ಬಿಜೆಪಿಗೆ ಸೇರ್ಪಡೆಯಾಗ್ತಾರಾ ಶಾಸಕ ಎನ್. ಮಹೇಶ್?

ಚಾಮರಾಜನಗರ, ಡಿ. 2 : ಬಿ ಎಸ್ ಪಿ ಪಕ್ಷದಿಂದ ಉಚ್ಛಾಟಿಸಲಾಗಿದ್ದ ಕೊಳ್ಳೆಗಾಲ ಶಾಸಕ ಎನ್. ಮಹೇಶ್ ಅವರು ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ಸಿಕ್ಕಿದ್ದು ಎನ್. ಮಹೇಶ್ ಅವರು ಬಿಜೆಪಿ ಸೇರ್ಪಡೆ ಸಂಬಂಧ ಬಿಜೆಪಿ ನಾಯಕರೊಂದಿಗೆ ಗೌಪ್ಯ ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಸಚಿವರಾದ ಗೋಪಾಲಯ್ಯ, ಆರ್. ಅಶೋಕ್, ಎಸ್. ಟಿ. ಸೋಮಶೇಖರ್,  ಮತ್ತು ಸುರೇಶ್ ಕುಮಾರ್ ಅವರನ್ನು ಭೇಟಿಯಾಗಿ ಈ ಕುರಿತು ಮಾತುಕತೆ ನಡೆಸಿದ್ದಾರೆ ಎಂದು ಎನ್ನಲಾಗಿದೆ.

ಇದೇ ಬರುವ  ಸಂಕ್ರಾತಿ ಹಬ್ಬದ ನಂತರ ಎನ್.ಮಹೇಶ್ ಅವರು ಬಿಜೆಪಿ ಸೇರುವ ಸಾಧ್ಯತೆ ಇದ್ದು, ಈಗಾಗಲೇ ಒಂದು ಹಂತದ ಮಾತುಕತೆ ಮುಗಿದಿದೆ.  ಇನ್ನು  ಸಿ ಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಬಿಜೆಪಿ ಸೇರುವ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ಮಾಹಿತಿ ಲಬ್ಯವಾಗಿದೆ.

Exit mobile version