- ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ರಸ್ತೆಗಳಿಗೆ ಬ್ಲಾಕ್ ಮತ್ತು ವೈಟ್ ಟಾಪಿಂಗ್ (Black and white topping)
- ಎಲ್ಲೆಲ್ಲಿ ರಸ್ತೆ ಸರಿಯಿಲ್ಲ ಸರ್ವೇ ನಡೆಸಲಾಗುತ್ತದೆ ಎಂದ ಡಿಸಿಎಂ
- 30 ವರ್ಷ ಬಾಳಿಕೆ ಬರುವ ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಪ್ಲಾನ್
Bengaluru: ದಿನದಿಂದ ದಿನಕ್ಕೆ ಬೆಲೆ ಏರಿಕೆ (Price rise) ಹೆಚ್ಚಾಗುತ್ತಿದೆ. ಆದರೆ ಗುಣಮಟ್ಟ ಕುಸಿಯುತ್ತಿದೆ ಎಂಬ ಅಭಿಪ್ರಾಯ ಕೇಳಿ ಬಂದ ಬೆನ್ನಲ್ಲೇ ರಾಜ್ಯ ರಾಜಧಾನಿ ಜನರಿಗೆ ಅನುಕೂಲವಾಗುವಂತೆ ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು ನಗರದ 1,600 ಕಿ.ಮೀ ನಷ್ಟು ಉದ್ದದ ರಸ್ತೆಗಳನ್ನು ಬ್ಲ್ಯಾಕ್ ಮತ್ತು ವೈಟ್ ಟಾಪಿಂಗ್ ಮಾಡಲಾಗುತ್ತದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ 10 ವಿಧಾನಸಭಾ ಕ್ಷೇತ್ರಗಳಲ್ಲಿ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದ್ದಾರೆ.
ಬೆಂಗಳೂರು ನಗರದಲ್ಲಿ ಈ ಹಿಂದೆ 196 ಕಿ.ಮೀ ಉದ್ದದ ರಸ್ತೆ ಕಾಮಗಾರಿ (Road works) ನಡೆಸಲಾಗಿತ್ತು. ಈಗ 450 ಕಿ.ಮೀ ಉದ್ದದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಇನ್ನೂ 350 ಕಿ.ಮೀ ಉದ್ದದ ಕಾಮಗಾರಿ ನಿರ್ವಹಣಾ ಅವಧಿ ಬಾಕಿ ಉಳಿದಿದ್ದು, ಈ ರಸ್ತೆಗಳಲ್ಲಿ ಹಾನಿಯಾದರೆ ಗುತ್ತಿಗೆದಾರರೇ (Contractors) ಅದನ್ನು ಸರಿಪಡಿಸಬೇಕಾಗುತ್ತದೆ.
ಈ ರಸ್ತೆಯ ಕಾಮಗಾರಿ ಕೈಗೆತ್ತಿಕೊಂಡಿಲ್ಲ ಎಂದು ಹೇಳಿದರು.ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ರಸ್ತೆಗಳ ಉನ್ನತೀಕರಣಕ್ಕೆ ಮುಖ್ಯಮಂತ್ರಿಯವರು ಬಜೆಟ್ನಲ್ಲಿ 6 ಸಾವಿರ ಕೋಟಿ ರೂ.ಮೀಸಲಿಟ್ಟಿದ್ದಾರೆ. ನಗರದ ಮುಕ್ಕಾಲು ಭಾಗದ ರಸ್ತೆಯನ್ನು ಬ್ಲ್ಯಾಕ್ ಹಾಗೂ ವೈಟ್ ಟಾಪಿಂಗ್ ಮಾಡಲಾಗುತ್ತದೆ.

