Visit Channel

ಕೇಂದ್ರದಲ್ಲಿ ಇಂದು ನಾನು ಪೆಟ್ರೋಲಿಯಂ ಸಚಿವನಾಗಿದ್ದರೆ 45 ರೂ.ಗೆ ಒಂದು ಲೀಟರ್‌ ಪೆಟ್ರೋಲ್‌ ಕೊಡುತ್ತಿದ್ದೆ – ವೀರಪ್ಪ ಮೊಯ್ಲಿ

ಬೆಂಗಳೂರು ಸೆ 30 : ಕೇಂದ್ರದಲ್ಲಿ ಇಂದು ನಾನು ಪೆಟ್ರೋಲಿಯಂ ಸಚಿವನಾಗಿದ್ದರೆ 45 ರೂ.ಗೆ ಒಂದು ಲೀಟರ್‌ ಪೆಟ್ರೋಲ್‌ ಕೊಡುತ್ತಿದ್ದೆ ಎಂದು ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯಿಲಿ ಹೇಳಿದರು.

ಈ ಬಗ್ಗೆ ಸೋಲದೇವನಹಳ್ಳಿಯಲ್ಲಿ ಗಾಂಧಿ ನಡಿಗೆ ಕಾರ್ಯಾಗಾರದಲ್ಲಿ ಮಾತನಾಡಿಮಾತನಾಡಿದ ಅವರು ಕಳೆದ ಮೂರು ತಿಂಗಳಿನಿಂದ ರೈತರು ದೇಶದಾದ್ಯಂತ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಈ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಒಂದು ದಿನವು ಅವರ ಕಷ್ಟವೇನೆಂದು ಕೇಳಲಿಲ್ಲ ಇವರು ಒಬ್ಬ ಪ್ರಧಾನಮಂತ್ರಿಯೇ ಎಂದು ಪ್ರಶ್ನಿಸಿದರು. ಬೆಂಗಳೂರು ನಗರಕ್ಕೆ ಪ್ರಪ್ರಥಮವಾಗಿ ನೀರು ಪೂರೈಕೆ ಮಾಡಿದ ಹೆಸರಘಟ್ಟ ಕೆರೆಗೆ ಎತ್ತಿನ ಹೊಳೆಯಿಂದ ನೀರನ್ನು ತುಂಬಿಸುವ ಮೂಲಕ ಈ ಭಾಗವನ್ನು ಹಸಿರಾಗಿಸುವುದು ಕಾಂಗ್ರೆಸ್‌ ಪಕ್ಷದ ಗುರಿಯಾಗಿದೆ ಎಂದರು.

ಕಾಂಗ್ರೆಸ್‌ ಎಂದೂ ದೇಶ ಮಾರುವ ಕೆಲಸ ಮಾಡಲಿಲ್ಲ. ಆದರೆ ಇಂದು ಬಿಜೆಪಿಯವರು ಎಲ್ಲಾ ಸರ್ಕಾರಿಸ್ವಾಮ್ಯದ ಕಂಪನಿಗಳನ್ನು ಖಾಸಗೀಕರಣ ಮಾಡುವ ಮೂಲಕ ದೇಶವನ್ನು ದಿವಾಳಿತನದತ್ತ ಕೊಂಡೊಯ್ಯುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರು ದೇಶ ಭಕ್ತರಲ್ಲ. ದೇಶದಿಂದ ಬಿಜೆಪಿಯವರನ್ನು ಕಿತ್ತು ಒಗೆಯುವುದೇ ನಮ್ಮ ಮುಂದಿನ ಹೋರಾಟ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಶಾಸಕ ಕೃಷ್ಣ ಬೈರೇಗೌಡ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌, ಬೆಂಗಳೂರು ಉತ್ತರ ಜಿಲ್ಲೆ ಕಾಂಗ್ರೆಸ್‌ ಅಧ್ಯಕ್ಷ ಎಂ.ರಾಜಕುಮಾರ್‌, ಎಂಎಲ್‌ಸಿ ನಾರಾಯಣಸ್ವಾಮಿ ಮತ್ತಿತರರು ಹಾಜರಿದ್ದರು.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.