ಬೆಂಗಳೂರು, ಜು. 20: ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಗ್ಗೆ ದ್ವಂದ್ವ ನಿಲುವು ತೋರುತ್ತಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನ ಕೆಲವು ನಾಯಕರು ಬಹಿರಂಗವಾಗಿ ಯಡಿಯೂರಪ್ಪ ಅವರನ್ನು ಬೆಂಬಲಿಸುತ್ತಿದ್ದು, ಇನ್ನು ಕೆಲವರು ಯಡಿಯೂರಪ್ಪ ಅತಿ ಭ್ರಷ್ಟ ಎಂದು ಆರೋಪಿಸುತ್ತಾರೆ. ಇದರಿಂದ ಮುಖ್ಯಮಂತ್ರಿಯವರೇ ಗೊಂದಲಕ್ಕೊಳಗಾಗುವಂತೆ ಮಾಡಿದ್ದಾರೆ ಎಂದರು.
ಇನ್ನು ಕಾಂಗ್ರೆಸ್ನಿಂದ ಮತ್ತೆ ಮುಖ್ಯಮಂತ್ರಿ ಆಗಲು ಟವೆಲ್ ಹಾಕಿ ಕಾಯುತ್ತಿರುವ ಮಾಜಿ ಮುಖ್ಯಮಂತ್ರಿಯೊಬ್ಬರು ಯಡಿಯೂರಪ್ಪ ಸರ್ಕಾರವನ್ನು ಹೀನಾಮಾನ ಟೀಕಿಸುತ್ತಿದ್ದು, ಈ ದ್ವಂದ್ವ ನೀತಿಯನ್ನು ಕಾಂಗ್ರೆಸ್ ಬಿಡಬೇಕು ಎಂದು ಹೇಳಿದ್ದಾರೆ.