ಬಿಜೆಪಿಯ ಮುಂದಿನ ಗುರಿ ‘ಆಪರೇಷನ್ ಹಳೇಮೈಸೂರು’!

bjp

ಮುಂಬರುವ ವಿಧಾನಸಭಾ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ತೆಗೆದುಕೊಂಡಿರುವ ಬಿಜೆಪಿ(BJP) ಕರ್ನಾಟಕದಲ್ಲಿ ಅಧಿಕಾರ ಉಳಿಸಿಕೊಳ್ಳಲು ಎಲ್ಲ ರೀತಿಯ ಅಸ್ತ್ರಗಳ ಪ್ರಯೋಗಕ್ಕೆ ಮುಂದಾಗಿದೆ. ಈಗಾಗಲೇ ಅಮಿತ್ ಶಾ(Amit Shah) ರಾಜ್ಯಕ್ಕೆ ಭೇಟಿ ನೀಡಿ ಇಲ್ಲಿಯ ರಾಜಕೀಯ ಪರಿಸ್ಥಿತಿಯ ಬಗ್ಗೆ ಅವಲೋಕನ ನಡೆಸಿದ್ದಾರೆ.

ರಾಜ್ಯ ನಾಯಕರೊಂದಿಗೆ ಸುಧೀರ್ಘ ಚರ್ಚೆ ನಡೆಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಮರಳಿ ಅಧಿಕಾರ ಹಿಡಿಯಲು ಮಾಡಬೇಕಾದ ತಂತ್ರಗಳ ಬಗ್ಗೆಯೂ ಚರ್ಚೆ ನಡೆಸಿದ್ದಾರೆ. ಅಮಿತ್ ಶಾ ನೀಡಿರುವ ಸೂಚನೆಯ ಮೊದಲ ಭಾಗವಾಗಿ ಚುನಾವಣೆಗೂ ಮುನ್ನ ‘ಆಪರೇಷನ್ ಹಳೇಮೈಸೂರು’ ನಡೆಸಲು ರಾಜ್ಯ ಬಿಜೆಪಿ ಸಿದ್ದತೆ ನಡೆಸಿದೆ ಎನ್ನಲಾಗಿದೆ. ಸದ್ಯ ರಾಜ್ಯದಲ್ಲಿ ಬಿಜೆಪಿ ಪಕ್ಷದ ಬಲಾಬಲಗಳ ಬಗ್ಗೆ ಸುಧೀರ್ಘ ವರದಿಯೊಂದು ಅಮಿತ್ ಶಾ ಕೈ ಸೇರಿದೆ. ಈ ವರದಿಯ ಪ್ರಕಾರ ಹಳೇಮೈಸೂರು ಭಾಗದ 87 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಕೇವಲ 10 ಕ್ಷೇತ್ರಗಳಲ್ಲಿ ಮಾತ್ರ ಪ್ರಬಲ ನೆಲೆ ಹೊಂದಿದೆ.

ಉಳಿದ ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್-ಜೆಡಿಎಸ್ ನಡುವೆ ನೇರ ಹಣಾಹಣಿ ಇದ್ದು, ಬಿಜೆಪಿ ಪಕ್ಷ ಹಳೇಮೈಸೂರು ಭಾಗದ ಅನೇಕ ಕ್ಷೇತ್ರಗಳಲ್ಲಿ ಮೂರನೇಯ ಸ್ಥಾನದಲ್ಲಿದೆ. ಹೀಗಾಗಿ ಹಳೇಮೈಸೂರು ಭಾಗದಲ್ಲಿ ಪಕ್ಷದ ಶಕ್ತಿ ಹೆಚ್ಚಿಸಲು ಅಮಿತ್ ಶಾ ಮುಂದಾಗಿದ್ದಾರೆ. ಹೀಗಾಗಿ ‘ಆಪರೇಷನ್ ಹಳೇಮೈಸೂರು’ ನಡೆಸುವ ಮೂಲಕ ಅತೃಪ್ತ ಹಾಲಿ ಶಾಸಕರು, ಮಾಜಿ ಶಾಸಕರು, ಸಂಸದರು ಸೇರಿದಂತೆ ಪ್ರಮುಖ ನಾಯಕರನ್ನು ಬಿಜೆಪಿಗೆ ಕರೆತರಲು ಭರ್ಜರಿ ಆಫರ್‍ಗಳನ್ನು ನೀಡಲಾಗುತ್ತಿದೆ.


ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೇರಲು ಹಳೇಮೈಸೂರು ಭಾಗದಲ್ಲಿ ಶಕ್ತಿ ಹೆಚ್ಚಿಸಿಕೊಳ್ಳುವುದು ಅನಿವಾರ್ಯ. ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ‘ಆಪರೇಷನ್ ಕಮಲ’ ನಡೆಸಲು ತೆರೆಮರೆಯಲ್ಲಿ ಸಿದ್ದತೆ ನಡೆದಿದೆ. ಆರ್. ಅಶೋಕ ಮತ್ತು ಸಿ.ಪಿ ಯೋಗೇಶ್ವರ್‍ಗೆ ಈ ಜವಾಬ್ದಾರಿ ನೀಡಲಾಗಿದೆ. ಗೆಲ್ಲುವ ಸಾಮಥ್ರ್ಯವಿರುವ ಅಭ್ಯರ್ಥಿಗಳಿಗೆ ಭರ್ಜರಿ ಆಫರ್‍ಗಳನ್ನು ನೀಡಲಾಗುತ್ತಿದೆ ಎನ್ನಲಾಗಿದೆ.

Exit mobile version