• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸಮಸ್ಯೆ: ಅಗತ್ಯ ಪ್ರಮಾಣದ ಔಷಧ ಪೂರೈಕೆಗೆ ಮುಂದಾಗಲು ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸಲಹೆ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸಮಸ್ಯೆ: ಅಗತ್ಯ ಪ್ರಮಾಣದ ಔಷಧ ಪೂರೈಕೆಗೆ ಮುಂದಾಗಲು ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸಲಹೆ
0
SHARES
0
VIEWS
Share on FacebookShare on Twitter

ಬೆಂಗಳೂರು, ಮೇ. 17: ಕೋವಿಡ್-19 ಸೋಂಕಿತರಿಗೆ ಅಗತ್ಯವಿರುವ ಆಕ್ಸಿಜನ್ ಸೇರಿದಂತೆ ಸೂಕ್ತ ವೈದ್ಯಕೀಯ ಸೌಲಭ್ಯಗಳ ಕೊರತೆ ಎದುರಿಸುತ್ತಿರುವ ಕರ್ನಾಟಕದಲ್ಲಿ ಇದೀಗ, ಬ್ಲ್ಯಾಕ್ ಫಂಗಸ್(ಕಪ್ಪು ಶಿಲೀಂಧ್ರ) ಸಮಸ್ಯೆಗೆ ಔಷಧಿಯ ಕೊರತೆ ಎದುರಾಗಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಕಂತ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕಪ್ಪು ಶಿಲೀಂಧ್ರದ ಸಮಸ್ಯೆಯು ಪಿಡುಗಾಗಿ, ಮಹಾಮಾರಿಯಾಗಿ ಕಾಡುವ ಆತಂಕವನ್ನು ಜನರ ಮುಂದೊಡ್ಡಿದೆ. ಅದರ ಚಿಕಿತ್ಸೆಗೆ ಅಗತ್ಯವಿರುವ Liposomal Amphotericin B ಔಷಧ ಕೊರತೆಯನ್ನು ಕರ್ನಾಟಕ ಎದುರಿಸುತ್ತಿರುವುದು ಬಹಿರಂಗವಾಗಿದೆ. ರಾಜ್ಯದಲ್ಲಿ ಔಷಧದ 1,050 ವಾಯ್ಲ್‌ಗಳು (ಶೀಶೆ) ಮಾತ್ರ ಇವೆ ಎಂಬ ಆಘಾತಕಾರಿ ಅಂಶವು ಭಯ ಸೃಷ್ಟಿಸಿದೆ.

ಕಪ್ಪು ಶಿಲೀಂಧ್ರ ಸಮಸ್ಯೆ ರಾಜ್ಯದಲ್ಲಿ ಈಗಾಗಲೇ ಗಂಭೀರ ಸ್ವರೂಪದಲ್ಲಿ ಕಾಣಿಸಿದ್ದು, ಹಲವರು ಬಲಿಯಾಗಿದ್ದಾರೆ. ಕೋವಿಡ್‌ನಿಂದ ಗುಣವಾಗುವ 400 ಮಂದಿ ಪ್ರತಿ ವಾರ ಈ ಸಮಸ್ಯೆಗೆ ಸಿಲುಕುವ ಸಾಧ್ಯತೆಯನ್ನು ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ತಿಳಿಸಿದೆ. ಹೀಗಾಗಿ ಎದುರಾಗಿರುವ ಔಷಧ ಕೊರತೆ ದುರಂತದ ಮುನ್ಸೂಚನೆ ನೀಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಅಲ್ಲದೇ, Liposomal Amphotericin B ಔಷಧಿಯ 20,000 ವಯಲ್‌ಗಳನ್ನು ಶೀಘ್ರವೇ ಪೂರೈಕೆ ಮಾಡುವಂತೆ ರಾಜ್ಯ ಔಷಧ ಉಗ್ರಾಣ ಕೇಂದ್ರವು ಕೇಂದ್ರ ಸರ್ಕಾರವನ್ನು ಕೋರಿದೆ. ರಾಜ್ಯ ಸರ್ಕಾರ ಕೂಡಲೇ ಕೇಂದ್ರದ ಮೇಲೆ ಒತ್ತಡ ತಂದು ಅಗತ್ಯ ಪ್ರಮಾಣದ ಔಷಧಗಳನ್ನು ತರಿಸಿಕೊಳ್ಳುವುದರತ್ತ ಗಮನಹರಿಸಬೇಕು. ಇಲ್ಲವಾದಲ್ಲಿ ಮತ್ತೊಂದು ಭೀಕರತೆಗೆ ಜನ ಸಿಲುಕುವ ಅಪಾಯವಿದೆ ಎಂದು ಎಚ್ಚರಿಸಿದ್ದಾರೆ.

