುವ ಕಾಂಗ್ರೆಸ್ ಸರ್ಕಾರ (Congress Government) ಸೆ.22ರಂದು ಪಿಎಸ್ಐ ಪರೀಕ್ಷೆ ನಡೆಸಲು ಹೊರಟಿರುವುದು ಖಂಡನೀಯ, ಕೂಡಲೇ, ವಿದ್ಯಾರ್ಥಿ ವಿರೋಧಿ ನೀತಿ ಕೈಬಿಟ್ಟು, ಸಾವಿರಾರು ಉದ್ಯೋಗಾಕಾಂಕ್ಷಿ ಪರೀಕ್ಷಾರ್ಥಿಗಳ ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ಪಿಎಸ್ಐ ಪರೀಕ್ಷೆಯ ದಿನಾಂಕವನ್ನು ಮರು ನಿಗದಿ ಮಾಡಲಿ ಎಂದು ಆಗ್ರಹಿಸಿದೆ.
BJP Sparks Against Karnataka Govt Latest News
Bengaluru: The opposition BJP (BJP) has come under fire for the state government’s decision to conduct the PSI exam on the same date as the UPSC exam conducted by the Central Lok Sabha Commission.
The state BJP (BJP) has tweeted about this, the corrupt Congress government, which does not care enough about the future of the youth, is going to put a stone in the future of the youth by fixing the date of the PSI Exam on the same date as the UPSC exam. UPSC announces exam date several months in advance.
Accordingly, the UPSC prelims exam was held on June 16 and the mains exam will be held on September 22. The insensitive CM Siddaramaiah’s government has announced on July 31st that the PSI exam will be held on September 22nd. Through this, the job of the youth has been snatched away. It is said that if PSI exam is held along with UPSC main exam scheduled on September 22, SSC exam, all the three candidates will face problems.
In response to the question raised by Vidhan Parishad member Mr. Shashil Namoshi in the upper house earlier on the confusion of competitive exam date, will the provisional exam date be fixed keeping in mind the schedule published by UPSC, SSC and NTA and other recruitment authorities? No to the question, the Chief Minister himself has answered in the Legislative Council that if there is any problem in the examination, the date of the examination will be rescheduled.
It is condemnable that the Congress government, which is now on the wrong side, is going to conduct the PSI exam on September 22. It has demanded that the date of the PSI exam should be rescheduled keeping in mind the future of thousands of job aspirants and abandoning the anti-student policy.