ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ಗೆ ಭರ್ಜರಿ ಜಯ; ದೀದಿಗೆ ಮೋದಿ ಅಭಿನಂದನೆ

ನವದೆಹಲಿ, ಮೇ. 03: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಮತ್ತೊಮ್ಮೆ ಭರ್ಜರಿ ಗೆಲುವು ಸಾಧಿಸಿದ್ದು, ಹ್ಯಾಟ್ರಿಕ್​ ಜಯದೊಂದಿಗೆ ಇನ್ನೊಂದು ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ. 294 ಕ್ಷೇತ್ರಗಳ ಪೈಕಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್​​ 216 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಅವರಿಗೆ ಅಭಿನಂದನೆ ಸಲ್ಲಿಸಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮಾಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಗೆಲುವು ಸಾಧಿಸಿರುವ ಮಮತಾ ದೀದಿಗೆ ಅಭಿನಂದನೆಗಳು. ಬಂಗಾಳಕ್ಕೆ ಕೇಂದ್ರ ಸರ್ಕಾರ ಎಲ್ಲ ರೀತಿಯ ಬೆಂಬಲ ನೀಡಲಿದ್ದು, ಕೋವಿಡ್​ ವಿರುದ್ಧದ ಹೋರಾಟದಲ್ಲಿ ನಾವು ನಿಮ್ಮೊಂದಿಗಿದ್ದೇವೆ ಎಂದಿದ್ದಾರೆ. ಇದರ ಜೊತೆಗೆ ನಮ್ಮ ಪಕ್ಷವನ್ನ ಆಶೀರ್ವದಿಸಿದ ಪಶ್ಚಿಮ ಬಂಗಾಳದ ನನ್ನ ಸಹೋದರ, ಸಹೋದರಿಯರಿಗೆ ಧನ್ಯವಾದ ಅರ್ಪಿಸುತ್ತೇನೆ.

ಬಿಜೆಪಿ ಈ ಸಲ ಗಮನಾರ್ಹ ಯಶಸ್ಸು ಕಂಡಿದ್ದು, ಬಿಜೆಪಿ ಜನರ ಸೇವೆ ಸಲ್ಲಿಸುತ್ತಲೇ ಇರುತ್ತದೆ. ಮತದಾರರ ಉತ್ಸಾಹ ಭರಿತ ಪ್ರಯತ್ನ ಹಾಗೂ ಪ್ರತಿ ಕಾರ್ಯಕರ್ತರಿಗೆ ನನ್ನ ಅಭಿನಂದನೆ ಎಂದಿದ್ದಾರೆ. ಇದರ ಜತೆಗೆ ಕೇರಳದಲ್ಲಿ ಗೆಲುವು ಸಾಧಿಸಿರುವ ಪಿಣರಾಯಿ ವಿಜಯನ್​ ಹಾಗೂ ತಮಿಳುನಾಡಿನಲ್ಲಿನ ಡಿಎಂಕೆ ಹಾಗೂ ಎಐಎಡಿಎಂಕೆ ಪಕ್ಷಗಳಿಗೂ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.

Exit mobile version