ಕಪ್ಪು ಶಿಲೀಂಧ್ರ ಸಮಸ್ಯೆ ಮಹಾರಾಷ್ಟ್ರದಲ್ಲಿ ಹಲವು ತಿಂಗಳ ಮೊದಲೇ ಕಾಣಿಸಿಕೊಂಡಿತ್ತು. ಸಮಸ್ಯೆ ಇಲ್ಲಿಯೂ ಕಾಣಿಸಿಕೊಳ್ಳುವ ಅಪಾಯದ ಬಗ್ಗೆ ತಜ್ಞರು ಹೇಳುತ್ತಲೇ ಬಂದಿದ್ದಾರೆ. ಈ ಸಮಸ್ಯೆ ದೊಡ್ಡದಾಗುವ ಎಚ್ಚರಿಕೆಗಳಿದ್ದರೂ ಔಷಧದ ವ್ಯವಸ್ಥೆ ಮಾಡದಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ರಾಜ್ಯ ಸರ್ಕಾರದ‌ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಔಷಧ ಸಂಗ್ರಹ ಈ ಹೊತ್ತಿನ ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದು ಸಂದಿಗ್ಧ ಕಾಲದ ಸೂಕ್ತ ಸಲಹೆ ಎಂದು ಎಲ್ಲರೂ ಭಾವಿಸಿಕೊಳ್ಳಬೇಕು. ಹಲವು ದಿನಗಳಿಂದ ಸರ್ಕಾರಕ್ಕೆ ನಾನು ನೀಡಿದ ಸಲಹೆಗಳನ್ನು ಕೆಲ ಕಿಡಿಗೇಡಿಗಳು ‘ರಾಜಕೀಯ’ ಎಂದು ಭಾವಿಸಿದ್ದಾರೆ. ಪಿಡುಗೊಂದು ಕಾಡುವಾಗ ‘ಹಿಂದೆಂದೂ ನೋಡಿರದಷ್ಟು ಜನಸ್ತೋಮ’ ಸೇರಿಸಿ ರ‍್ಯಾಲಿ ಮಾಡಿದ್ದು, ಜನರನ್ನು ಕಂಡು ಉದ್ಘಾರಿಸಿದ್ದು ನಾವಲ್ಲ ಎಂಬುದು ಅರಿವಲ್ಲಿರಲಿ ಎಂದು ಕಿಡಿಕಾರಿದ್ದಾರೆ.

ಇದು ಸಂದಿಗ್ಧ ಕಾಲದ ಸೂಕ್ತ ಸಲಹೆ ಎಂದು ಎಲ್ಲರೂ ಭಾವಿಸಿಕೊಳ್ಳಬೇಕು. ಹಲವು ದಿನಗಳಿಂದ ಸರ್ಕಾರಕ್ಕೆ ನಾನು ನೀಡಿದ ಸಲಹೆಗಳನ್ನು ಕೆಲ ಕಿಡಿಗೇಡಿಗಳು 'ರಾಜಕೀಯ'ವೆಂದು ಭಾವಿಸಿದ್ದಾರೆ. ಪಿಡುಗೊಂದು ಕಾಡುವಾಗ 'ಹಿಂದೆಂದೂ ನೋಡಿರದಷ್ಟು ಜನಸ್ತೋಮ' ಸೇರಿಸಿ ರ‍್ಯಾಲಿ ಮಾಡಿದ್ದು, ಜನರನ್ನು ಕಂಡು ಉದ್ಘಾರಿಸಿದ್ದು ನಾವಲ್ಲ ಎಂಬುದು ಅರಿವಲ್ಲಿರಲಿ.
5/5

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 16, 2021

Related News

ಬೆಂಡೆಕಾಯಿ ಚಮತ್ಕಾರ: ಕೇಶರಾಶಿಯ ಆರೋಗ್ಯಕರ ಬೆಳವಣಿಗೆಗೆ ಬೆಂಡೆಕಾಯಿ ಮಾಡುತ್ತೆ ಮ್ಯಾಜಿಕ್
ಆರೋಗ್ಯ

ಬೆಂಡೆಕಾಯಿ ಚಮತ್ಕಾರ: ಕೇಶರಾಶಿಯ ಆರೋಗ್ಯಕರ ಬೆಳವಣಿಗೆಗೆ ಬೆಂಡೆಕಾಯಿ ಮಾಡುತ್ತೆ ಮ್ಯಾಜಿಕ್

October 4, 2023
ಸಿಲಿಕಾನ್ ಸಿಟಿಯ ಸಂಚಾರ ದಟ್ಟಣೆ ತಗ್ಗಿಸುವ ಹಿನ್ನಲೆ: ಶಾಲಾ ಸಮಯ ಬದಲಾವಣೆಗೆ ಚಿಂತನೆ
ಪ್ರಮುಖ ಸುದ್ದಿ

ಸಿಲಿಕಾನ್ ಸಿಟಿಯ ಸಂಚಾರ ದಟ್ಟಣೆ ತಗ್ಗಿಸುವ ಹಿನ್ನಲೆ: ಶಾಲಾ ಸಮಯ ಬದಲಾವಣೆಗೆ ಚಿಂತನೆ

October 4, 2023
ಮಣಿಪಾಲ್ ಆಸ್ಪತ್ರೆಯಿಂದ ತುರ್ತು ಸಹಾಯ ಕ್ಯೂಆರ್ ಕೋಡ್ ಬಿಡುಗಡೆ: ಇದರ ಉಪಯೋಗ ಹೇಗೆ ?
ಪ್ರಮುಖ ಸುದ್ದಿ

ಮಣಿಪಾಲ್ ಆಸ್ಪತ್ರೆಯಿಂದ ತುರ್ತು ಸಹಾಯ ಕ್ಯೂಆರ್ ಕೋಡ್ ಬಿಡುಗಡೆ: ಇದರ ಉಪಯೋಗ ಹೇಗೆ ?

October 4, 2023
ಮಹಿಷ ದಸರಾ ಆಚರಣೆ ವಿರೋಧಿಸಿ ಅ.13 ರಂದು ಚಲೋ ಚಾಮುಂಡಿ ಬೆಟ್ಟ ರಾಲಿ: ಸಂಸದ ಪ್ರತಾಪ್ ಸಿಂಹ
ಪ್ರಮುಖ ಸುದ್ದಿ

ಮಹಿಷ ದಸರಾ ಆಚರಣೆ ವಿರೋಧಿಸಿ ಅ.13 ರಂದು ಚಲೋ ಚಾಮುಂಡಿ ಬೆಟ್ಟ ರಾಲಿ: ಸಂಸದ ಪ್ರತಾಪ್ ಸಿಂಹ

October 4, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.