2022-23ರ ನೂತನ ಶೈಕ್ಷಣಿಕ ಪಠ್ಯ ಪರಿಷ್ಕರಣೆ ಕುರಿತು ಕಾಂಗ್ರೆಸ್ ನಾಯಕ(Congress Leader) ಸಿದ್ದರಾಮಯ್ಯ(Siddaramaiah) ಮಾಡಿರುವ ಟೀಕೆಗೆ ಉತ್ತರವಾಗಿ ಬಿಜೆಪಿ ಸಚಿವ(BJP MLA) ಸುನೀಲ್‍ಕುಮಾರ್(Sunil Kumar) ಸರಣಿ ಟ್ವೀಟ್‍ಗಳ ಮೂಲಕ ಸಿದ್ದರಾಮಯ್ಯ ಅವರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಈ ಹಿಂದೆ ಮಾಡಿರುವ ತಪ್ಪನ್ನು ಸರಿಪಡಿಸುವ ಕೆಲಸ ನಾವು ಮಾಡುತ್ತಿದ್ದೇವೆ ಎಂದು ಪಠ್ಯ ಪರಿಷ್ಕರಣೆಯನ್ನು ಸಮರ್ಥಿಸಿಕೊಂಡಿದ್ದಾರೆ. ಸುನೀಲ್‍ಕುಮಾರ್ ಅವರ ಸರಣಿ ಟ್ವೀಟ್‍ಗಳ ವಿವರ ಇಲ್ಲಿದೆ ನೋಡಿ. ನಾವು ವಿವೇಕಾನಂದರ ವಂಶಸ್ಥರೇ ವಿನಃ ಮೊಘಲರ ವಂಶಸ್ಥರಲ್ಲ. ಯಾವ ತಪ್ಪನ್ನು ಕಾಂಗ್ರೆಸ್ ಮಾಡಿತ್ತೋ ಅದನ್ನು ಸರಿಪಡಿಸುವ ಕೆಲಸ ನಾವು ಮಾಡುತ್ತಿದ್ದೇವೆ. ಆ ಇತಿಹಾಸವನ್ನು ಪಠ್ಯಕ್ರಮದಲ್ಲಿ ಜೋಡಿಸುವಂತಹ ಕಾರ್ಯವನ್ನು ತಜ್ಞರ ಸಮಿತಿ ಕೈಗೊಂಡಿರುವುದು ಸ್ವಾಗತಾರ್ಹ.
ಭಾರತದ ಯುವ ಜನತೆಗೆ ಬೇಕಾಗಿರುವುದು ವಿವೇಕಾನಂದ, ವಿಜಯನಗರ, ನಾರಾಯಣ ಗುರು, ಶಂಕರಾಚಾರ್ಯರಂತಹ ದಾರ್ಶನಿಕರ ಜೀವನ ಕ್ರಮವೇ ಹೊರತು ಮೆಕಾಲೆ ಪ್ರೇರಿತ, ಮೊಘಲರ, ಟಿಪ್ಪು ಸುಲ್ತಾನರ ಇತಿಹಾಸವಲ್ಲ ಭಾರತದ ಶೌರ್ಯ, ಪರಾಕ್ರಮದ ಇತಿಹಾಸವನ್ನು ಪಠ್ಯಕ್ರಮದಲ್ಲಿ ಉದ್ದೇಶಪೂರ್ವಕವಾಗಿ ಮರೆಮಾಚಿ, ತಿರುಚಿದ ಇತಿಹಾಸವನ್ನು ತಿಳಿಸುವ ಕೃತ್ಯವನ್ನು ಕಾಂಗ್ರೆಸ್ ಕಳೆದ 70 ವರ್ಷಗಳಲ್ಲಿ ಮಾಡುತ್ತಾ ಬಂದಿತ್ತು. ಈಗ ಭಾರತದ ಯುವಕರಿಗೆ ಬೇಕಾಗಿರುವುದು ಭಾರತದ ನೈಜ ಇತಿಹಾಸವೇ ಹೊರತು ದಾಸ್ಯದ ಇತಿಹಾಸವಲ್ಲ.” ಎಂದಿದ್ದಾರೆ.

ಇನ್ನು ರಾಜ್ಯ ಸರ್ಕಾರ ಶೈಕ್ಷಣಿಕ ಪಠ್ಯ ಪರಿಷ್ಕರಣೆಯನ್ನು ಮಾಡಿದೆ. ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷರನ್ನಾಗಿ ಖ್ಯಾತ ಯುವ ಬರಹಗಾರ ರೋಹಿತ್ ಚಕ್ರತೀರ್ಥ ಅವರನ್ನು ನೇಮಿಸಿತ್ತು. ಈ ಹಿಂದೆ ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ಸಾಹಿತಿ ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ರಚಿಸಿದ್ದ ಪಠ್ಯವನ್ನು ನೂತನ ಸಮಿತಿ ಪರಿಷ್ಕರಣೆ ಮಾಡಿದೆ.
ಇತಿಹಾಸ ಪಠ್ಯದಲ್ಲಿ ಬರಗೂರು ರಾಮಚಂದ್ರಪ್ಪ ಸಮಿತಿ ಅನೇಕ ದೋಷಗಳನ್ನು ಮಾಡಿತ್ತು ಎಂದು ರೋಹಿತ್ ಚಕ್ರತೀರ್ಥ ಆರೋಪಿಸಿದ್ದರು.