ಕನಕಪುರದ(Kanakapura) ಬಂಡೆಯೊಂದು ಪಕ್ಷ ಪೂಜೆಯೇ ಅಂತಿಮ, ವ್ಯಕ್ತಿ ಪೂಜೆಯಲ್ಲ ಎಂದು ಗುಡುಗುತ್ತಿದೆ.
ಆ ಬಂಡೆಗೆ ಡೈನಾಮೈಟ್ ಇಡಲು ಸಿದ್ದರಾಮಯ್ಯ(Siddaramaiah) ಸಜ್ಜಾಗಿದ್ದಾರೆ. ಸಿದ್ದರಾಮೋತ್ಸವದ ಬಳಿಕ ಕನಕಪುರದ ಬಂಡೆ ಛಿದ್ರವಾಗಲಿದೆಯೇ? ತಾವೇ ನಿರ್ದೇಶಿಸುತ್ತಿರುವ ಚಲನಚಿತ್ರಕ್ಕೆ ಸಿದ್ದರಾಮಯ್ಯ ನಾಯಕರಾಗಲು ಹೊರಟಿದ್ದಾರೆ.
ಸಿದ್ದರಾಮೊತ್ಸವ ಎನ್ನುವುದು ಸಿದ್ದರಾಮಯ್ಯ ಬ್ಯಾನರ್ ಅಡಿ ತಯಾರಾಗುತ್ತಿರುವ ಚಿತ್ರ. ಈ ಚಿತ್ರದ ಮೂಲಕ ತಾವೇ ಮುಂದಿನ ಸಿಎಂ ಎಂಬ ಸಂದೇಶ ನೀಡುವುದು ಖಚಿತ.
ಶ್ರಮ ಡಿಕೆಶಿ(DKS) ಅವರದ್ದು, ಅಧಿಕಾರ ಮಾತ್ರ ಸಿದ್ದರಾಮಯ್ಯಗೆ. ಇದುವರೆಗೆ ತಮ್ಮ ಪಟಾಲಂ ಮೂಲಕ ಸಿದ್ದರಾಮಯ್ಯ “ತಾನೇ ಮುಂದಿನ ಮುಖ್ಯಮಂತ್ರಿ” ಎಂಬ ಹೇಳಿಕೆ ಕೊಡಿಸುತ್ತಿದ್ದರು.
ಈಗ ನೇರವಾಗಿ “ನಾನೇ ಮುಖ್ಯಮಂತ್ರಿ ಆಗಬೇಕೆಂದು ನನ್ನ ರಾಜಕೀಯ ಗುರುಗಳು ಆಶಿಸಿದ್ದರು” ಎಂದು ಹೇಳುವ ಮೂಲಕ ಕುರ್ಚಿಯ ಆಸೆ ಬಿಚ್ಚಿಟ್ಟಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರ(KPCC President) ವಿರೋಧ ನಡುವೆಯೂ ಸಿದ್ದರಾಮೋತ್ಸವ ನಡೆಯಲಿದೆ ಎಂದಾದರೆ ಡಿಕೆಶಿ ಇದ್ದೂ ಇಲ್ಲದಂತಾಗಿದ್ದಾರೆ.
ಸಿದ್ದರಾಮೊತ್ಸವ ಕೇವಲ ಸಿದ್ದರಾಮಯ್ಯರ ಜನ್ಮದಿನೋತ್ಸವವಲ್ಲ. ಅದು ಡಿಕೆಶಿಯ ರಾಜಕೀಯ ಬೆಳವಣಿಗೆಗೆ ತೋಡುತ್ತಿರುವ ಗುಂಡಿ. ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿರುವ ಡಿ.ಕೆ.ಶಿವಕುಮಾರ್ ಹಲ್ಲಿಲ್ಲದ ಹಾವು. ಬೆವರು, ಬಂಡವಾಳ ಹೂಡುತ್ತಿರುವ ಡಿಕೆಶಿ ಏನು ಮಾಡಬೇಕು? ಚುನಾವಣೆ ಹತ್ತಿರ ಬರುತ್ತಿದ್ದಂತೆ ಸಿದ್ದರಾಮಯ್ಯ ಅವರಿಗೆ ಸಿಎಂ ಕುರ್ಚಿಯ ಕನಸು ಹೆಚ್ಚಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷರು ವ್ಯಕ್ತಿಗಿಂತ ಪಕ್ಷ ಮುಖ್ಯ ಎನ್ನುತ್ತಿದ್ದಾರೆ.