ಈ ರಸ್ತೆಗಳು 30 ವರ್ಷ ಬಾಳಿಕೆ ಬರುವ ನಿರೀಕ್ಷೆಗಳಿವೆ. ಗುಣಮಟ್ಟದ ಕಾಮಗಾರಿ ನಡೆಯುತ್ತಿದ್ದು, ಸ್ವತಃ ನಾನೇ ಈ ರಸ್ತೆ ಕಾಮಗಾರಿಗಳನ್ನು ಪರಿಶೀಲಿಸಿದ್ದೇನೆ. 1,600 ಕಿ.ಮೀ ಉದ್ದದ ಮುಖ್ಯ ಹಾಗೂ ಉಪ ಮುಖ್ಯ ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗುತ್ತದೆ. ಎಲ್ಲ ಕಾಮಗಾರಿಗಳ ಗುಣಮಟ್ಟ ಪರೀಕ್ಷೆಗೆ ಪ್ರತ್ಯೇಕ ತಂಡ ರಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
BBMP Budget 2025-26: 19,000 ಕೋಟಿ ಗಾತ್ರದ ಬೃಹತ್ ಬಜೆಟ್ .ಮೂಲ ಸೌಕರ್ಯ, ಅಭಿವೃದ್ಧಿಗೆ ಒತ್ತು
ಬೆಂಗಳೂರಿನ ರಸ್ತೆಗಳ ಬಗ್ಗೆ ಬಹಳಷ್ಟು ಟ್ರೋಲ್ (Troll), ಮಾತುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ವಿಶೇಷ ಕಾಳಜಿವಹಿಸಲಾಗುತ್ತಿದೆ. ಪೊಲೀಸ್ ಜಂಟಿ ಆಯುಕ್ತರ ಜತೆ ಚರ್ಚೆ ಮಾಡಿದ್ದು, ಎಲ್ಲೆಲ್ಲಿ ರಸ್ತೆ ಸರಿಯಿಲ್ಲ ಎಂದು ಪೊಲೀಸರ ಗಮನಕ್ಕೆ ಬರುತ್ತದೆಯೋ ಅದನ್ನು ಪಾಲಿಕೆ ಆಯುಕ್ತರಿಗೆ (Municipal Commissioner) ತಿಳಿಸಬೇಕು ಎಂದು ತಿಳಿಸಿದ್ದೇನೆ.
ರಸ್ತೆ ಹದಗೆಟ್ಟಿರುವುದು ನಮ್ಮ ಇಂಜಿನಿಯರ್ ಗಳಿಗೆ, ಶಾಸಕರ ಕಣ್ಣಿಗೆ ಕಾಣದಿರಬಹುದು. ಆದರೆ, ಪೊಲೀಸ್ ಇಲಾಖೆಯವರ ಗಮನಕ್ಕೆ ಬಂದರೆ ಅದನ್ನು ಲಿಖಿತ ರೂಪದಲ್ಲಿ ಮಾಹಿತಿ ನೀಡುವಂತೆ ಸೂಚಿಸಿದ್ದೇನೆ. ಇನ್ನು ಮಳೆ ನೀರುಗಾಲುವೆ (Black and white topping) ಕಾಮಗಾರಿಗಳನ್ನು ಪೂರ್ಣಗೊಳಿಸಲು ವಿಶ್ವಬ್ಯಾಂಕ್ನಿಂದ (World Bank) ಎರಡು ಸಾವಿರ ಕೋಟಿ ರೂ. ನೆರವು ಪಡೆಯುತ್ತಿದ್ದೇವೆ ಎಂದು ಹೇಳಿದರು.
ಇನ್ನು ಬೆಂಗಳೂರಿನಲ್ಲಿ ಕಸದ ಸಮಸ್ಯೆ (Garbage problem) ಹೆಚ್ಚಾಗಿದೆ ಎಂಬ ಪ್ರಶ್ನೆಗೆ, ಕಸದ ಸಮಸ್ಯೆಯನ್ನು ನಾವು ನಿಭಾಯಿಸುತ್ತಿದ್ದೇವೆ. ಯಾರು ಏನೇ ಟೀಕೆ ಮಾಡಿದರೂ, ಇದನ್ನು ಬಗೆಹರಿಸುವುದು ನಮ್ಮ ಜವಾಬ್ದಾರಿ. ಇದಕ್ಕಾಗಿ ನಾವು ಟೆಂಡರ್ ಗಳನ್ನು ಕರೆಯಲಾಗಿದೆ. ನಾವು ನಮ್ಮ ಕೆಲಸ ಮಾಡುತ್ತೇವೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂದು ತಿಳಿಸಿದ್ದಾರೆ.