ಬಿಜೆಪಿ –ಜೆಡಿಎಸ್ ಮೈತ್ರಿ : ಈ 7 ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿದ್ಯಾ ಜೆಡಿಎಸ್..?

Bengaluru: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ನೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಳ್ಳಲಿದೆ ಎಂಬ (bjp with jds) ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ

ಇತ್ತೀಚೆಗೆ ಜೆಡಿಎಸ್ ಮುಖ್ಯಸ್ಥ ಎಚ್.ಡಿ. ಕುಮಾರಸ್ವಾಮಿ (H.D.Kumarswamy) ಅವರು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amith Shah) ಅವರನ್ನು ಭೇಟಿಯಾಗಿ ಚರ್ಚೆ

ನಡೆಸಿದ್ದಾರೆ. ಇನ್ನೊಂದೆಡೆ ಬಿಹಾರದ ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ ಸಭೆಯಲ್ಲೂ ಜೆಡಿಎಸ್ ಭಾಗಿಯಾಗಿರಲಿಲ್ಲ. ಹೀಗಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್

ನಡುವೆ ಮೈತ್ರಿ ಏರ್ಪಡಲಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ (bjp with jds) ಹರಿದಾಡುತ್ತಿವೆ.

ಮೂಲಗಳ ಪ್ರಕಾರ, ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ನಾಯಕರು ಕೂಡಾ ಗ್ರೀನ್ ಸಿಗ್ನಲ್ (Green Signal) ಕೊಟ್ಟಿದ್ದು, ಆದರೆ ಹಳೇ ಮೈಸೂರು ಭಾಗದ ಏಳು ಕ್ಷೇತ್ರಗಳಿಗೆ

ಜೆಡಿಎಸ್ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಹಾಸನ, ಮಂಡ್ಯ, ಮೈಸೂರು ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಿಗೆ ಜೆಡಿಎಸ್ ಬೇಡಿಕೆ ಇಟ್ಟಿದೆ.

ಹಾಸನ ಮತ್ತು ಬೆಂಗಳೂರು ಗ್ರಾಮಾಂತರ ಹೊರತುಪಡಿಸಿ ಉಳಿದ ಐದು ಕ್ಷೇತ್ರಗಳಲ್ಲಿಯೂ ಬಿಜೆಪಿ ಸಂಸದರಿದ್ದಾರೆ. ಹೀಗಾಗಿ ಈ ಕ್ಷೇತ್ರಗಳನ್ನು ಜೆಡಿಎಸ್ಗೆ ಬಿಟ್ಟು ಕೊಡುವ ಬಗ್ಗೆ ಬಿಜೆಪಿಯಲ್ಲಿ ಚರ್ಚೆ ಶುರುವಾಗಿದೆ.

ಇದನ್ನು ಓದಿ: ನಾಲ್ಕು ವರ್ಷಗಳ ಬಳಿಕ ಚಂದ್ರನೂರಿಗೆ ಭಾರತದ ಮೂರನೇ ತೇರು ಸಿದ್ದ: ಆಲ್‌ ದಿ ಬೆಸ್ಟ್‌

ತುಮಕೂರು, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳನ್ನು ಮಾತ್ರ ಬಿಟ್ಟು ಕೊಡುವ ಬಗ್ಗೆ ಚರ್ಚೆ ನಡೆದಿದೆ. ತುಮಕೂರಿನಲ್ಲಿ ಜಿ.ಎಸ್.ಬಸವರಾಜು (G.S.Basavaraju) ,

ಕೋಲಾರದಲ್ಲಿ ಮುನಿಸ್ವಾಮಿ, ಚಿಕ್ಕಬಳ್ಳಾಪುರದಲ್ಲಿ ಬಜ್ಜೇಗೌಡ ಬಿಜೆಪಿಯಿಂದ ಸಂಸದರಾಗಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಕೋಲಾರ ಸಂಸದ ಮುನಿಸ್ವಾಮಿ (Muniswamy) ಮಾತ್ರ

ರಾಜಕೀಯದಲ್ಲಿ ಸಕ್ರಿಯರಾಗಿದ್ದು, ಉಳಿದಿಬ್ಬರು ಪಕ್ಷದ ಚಟುವಟಿಕೆಗಳಿಂದ ಸಾಕಷ್ಟು ಅಂತರ ಕಾಯ್ದುಕೊಂಡಿದ್ದಾರೆ. ಹೀಗಾಗಿ ಆ ಕ್ಷೇತ್ರಗಳನ್ನು ಜೆಡಿಎಸ್ಗೆ ಬಿಟ್ಟು ಕೊಡುವುದರಲ್ಲಿ ಯಾವುದೇ ಸಮಸ್ಯೆ

ಎದುರಾಗದು ಎಂಬ ಮಾತುಗಳು ಬಿಜೆಪಿಯಲ್ಲಿ ಕೇಳಿ ಬಂದಿವೆ.

ಈ ಮಧ್ಯೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ (Sumalatha Ambarish) ಅವರ ಭವಿಷ್ಯ ಏನು ಎಂಬುದರ ಕುರಿತು

ಚರ್ಚೆ ನಡೆದಿದೆ. ಬೆಂಗಳೂರಿನ ಮೂರು ಕ್ಷೇತ್ರಗಳಲ್ಲಿ ಒಂದು ಕ್ಷೇತ್ರದಿಂದ ಸ್ಪರ್ಧಿಸುವಂತೆ ಬಿಜೆಪಿ ಅವರಿಗೆ ಸಲಹೆ ನೀಡಿದ್ದು, ಆದರೆ ನಾನು ರಾಜಕೀಯ ಮಾಡಿದರೆ ಅದು ಮಂಡ್ಯದಿಂದ ಮಾತ್ರ ಎಂದು

ಸುಮಲತಾ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಇನ್ನೊಂದೆಡೆ ಜೆಡಿಎಸ್ ಕೂಡಾ ಮಂಡ್ಯ ಕ್ಷೇತ್ರವನ್ನು ಬಿಟ್ಟುಕೊಡುವಂತೆ ಒತ್ತಾಯಿಸುತ್ತಿದೆ. ಹೀಗಾಗಿ ಮಂಡ್ಯ ಟಿಕೆಟ್ (Ticket) ವಿಷಯವೇ ಬಿಜೆಪಿಗೆ

ದೊಡ್ಡ ತಲೆನೋವು ತಂದಿದೆ.

Exit mobile version