BMRCL hinted at hike in our metro ticket prices: Commuters’ outrage.
Bengaluru: ದಿನ ಬೆಳಗಾದರೆ ಲಕ್ಷಾಂತರ ಜನ ಪ್ರಯಾಣ ಬೆಳೆಸುವ ಬೆಂಗಳೂರಿನ (Bengaluru) ನಮ್ಮ ಮೆಟ್ರೋ ರೈಲು ನಿಲ್ದಾಣಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾದ ಹಿನ್ನಲೆಯಲ್ಲಿ, ಮೆಟ್ರೋ ನಿಲ್ದಾಣಗಳಲ್ಲಿ ಪಿಎಸ್ಡಿ (ಪ್ಲಾಟ್ ಫಾರಂ ಸ್ಕ್ರೀನ್) ಅಳವಡಿಕೆಗೆ ಬಿಎಂಆರ್ಸಿಎಲ್ ಮುಂದಾಗಿದೆ.
ಹೊಸ ಮಾರ್ಗಗಳಾದ ಗೊಟ್ಟಿಗೆರೆಯಿಂದ ನಾಗವಾರ (ಪಿಂಕ್ ಲೈನ್), ಸಿಲ್ಕ್ ಬೋರ್ಡ್ (Silk Board) ನಿಂದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬ್ಲೂ ಲೈನ್ನಲ್ಲಿ ಪಿಎಸ್ಡಿ ಡೋರ್ ಅಳವಡಿಸಲು ಖಾಸಗಿ ಕಂಪನಿಗೆ 152 ಕೋಟಿ ರುಪಾಯಿ ವೆಚ್ಚದಲ್ಲಿ ಗುತ್ತಿಗೆ ನೀಡಲಾಗಿದೆ. ಹೀಗಿರುವಾಗ ಹಳೆಯ ಮೆಟ್ರೋ ಸ್ಟೇಷನ್ಗಳಿಗೂ ಪಿಎಸ್ಡಿ ಡೋರ್ (PSD Door) ಅಳವಡಿಸ ಬೇಕೆಂದು ಪ್ರಯಾಣಿಕರ ಒತ್ತಡ ಹೆಚ್ಚಾಗಿದೆ.
ಈಗಾಗಲೇ ಇರುವ ಎಲ್ಲಾ ಮೆಟ್ರೋ ಸ್ಟೇಷನ್ಗಳಿಗೂ ಪಿಎಸ್ಡಿ ಅಳವಡಿಸಲು 700 ರಿಂದ 800 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೆಟ್ರೋ ಟಿಕೆಟ್ (Metro Ticket) ದರ ಹೆಚ್ಚಿಸುವ ಕುರಿತು ಬಿಎಂಆರ್ಸಿಎಲ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಬಗ್ಗೆ ಬಿಎಂಆರ್ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶ್ವಂತ್ ಚೌವ್ಹಾಣ್ (Yashwanth Chouhan) ಬೆಲೆ ಏರಿಕೆಯ ಸುಳಿವು ನೀಡಿದ್ದಾರೆ.
ಒಂದು ಮೆಟ್ರೋ ಸ್ಟೇಷನ್ (Metro Station)ಗೆ ಪಿಎಸ್ಡಿ ಅಳವಡಿಸಲು 8 ರಿಂದ 10 ಕೋಟಿ ವೆಚ್ಚವಾಗಲಿದೆ. ಸದ್ಯ ಕಾರ್ಯಾಚರಣೆಯಲ್ಲಿರುವ ಹಸಿರು ಮತ್ತು ನೇರಳೆ ಮಾರ್ಗದ ಎಲ್ಲಾ ಮೆಟ್ರೋ ಸ್ಟೇಷನ್ಗಳಿಗೆ ಪಿಎಸ್ಡಿ ಅಳವಡಿಸಲು ಸುಮಾರು 700 ರಿಂದ 800 ಕೋಟಿ ರೂಪಾಯಿ ಆಗಲಿದೆ ಎಂದು ಅವರು ತಿಳಿಸಿದ್ದಾರೆ. ಹೀಗಾಗಿ ಟಿಕೆಟ್ ದರ ಏರಿಕೆ ಮಾಡಲು ಚಿಂತನೆ ನಡೆಸಲಾಗುತ್ತಿದೆ.
BMRCL To Install Platform Screen Doors Kannada live
ಈಗಾಗಲೇ ಬೆಲೆ ಏರಿಕೆಯ ಬಿಸಿಗೆ ತತ್ತರಿಸಿರುವ ಬೆಂಗಳೂರು ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ.ಆದರೆ ಇದಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅನುದಾನ ಕೇಳಿ ಪಿಎಸ್ಡಿ ಹಾಕಿ, ಅದನ್ನು ಬಿಟ್ಟು ಪ್ರಯಾಣಿಕರ ಮೇಲೆ ಹೊರೆ ಹಾಕುವುದು ಸರಿಯಲ್ಲ ಎಂದುಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
In the background of increasing number of suicide cases in our metro stations of Bengaluru, where lakhs of people travel every day, BMRCL has decided to install PSD (Platform Screen) in metro stations.
A contract has been awarded to a private company at a cost of 152 crore rupees for installation of PSD doors on new routes like Gottigere to Nagawara (Pink Line), Silk Board (Silk Board) Blue Line connecting to International Airport. In such a situation, the pressure of passengers to install PSD Door (PSD Door) in the old metro stations has increased.
It is estimated that the cost of installing PSD in all the existing metro stations will be Rs 700 to 800 crore. In this background, BMRCL is said to be thinking about increasing the price of Metro Ticket. In this regard, BMRCL Chief Public Relations Officer Yashwanth Chouhan (Yashwanth Chouhan) has hinted at the price hike.
It will cost 8 to 10 crores to install PSD for a metro station. He said that it will cost around Rs 700 to 800 crore to install PSD for all metro stations on the green and purple lines which are currently in operation. Therefore, it is being considered to increase the ticket price.
The people of Bangalore, who are already reeling under the heat of the price hike, seem to add insult to injury, but the passengers are expressing their outrage. Passengers are expressing outrage that it is not right to ask for grant from central and state government and put PSD and leave it and burden passengers.