ವಿಧಾನಸಭೆ ಚುನಾವಣೆ ಬೆನ್ನಲ್ಲೇ ಟಿಎಂಸಿ ಸೇರ್ಪಡೆಯಾದ ಬಿಜೆಪಿ ಹಿರಿಯ ನಾಯಕ ಯಶವಂತ ಸಿನ್ಹಾ

ನವದೆಹಲಿ, ಮಾ. 13: ಪಶ್ಚಿಮ ಬಂಗಾಳ ವಿಧಾನಸಬಾ ಚುನಾವಣೆಯ ರಂಗು ಗರಿಗೇರಿದ್ದು, ಹಲವು ರಾಜಕೀಯ ಮೇಲಾಟಗಳಿಗೆ ಸಾಕ್ಷಿಯಾಗುತ್ತಿದೆ. ಟಿಎಂಸಿಯನ್ನು ಅಧಿಕಾರದಿಂದ ಕೆಳಗಿಳಿಸಿ, ತಾನು ಅಧಿಕಾರಕ್ಕೆ ಬರಲು ಬಿಜೆಪಿ ಹರಸಾಹಸ ಪಡುತ್ತಿದ್ದರೆ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಕೂಡ ಬಿಜೆಪಿಯನ್ನು ರಾಜ್ಯದೊಳಗೆ ಬಿಟ್ಟುಕೊಳ್ಳದಿರಲು ಹಲವು ಕಸರತ್ತು ನಡೆಸುತ್ತಿದ್ದಾರೆ. ಇದರ ಮಧ್ಯೆ, ಬಿಜೆಪಿಯ ಹಿರಿಯ ನಾಯಕ ಯಶವಂತ್ ಸಿನ್ಹಾ ಅವರು ಬಿಜೆಪಿ ತೊರೆದು ಟಿಎಂಸಿ ಪಕ್ಷ ಸೇರ್ಪಡೆಯಾಗಿದ್ದಾರೆ. ಪಶ್ಚಿಮಬಂಗಾಳ ವಿಧಾನಸಭೆ ಚುನಾವಣೆ ದಿನಗಳು ಬಾಕಿ ಇರುವಂತೆ ಯಶವಂತ ಸಿನ್ಹಾ ಅವರು ಟಿಎಂಸಿ ಸೇರಿರುವುದು ಭಾರಿ ಕುತೂಹಲ ಮೂಡಿಸಿದೆ.

ಬಿಜೆಪಿ ತೊರೆದು ತೃಣಮೂಲ ಕಾಂಗ್ರೆಸ್ (ಟಿಎಸಿ) ಸೇರ್ಪಡೆಯಾದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಶವಂತ ಸಿನ್ಹಾ ಅವರು, ಇಂದು ದೇಶ ಅನಿರೀಕ್ಷಿತ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಪ್ರಜಾಪ್ರಭುತ್ವದ ಶಕ್ತಿ ಪ್ರಜಾಪ್ರಭುತ್ವದ ಅಂಗಸಂಸ್ಥೆಗಳ ಬಲದಲ್ಲಿದೆ. ಆದರೆ, ಇಂದು ನ್ಯಾಯಾಂಗ ಸೇರಿದಂತೆ ಎಲ್ಲ ಅಂಗಗಳು ದುರ್ಬಲಗೊಂಡಿವೆ ಎಂದು ಯಶವಂತ ಸಿನ್ಹಾ ಅವರು ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಬುಧವಾರ ನಂದಿಗ್ರಾಮದಲ್ಲಿ ನಾಮಪತ್ರ ಸಲ್ಲಿಕೆಗೆ ತೆರಳಿದ್ದ ಸಂದರ್ಭದಲ್ಲಿ ಕೆಲವರು ಅವರ ಮೇಲೆ ಹಲ್ಲೆ ನಡೆಸಿದ್ದರು. ಈ ಹಲ್ಲೆಯಿಂದ ಅವರ ಕಾಲಿನ ಭಾಗಕ್ಕೆ ತೀವ್ರ ಗಾಯಗಳಾಗಿದ್ದು, ಅವರನ್ನು ಮತ್ತೆ ಕೋಲ್ಕತ್ತಾಗೆ ಕರೆದುಕೊಂಡು ಹೋಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಸರ್ಕಾರಿ ವೈದ್ಯರು ಅವರ ಕಾಲು ಮತ್ತು ಕುತ್ತಿಗೆ ಭಾಗದಲ್ಲಿ ತೀವ್ರತರವಾದ ಗಾಯಗಳಾಗಿವೆ ಎಂದು ಮಾಹಿತಿ ನೀಡಿದ್ದರು. ಇದು ಯೋಚಿತ ದಾಳಿ ಎಂದು ಮಮತಾ ಬ್ಯಾನರ್ಜಿ ಪರೋಕ್ಷವಾಗಿ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಆದರೆ, ಮಮತಾ ಬ್ಯಾನರ್ಜಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ಘಟಕ “ರಾಜಕೀಯಕ್ಕಾಗಿ ದಾಳಿಯ ಬಗ್ಗೆ ಮಮತಾ ಬ್ಯಾನರ್ಜಿ ಸುಳ್ಳು ಹರಡುತ್ತಿದ್ದಾರೆ. ಹಾಗಾಗಿ ಚುನಾವಣಾ ಆಯೋಗಕ್ಕೆ ಈ ಕುರಿತು ಪಶ್ಚಿಮ ಬಂಗಾಳ ಬಿಜೆಪಿ ದೂರು ನೀಡಲಿದೆ” ಎಂದು ತಿಳಿಸಿತ್ತು.

Exit mobile version