• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

RSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ: ಪ್ರಿಯಾಂಕ್ ಖರ್ಗೆ ವಿರುದ್ಧ ಬಿ.ಎಲ್. ಸಂತೋಷ್ ವಾಗ್ದಾಳಿ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
RSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ: ಪ್ರಿಯಾಂಕ್ ಖರ್ಗೆ ವಿರುದ್ಧ ಬಿ.ಎಲ್. ಸಂತೋಷ್ ವಾಗ್ದಾಳಿ
0
SHARES
15
VIEWS
Share on FacebookShare on Twitter

RSS ಕಾರ್ಯ ಮತ್ತು ದೇಶಕ್ಕೆ ನೀಡಿದ (bl Santhosh lashes out at Priyank Kharge) ಕೊಡುಗೆಗಳ ಬಗ್ಗೆ ಜನರಿಗೆ ತಿಳಿದಿದೆ

ಪ್ರತಿಯೊಂದಕ್ಕೂ ನೋಂದಣಿಯೇ ಮಾನದಂಡವಲ್ಲ,RSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ

ಪ್ರಿಯಾಂಕ್ ಖರ್ಗೆಗೆ ಬಿ.ಎಲ್. ಸಂತೋಷ್ ತಿರುಗೇಟು

Bengaluru : 80ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಬೆಂಗಳೂರಿನ ಬನ್ನಪ್ಪ ಪಾರ್ಕ್‌ನಲ್ಲಿ ಹಿಂದೂ ಜಾಗರಣ ವೇದಿಕೆ ಆಯೋಜಿಸಿದ್ದ ‘ಅಖಂಡ ಭಾರತ ಸಂಕಲ್ಪ ದಿನ’ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭಾಗವಹಿಸಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ನೋಂದಣಿ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ತಿರಂಗ ಹಾಗೂ ಕೇಸರಿ ಧ್ವಜಾರೋಹಣದ ಬಳಿಕ ಮಾತನಾಡಿದ ಅವರು, RSS ನೋಂದಣಿ ಮಾಡಿಕೊಂಡಿಲ್ಲ ಮತ್ತು ಮುಂದೆಯೂ ನೋಂದಣಿ ಮಾಡಿಸಿಕೊಳ್ಳುವ

ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದರು. ಸಂಘಟನೆಯ ಕಾರ್ಯವೈಖರಿ ಮತ್ತು ದೇಶದ ಇತಿಹಾಸದಲ್ಲಿ ಅದರ ಪಾತ್ರದ ಬಗ್ಗೆ ದೇಶದ ಜನರಿಗೆ ತಿಳಿದಿದೆ ಎಂದು ಅವರು ಹೇಳಿದರು.

bl Santhosh lashes out at Priyank Kharge

RSS ನೋಂದಣಿ ಮಾಡಿಸಿಕೊಳ್ಳದಿರುವುದನ್ನು ಪ್ರಶ್ನಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಸಂತೋಷ್, ಕೇವಲ ನೋಂದಣಿ ಎಂಬುದು ಯಾವುದೇ ಸಂಘಟನೆಯ ಸೇವೆ ಅಥವಾ ಕೊಡುಗೆಯನ್ನು ಅಳೆಯುವ ಮಾನದಂಡವಲ್ಲ ಎಂದು ಅಭಿಪ್ರಾಯಪಟ್ಟರು.

ನೋಂದಣಿ ಮಾಡಿಕೊಂಡಿರುವ ಹಲವು ಸಂಘಟನೆಗಳು ಏನು ಮಾಡುತ್ತಿವೆ ಎಂಬುದು (bl Santhosh lashes out at Priyank Kharge) ಎಲ್ಲರಿಗೂ ಗೊತ್ತಿದೆ ಎಂದು ಅವರು ಟೀಕಿಸಿದರು. ದೇಶದ ಇತಿಹಾಸ ಹಾಗೂ RSSನ ಕೊಡುಗೆಗಳ ಬಗ್ಗೆ ದೇಶದ ಅಭಿಮಾನಿಗಳಿಗೆ ಅರಿವಿದೆ.

ಹೀಗಾಗಿ ನೋಂದಣಿ ವಿಚಾರವನ್ನು ಮುಂದಿಟ್ಟುಕೊಂಡು ಸಂಘದ ಕಾರ್ಯವನ್ನು ಪ್ರಶ್ನಿಸುವುದು ಸರಿಯಲ್ಲ ಎಂಬ ಸಂದೇಶವನ್ನು ಅವರು ನೀಡಿದರು.

ಇದೇ ವೇಳೆ ಬೆಂಗಳೂರಿನ ಶಿವಾಜಿನಗರ ಹಾಗೂ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಗಳ ರಾಜಕೀಯ ವಿಚಾರವನ್ನೂ ಸಂತೋಷ್ ಪ್ರಸ್ತಾಪಿಸಿದರು.

