ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಈ ಬಾರಿ 200ಕ್ಕೂ ಅಧಿಕ ಸ್ಥಾನದಲ್ಲಿ ಗೆಲ್ಲಲಿದೆ: ಅಮಿತ್ ಶಾ

ಕೋಲ್ಕತ್ತಾ, ಮಾ. 29: ”ಪಶ್ಚಿಮ ಬಂಗಾಳದ ಜನ ಬದಲಾವಣೆ ಬಯಸಿದ್ದಾರೆ. ಹೀಗಾಗಿ ಬಿಜೆಪಿ ಪಕ್ಷ ಈ ಬಾರಿಯ ಚುನಾವಣೆಯಲ್ಲಿ 200ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಹುಮತದ ಸರ್ಕಾರವನ್ನು ರಚನೆ ಮಾಡಲಿದೆ” ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಂಗಾಳದಲ್ಲಿ 8 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 27 ರಂದು ಮೊದಲ ಹಂತದ ಮತದಾನ ನಡೆದಿದೆ.

ಅಸ್ಸಾಂನ 47 ಮತ್ತು ಪಶ್ಚಿಮ ಬಂಗಾಳದ 30 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಗೆ ಶನಿವಾರ ಮೊದಲ ಹಂತದ ಮತದಾನ ನಡೆದಿದೆ. ಎರಡು ರಾಜ್ಯಗಳಲ್ಲಿ ಬಿಜೆಪಿ ಬಹುಮತದ ಸ್ಥಾನಗಳನ್ನು ಪಡೆಯಲಿದೆ. ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಬಿಜೆಪಿ 200 ಕ್ಕೂ ಹೆಚ್ಚು ಸ್ಥಾನಗಳನ್ನು ಸುಲಭವಾಗಿ ಗೆಲ್ಲುತ್ತದೆ ಎಂಬುದನ್ನು ಅಲ್ಲಿಂದ ಪಡೆದ ಪ್ರತಿಕ್ರಿಯೆಗಳ ಆಧಾರದ ಮೇಲೆ ಹೇಳುತ್ತೇನೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಮೊದಲ ಹಂತದಲ್ಲಿ, ಬಂಗಾಳದ 30 ಸ್ಥಾನಗಳಲ್ಲಿ 26 ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ. ಸ್ಥಾನಗಳು ಇನ್ನು ಹೆಚ್ಚಾಗಬಹುದು. ಅಸ್ಸಾಂನ 47 ಸ್ಥಾನಗಳಲ್ಲಿ 37 ಕ್ಕೂ ಹೆಚ್ಚು ಸ್ಥಾನಗಳನ್ನು ಪಕ್ಷವು ಗೆಲ್ಲುತ್ತದೆ ಎಂಬ ಸ್ಪಷ್ಟ ಸೂಚನೆಗಳನ್ನು ನಾವು ಪಡೆದುಕೊಂಡಿದ್ದೇವೆ” ಎಂದು ಅಮಿತ್​ ಶಾ ಹೇಳಿದ್ದಾರೆ.

Exit mobile version