ಕೇರಳದಲ್ಲಿ ಕರ್ನಾಟಕ ವಾಹನಗಳಿಗೆ ತಡೆ

ಕೇರಳ, ಫೆ. 22: ಕೇರಳದಿಂದ ಕರ್ನಾಟಕಕ್ಕೆ ಬರುವವರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದ್ದು ರಾಜ್ಯದ ಗಡಿಗಳಲ್ಲಿ ಆರೋಗ್ಯ ಇಲಾಖೆಯ ಕಾರ್ಯಕರ್ತರು ಬಿಗಿ ತಪಾಸಣೆ ನಡೆಸುತಿದ್ದಾರೆ.

ಮಂಗಳೂರು ಸಮೀಪದ ತಲಪಾಡಿ ಚೆಕ್‌ ಪೋಸ್ಟ್‌ ನಲ್ಲಿ ತಪಾಸಣೆ ನಡೆಯುತ್ತಿದ್ದು ಇದಕ್ಕೆ ಕೇರಳ ರಾಜ್ಯದವರಿಂದ ತೀವ್ರ ಪ್ರತಿರೋಧ ವ್ಯಕ್ತವಾಗಿದೆ. ಅಧಿಕಾರಿಗಳು ಜಿಲ್ಲೆಯ ಗಡಿ ಭಾಗದಲ್ಲಿ ಕೇರಳದ ವಾಹನಗಳನ್ನು ತಪಾಸಣೆಗೊಳಪಡಿಸುತ್ತಿದ್ದಾರೆ. ಆದರೆ ಇದಕ್ಕೆ ಪ್ರತಿರೋಧ ಒಡ್ಡಿರುವ ಕೇರಳದ ಕೆಲವು ಸಂಘಟನೆಗಳು ಕರ್ನಾಟಕ ರಾಜ್ಯದ ವಾಹನಗಳನ್ನು ತಲಪಾಡಿ ಗಡಿಯಲ್ಲಿ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೆಎಸ್ ಆರ್ ಟಿಸಿ ಬಸ್ ಗಳು ಸೇರಿದಂತೆ ಕರ್ನಾಟಕದ ಎಲ್ಲಾ ವಾಹನಗಳು ಕೇರಳವನ್ನು ಪ್ರವೇಶಿಸಲಾಗದೆ ಸಾಲುಗಟ್ಟಿ ನಿಂತಿವೆ. ಕೇರಳದ ಆಂಬ್ಯುಲೆನ್ಸ್ ಸೇರಿದಂತೆ ತುರ್ತು ವಾಹನಗಳನ್ನು, ವಿದ್ಯಾರ್ಥಿಗಳನ್ನು ಕೂಡ ಕರ್ನಾಟಕ ರಾಜ್ಯದಲ್ಲಿ ತಡೆ ಹಿಡಿಯುತ್ತಿರುವುದರಿಂದ ಕೇರಳಕ್ಕೆ ಕರ್ನಾಟಕದ ಒಂದೇ ಒಂದು ವಾಹನ ಪ್ರವೇಶಿಸಲು ಬಿಡುವುದಿಲ್ಲವೆಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸುತ್ತಿದ್ದು, ಕರ್ನಾಟಕದ ಎಲ್ಲಾ ವಾಹನಗಳನ್ನು ತಡೆದಿದ್ದಾರೆ. ಕರ್ನಾಟಕ ಸರ್ಕಾರ ತಕ್ಷಣ ಮಧ್ಯ ಪ್ರವೇಶ ಮಾಡಿ ಪರಿಸ್ಥಿತಿಯನ್ನು ನಿಯಂತ್ರಿಸಬೇಕು ಮತ್ತು ಸಮಸ್ಯೆಯನ್ನು ಬಗೆಹರಿಸಬೇಕೆಂದು ವಾಹನಗಳಲ್ಲಿರುವ ಕನ್ನಡಿಗರು ಒತ್ತಾಯಿಸುತ್ತಿದ್ದಾರೆ.

Latest News

ದೇಶ-ವಿದೇಶ

ರೇಷನ್ ಕಾರ್ಡ್ ಹೊಂದಿರುವ ಬಡವರಿಗೆ ರಾಷ್ಟ್ರಧ್ವಜ ಖರೀದಿಸುವಂತೆ ಒತ್ತಾಯಿಸುತ್ತಿದ್ದಾರೆ : ರಾಹುಲ್ ಗಾಂಧಿ

ಇದು ಬಿಜೆಪಿ ಸರ್ಕಾರದ ಪ್ರಚಾರ ಪಿತೂರಿ. ಈ ರೀತಿ ಮಾಡುವ ಮೂಲಕ ಬಿಜೆಪಿಯು “ರಾಷ್ಟ್ರೀಯತೆ”ಯನ್ನು ಮಾರಾಟ ಮಾಡುತ್ತಿದೆ ಮತ್ತು ಬಡವರ ಆತ್ಮಗೌರವಕ್ಕೆ ಧಕ್ಕೆ ತಂದಿದೆ ಎಂದು ಆರೋಪಿಸಿದ್ದಾರೆ.

ರಾಜಕೀಯ

`ಬ್ಲ್ಯಾಕ್‌ ಮೇಲ್‌ ಕುಮಾರಸ್ವಾಮಿʼ ; ಕಣ್ಣೀರ ಕೋಡಿಯಿಂದ ಕುಟುಂಬಕ್ಕೆ ಲಾಭವೇ ಹೊರತು ಜನತೆಗೇನು ಲಾಭ? : ಅಶ್ವಥ್ ನಾರಾಯಣ್‌

ನೀವು ಈವರೆಗೆ ಹೇಳಿದ ಸುಳ್ಳುಗಳನ್ನು ಎಣಿಸಲು ಸಾಧ್ಯವೇ? ಎಂದು ಸಚಿವ(Minister) ಅಶ್ವಥ್‌ ನಾರಾಯಣ್(Ashwath Narayan) ಪ್ರಶ್ನಿಸಿದ್ದಾರೆ.

ದೇಶ-ವಿದೇಶ

ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈದ ಭಾರತೀಯ ಸೇನೆ ; ದಾಳಿಯಲ್ಲಿ ಮೂವರು ಯೋಧರು ಹುತಾತ್ಮ!

ಸ್ವಾತಂತ್ರ್ಯ ದಿನಾಚರಣೆ(Independence Day) ಸಂದರ್ಭದಲ್ಲಿ ಉಗ್ರರು ದೇಶದ ವಿವಿಧ ಭಾಗಗಳಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ದೇಶ-ವಿದೇಶ

‘ಡಾನಿ’ ಬುಡಕಟ್ಟು ಜನಾಂಗದಲ್ಲಿ ಬೆರಳನ್ನು ಕತ್ತರಿಸುವುದೇ ಸಂಪ್ರದಾಯವಂತೆ!

ಇಂಡೋನೇಷ್ಯಾದ, ಪಪುವಾ ಗಿನಿಯಾ ದ್ವೀಪದಲ್ಲಿ ವಾಸಿಸುವ ಎಲ್ಲಾ ಡಾನಿ ಬುಡಕಟ್ಟಿನ ಮಹಿಳೆಯರನ್ನು ಕತ್ತರಿಸಿದ ಬೆರಳುಗಳಿಂದ ಬದುಕಲು ಒತ್ತಾಯಿಸಲಾಗುತ್ತದೆ.