ಕಳೆದ ಹಲವು ವರ್ಷಗಳಿಂದ ಈ ಕ್ಷೇತ್ರಗಳಲ್ಲಿ ಹಿಂದೂ ಪ್ರತಿನಿಧಿಯನ್ನು ಶಾಸಕರನ್ನಾಗಿ ಮಾಡಲು ಸಾಧ್ಯವಾಗಿಲ್ಲ ಎಂದು ಹೇಳಿದ ಅವರು, ಈ ಎರಡೂ ಕ್ಷೇತ್ರಗಳಲ್ಲಿ ಹಿಂದೂ ನಾಯಕನನ್ನು ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಿ ತೋರಿಸುವ ಸವಾಲು ಹಾಕಿದರು.

ತಾವು ಬಿಜೆಪಿ ಕಾರ್ಯಕರ್ತರಾಗಿದ್ದರೂ ಕಾರ್ಯಕ್ರಮದಲ್ಲಿ ರಾಜಕೀಯ ಮಾತನಾಡಲು ಬಂದಿಲ್ಲ ಎಂದು ಹೇಳಿದ ಸಂತೋಷ್, ತಮ್ಮ ಮಾತುಗಳ ಮೂಲಕ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಪ್ರಿಯಾಂಕ್ ಖರ್ಗೆ ಅವರ ಕುಟುಂಬದ ಇತಿಹಾಸವನ್ನು ಉಲ್ಲೇಖಿಸಿದ ಸಂತೋಷ್, ಕಲಬುರಗಿ ಭಾಗದಲ್ಲಿ ನಡೆದಿದ್ದ ರಜಾಕರ ದಾಳಿಯ ಸಂದರ್ಭದಲ್ಲಿ ಅವರ ಕುಟುಂಬ ಬೆಂಗಳೂರಿನತ್ತ ಬಂದಿತ್ತು ಎಂದು ಹೇಳಿದರು. ರಜಾಕರ ವಿರುದ್ಧ RSS ಕಾರ್ಯಕರ್ತರು ನಿಂತಿದ್ದರು ಎಂದು ಅವರು ಹೇಳಿಕೊಂಡರು.

ಆ ಸಂದರ್ಭದಲ್ಲಿ ಪೊಲೀಸರು ಅಥವಾ ರಾಜಕಾರಣಿಗಳು ಬಂದಿರಲಿಲ್ಲ, RSSನ ಯುವಕರು ರಸ್ತೆಗಳಲ್ಲಿ ನಿಂತು ಜನರ ರಕ್ಷಣೆಗೆ ಮುಂದಾಗಿದ್ದರು ಎಂಬುದಾಗಿ

ಸಂತೋಷ್ ತಮ್ಮ ಭಾಷಣದಲ್ಲಿ ಪ್ರತಿಪಾದಿಸಿದರು. ಈ ವಿಚಾರವನ್ನು ಪ್ರಿಯಾಂಕ್ ಖರ್ಗೆ ಅವರು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಅವರು ಹೇಳಿದರು.

RSS ನೋಂದಣಿ ವಿಚಾರವು ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಸಂಘಟನೆಯ ನೋಂದಣಿ ಕುರಿತು ಸಚಿವ ಪ್ರಿಯಾಂಕ್ ಖರ್ಗೆ

ಹಲವು ಬಾರಿ ಪ್ರಶ್ನೆಗಳನ್ನು ಎತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಅದಕ್ಕೆ ಪ್ರತಿಕ್ರಿಯಿಸುತ್ತಿದ್ದಾರೆ.

ಇದೇ ಹಿನ್ನೆಲೆಯಲ್ಲಿ ಬಿ.ಎಲ್. ಸಂತೋಷ್ ಅವರ ಇತ್ತೀಚಿನ ಹೇಳಿಕೆ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸ್ವಾತಂತ್ರ್ಯ ದಿನಾಚರಣೆಯ

ಕಾರ್ಯಕ್ರಮದ ವೇದಿಕೆಯಿಂದಲೇ RSSನ ನೋಂದಣಿ, ಸಂಘಟನೆಯ ಇತಿಹಾಸ ಹಾಗೂ ರಾಜಕೀಯ ವಿಚಾರಗಳನ್ನು ಪ್ರಸ್ತಾಪಿಸಿರುವುದು ಗಮನ ಸೆಳೆದಿದೆ.

ಇದನ್ನು ಓದಿ : https://vijayatimes.com/india-a-developed-nation-declares-modi/

Tags: bengalurupoliticsRSS

Related News

ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ
ಪ್ರಮುಖ ಸುದ್ದಿ

ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

September 12, 2026
ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ

September 12, 2026
80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!
ಪ್ರಮುಖ ಸುದ್ದಿ

80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!

September 12, 2026
ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ
ಪ್ರಮುಖ ಸುದ್ದಿ

ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ

September 12, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.