• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ತಮ್ಮ ವೈಫಲ್ಯದ ಬಗ್ಗೆ ಜನರ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಒಳಜಗಳ ಸೃಷ್ಠಿ: ಬಿಜೆಪಿ ವಿರುದ್ಧ ಸಿದ್ಧರಾಮಯ್ಯ ಕಿಡಿ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ತಮ್ಮ ವೈಫಲ್ಯದ ಬಗ್ಗೆ ಜನರ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಒಳಜಗಳ ಸೃಷ್ಠಿ: ಬಿಜೆಪಿ ವಿರುದ್ಧ ಸಿದ್ಧರಾಮಯ್ಯ ಕಿಡಿ
0
SHARES
0
VIEWS
Share on FacebookShare on Twitter

ಬೆಂಗಳೂರು,ಜೂ.22: ಬಿಜೆಪಿಯಲ್ಲಿನ ಒಳ ಜಗಳದಿಂದ ಸರ್ಕಾರ ಸ್ತಬ್ಧವಾಗಿದ್ದು, ಈ ವೈಫಲ್ಯ ಮುಚ್ಚಿಕೊಳ್ಳುವ ಹಾಗೂ ಜನರ ಗಮನ ಬೇರೆಡೆ ಸೆಳೆಯುವ ಸಲುವಾಗಿ ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಒಳಜಗಳ ತಂದುಹಾಕಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ವಿಪಕ್ಷ‌ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮುಂದಿನ ಮುಖ್ಯಮಂತ್ರಿ ಯಾರೆಂಬ ಬಗ್ಗೆ ನಮ್ಮ ಪಕ್ಷದ ಶಾಸಕರು ವ್ಯಕ್ತಪಡಿಸಿರುವ ಅಭಿಪ್ರಾಯ ಅವರ ವೈಯಕ್ತಿಕ ಅಭಿಪ್ರಾಯ, ಪಕ್ಷದ ನಿಲುವಲ್ಲ. ಚುನಾವಣೆಯಲ್ಲಿ ಬಹುಮತ ಬಂದ ನಂತರ ಮುಖ್ಯಮಂತ್ರಿ ಯಾರೆಂದು ಶಾಸಕಾಂಗ ಪಕ್ಷದ ಅಭಿಪ್ರಾಯ ಪಡೆದು ಹೈಕಮಾಂಡ್ ತೀರ್ಮಾನಿಸಲಿದೆ. ಈಗಲೇ ಮುಖ್ಯಮಂತ್ರಿ ಸ್ಥಾನದ ಬಗೆಗಿನ ಚರ್ಚೆ ಅನವಶ್ಯಕ ಎಂದು ಟ್ವೀಟ್ ಮಾಡುವ ಮೂಲಕ ಪಕ್ಷದಲ್ಲಿ ಎದ್ದಿರುವ ನಾಯಕತ್ವ ಗೊಂದಲ್ಲಕ್ಕೆ ಸ್ಪಷ್ಟನೆ ನೀಡಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಮುಂದಿರುವ ಮುಖ್ಯ ಗುರಿ. ನಮ್ಮ ಎಲ್ಲ ನಾಯಕರು ಈ ಗುರಿಸಾಧನೆಗೆ ತಮ್ಮದೆ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎದುರಾಳಿ ಪಕ್ಷಗಳು ನಮ್ಮ ನಡುವೆ ಭಿನ್ನಾಭಿಪ್ರಾಯವನ್ನು ಹುಟ್ಟುಹಾಕುವ ಪ್ರಯತ್ನ ಮಾಡುತ್ತಿದ್ದು, ಅವರ ದುರುದ್ದೇಶ ಈಡೇರುವುದಿಲ್ಲ ಎಂದು ಹರಿಹಾಯ್ದಿದ್ದಾರೆ.

ಅಲ್ಲದೇ, ಆಡಳಿತಾರೂಢ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟಗೊಂಡು ಇನ್ನೂ ಉರಿಯುತ್ತಿದೆ. ದೆಹಲಿಯಿಂದ ಬಂದ ಪ್ರತಿನಿಧಿಯೂ ಕೈಚೆಲ್ಲಿ ಹಿಂದಿರುಗಿದ್ದಾರೆ. ಈ ಒಳಜಗಳದಿಂದಾಗಿ ಇಡೀ ಸರ್ಕಾರ ಸ್ಥಬ್ದವಾಗಿದೆ. ಈ ವೈಫಲ್ಯದಿಂದ ಜನರ ಗಮನ ಬೇರೆ ಕಡೆ ಸೆಳೆಯಲು ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಜಗಳ ತಂದು ಹಾಕಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಕೊರೊನಾ ಸೋಂಕಿತರ ಸಾವಿನ ಬಗ್ಗೆ ಸರ್ಕಾರ ನೀಡುತ್ತಿರುವ ಅಂಕಿ ಅಂಶಗಳು ಸಂಪೂರ್ಣ ಸುಳ್ಳು. ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ 24 ಮಂದಿ ಸಾವಿಗೀಡಾದಾಗ, ದುರಂತದಲ್ಲಿ ಸತ್ತವರ ಸಂಖ್ಯೆ ಕೇವಲ 4 ಎಂದು ಸುಳ್ಳು ಹೇಳಿತ್ತು. ಸರ್ಕಾರದ ಸುಳ್ಳು ಲೆಕ್ಕಕ್ಕೆ ಇದಕ್ಕಿಂತ ಬೇರೆ ನಿದರ್ಶನ ಬೇಕೇ? ಎಂದು ಪ್ರಶ್ನಿಸಿದ್ದಾರೆ.

ಇದೇ ವೇಳೆ ಪಕ್ಷಬಿಟ್ಟು ಹೊರ‌ ಬಂದಿರುವವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಅಧಿಕಾರದಾಸೆಗೆ ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಮಾಡಿ, ಬಿಜೆಪಿ ಸೇರಿರುವ ಶಾಸಕರನ್ನು ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಅವರು ಬಾಂಬೆಗಾದ್ರೂ ಹೋಗಲಿ, ದೆಹಲಿಗಾದ್ರೂ ಹೋಗಲಿ. ಅವರ ಬಗ್ಗೆ ನಾವು ತಲೆಕೆಡಿಸಿಕೊಳ್ಳಲ್ಲ ಎಂದು ಕಿಡಿಕಾರಿದರು.

ಅಧಿಕಾರದಾಸೆಗೆ ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಮಾಡಿ, @BJP4Karnataka ಸೇರಿರುವ ಶಾಸಕರನ್ನು ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ.
ಅವರು ಬಾಂಬೆಗಾದ್ರೂ ಹೋಗಲಿ, ದೆಹಲಿಗಾದ್ರೂ ಹೋಗಲಿ. ಅವರ ಬಗ್ಗೆ ನಾವು ತಲೆಕೆಡಿಸಿಕೊಳ್ಳಲ್ಲ. 5/5 #Ballari

— Siddaramaiah (@siddaramaiah) June 22, 2021

Related News

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ
Vijaya Time

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ

June 10, 2023
ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !
Vijaya Time

ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !

June 10, 2023
bill
ರಾಜ್ಯ

ಇಂಧನ ಹೊಂದಾಣಿಕೆ ಶುಲ್ಕ ನೆಪ, ಡಬಲ್ ಆಯ್ತು ಕರೆಂಟ್ ಬಿಲ್ ; ಹಲವೆಡೆ ಪ್ರತಿಭಟನೆ

June 10, 2023
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.