ಮತದಾರರಿಗೆ ಮೋದಿ ಭಾವಚಿತ್ರ ವಿತರಣೆ – ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪ

ಬೆಳಗಾವಿ ಸೆ 3 : ನಗರದಲ್ಲಿ ನಡೆಯುತ್ತಿರುವ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತದಾರರಿಗೆ ಪ್ರಧಾನಿ ನರೆಂದ್ರ ಮೋದಿ ಅವರ ಭಾವಚಿತ್ರವಿರುವ ಚೀಟಿ ಕೊಟ್ಟು ಮತದಾನಕ್ಕೆ ಪ್ರಚೋಧಿಸುತ್ತಿದ್ದಾರೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗಂಭೀರ ಆರೋಪ ಮಾಡಿದ್ದಾರೆ.

ನಗರದಲ್ಲಿ ಮಹಾನಗರ ಪಾಲಿಕೆ ಚುನಾವಣೆ ನಡೆಯತ್ತಿದ್ದು, ಈ ಸಂಬಂಧ ಅಲ್ಲಿಗೆ ಭೇಟಿ ನೀಡಿದ ಬಿಜೆಪಿ ನಾಯಕರ ವಿರುದ್ದ ಹರಿ ಹಾಯ್ದಿದ್ದಾರೆ ಅಲ್ಲದೇ ಅವರು ಮತದಾರರ ಬಳಿಯಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವಿದ್ದ ಚೀಟಿಗಳನ್ನು ವಶಪಡಿಸಿಕೊಂಡಿದ್ದಾರೆ. ಬಿಜೆಪಿಯಿಂದ ಮಾಜಿ ಮೇಯರ್ ಬಸಪ್ಪ ಅವರ ಪತ್ನಿ ಸ್ಪರ್ಧೆ ಮಾಡಿದ್ದು, ಬಸಪ್ಪ ಅವರೇ ಈ ಗುರುತಿನ ಚೀಟಿ ಕೊಟ್ಟು ಕಳುಹಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್‌ಗಳಿಗೆ ಚುನಾವಣೆ ನಡೆಯುತ್ತಿದೆ. ಪಾಲಿಕೆ ಚುನಾವಣಾ ಕಣದಲ್ಲಿ 385 ಅಭ್ಯರ್ಥಿಗಳಿದ್ದಾರೆ. ಇಂದು 4,28,364 ಮತದಾರರು ಮತ ಚಲಾಯಿಸಲಿದ್ದಾರೆ. ಮತದಾನಕ್ಕಾಗಿ ಒಟ್ಟು 415 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 162 ಸೂಕ್ಷ್ಮ, 42 ಅತಿ ಸೂಕ್ಷ್ಮ ಮತಗಟ್ಟೆಗಳಿವೆ. ಚುನಾವಣೆ ಕರ್ತವ್ಯಕ್ಕೆ 1,828 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

Exit mobile version