ದಕ್ಷಿಣ ಕನ್ನಡ : ಮಂಗಳವಾರ(Tuesday) ಕರ್ನಾಟಕದ(Karnataka) ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯಲ್ಲಿ ಬಿಜೆಪಿ(BJP) ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ಬೈಕ್‌ನಲ್ಲಿ ಬಂದ ಅಪರಿಚಿತರು ಮಾರಕಾಸ್ತ್ರಗಳಿಂದ ಹತ್ಯೆಗೈದಿದ್ದಾರೆ(Murdered). ಈ ಘಟನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕಾನೂನು(Law) ಸುವ್ಯವಸ್ಥೆ ಕಾಪಾಡಲು ಮಂಗಳೂರು(Mangaluru) ಮತ್ತು ಉಡುಪಿಯಿಂದಲೂ(Udupi) ಹೆಚ್ಚುವರಿ ಪೊಲೀಸ್ ಪಡೆಗಳನ್ನು ಕೂಡಲೇ ನಿಯೋಜಿಸಲಾಗಿದೆ.
ಇದೇ ವೇಳೆ ಆರೋಪಿಗಳ ಪತ್ತೆಗೆ ಐದು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಆರೋಪಿಗಳ ಪತ್ತೆಗೆ ಐದು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ಐದು ತಂಡಗಳ ಪೈಕಿ ಮೂರು ತಂಡಗಳನ್ನು ಕ್ರಮವಾಗಿ ಕೇರಳ(Kerala) ಮತ್ತು ಮಡಿಕೇರಿ(Madikeri) ಮತ್ತು ಕರ್ನಾಟಕದ ಹಾಸನ(Hassan) ಜಿಲ್ಲೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾಯ್ ಸುದ್ದಿಪತ್ರಿಕೆಗೆ ಮಾಹಿತಿ ನೀಡಿದ್ದಾರೆ. ಕರ್ನಾಟಕ ಸಿಎಂ(CM) ಬಸವರಾಜ್ ಬೊಮ್ಮಾಯಿ(Basavaraj Bommai) ಅವರು ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ಹತ್ಯೆಗೆ ಸಂತಾಪ ಸೂಚಿಸಿದ್ದು,
ಆರೋಪಿಗಳನ್ನು ಶೀಘ್ರ ಬಂಧಿಸಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಟ್ವಿಟರ್‌ನಲ್ಲಿ(Tweeter) ಬರೆದುಕೊಂಡಿರುವ ಬೊಮ್ಮಾಯಿ ಅವರು,”ದಕ್ಷಿಣ ಕನ್ನಡದ ಸುಳ್ಯದ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆಯನ್ನು ಖಂಡಿಸುತ್ತೇನೆ. ಇಂತಹ ಹೇಯ ಕೃತ್ಯ ಎಸಗಿದ ಆರೋಪಿಗಳನ್ನು ಶೀಘ್ರ ಬಂಧಿಸಿ ಕಾನೂನಿನಡಿಯಲ್ಲಿ ಶಿಕ್ಷಿಸಲಾಗುವುದು. ಪ್ರವೀಣ್ ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಹೇಳಿದ್ದಾರೆ. ಇನ್ನೂ ಸಾಕ್ಷ್ಯಾಧಾರಗಳನ್ನು(Evidence) ಹುಡುಕುತ್ತಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕೇರಳ ಬೈಕ್ ನಂಬರ್ ಪ್ಲೇಟ್‌ನ ಮಾಹಿತಿಯನ್ನು ನಾವು ದೃಶ್ಯಗಳಲ್ಲಿ ಮಾತ್ರ ನೋಡಿದ್ದೇವೆ. ನಮಗೆ ಯಾವುದೇ ಪುರಾವೆಗಳು ಕಂಡುಬಂದಿಲ್ಲ. ಗಡಿಯಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದೇವೆ. ಎಲ್ಲಾ ಕೋನಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಬೆಳ್ಳಾರೆ ಪ್ರದೇಶದಲ್ಲಿ ಮುಸ್ಲಿಂ ಯುವಕ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಈ ಕೊಲೆ ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ ಎಂದು ಮಂಗಳೂರು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಪ್ರವೀಣ್ ಅವರ ಹತ್ಯೆಯ ವಿರುದ್ಧ ಪ್ರತಿಭಟನೆಗಳು ಬುಗಿಲೆದ್ದಿವೆ.
ಈ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಬುಧವಾರ ಜಿಲ್ಲೆಯ ಕಡಬ, ಸುಳ್ಯ ಮತ್ತು ಪುತ್ತೂರು ತಾಲೂಕುಗಳಲ್ಲಿ ಬಂದ್‌ಗೆ(Bandh) ಕರೆ ನೀಡಿದೆ. ಹತ್ಯೆ ಖಂಡಿಸಿ ಪುತ್ತೂರಿನ ಎರಡು ಖಾಸಗಿ ಶಿಕ್ಷಣ ಸಂಸ್ಥೆಗಳು ಕೂಡ ರಜೆ ಘೋಷಿಸಿವೆ.