ಇನ್ಮುಂದೆ ಬೆಳಗ್ಗೆ 5 ಗಂಟೆಯಿಂದ ಮೆಟ್ರೋ ಸಂಚಾರ ಆರಂಭ

ಬೆಂಗಳೂರು ಡಿ 18 : ಪ್ರಯಾಣಿಕರಿಗೆ ಅನೂಕೂಲವಾಗುವ ದೃಷ್ಟಿಯಿಂದ ಮೆಟ್ರೋದ ಸಮಯವನ್ನು ಬದಲಿಸಲಾಗಿದ್ದು, ಇನ್ನುಮುಂದೆ ಪ್ರತಿದಿನ ಬೆಳಗ್ಗ 5 ಘಂಟೆಗೆ ಮೆಟ್ರೋ ತನ್ನ ಸಂಚಾರವನ್ನು ಶುರು ಮಾಡಲಿದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್(ಬಿಎಂಆರ್ ಸಿಎಲ್) ನಮ್ಮ ಮೆಟ್ರೋ ರೈಲು ಸಂಚಾರದ ಅವಧಿಯನ್ನು ಹೆಚ್ಚಿಸಿದ್ದು, ಡಿಸೆಂಬರ್ 20 ರಿಂದ ಬೆಳಗ್ಗೆ 5 ಗಂಟೆಯಿಂದಲೇ ಮೆಟ್ರೋ ರೈಲು ಸಂಚಾರ ಆರಂಭ ಆಗಲಿದೆ.ಇದಕ್ಕೂ ಮೊದಲು 6ಗಂಟೆಯಿಂದ ಮೆಟ್ರೋ ಸಂಚಾರ ಪ್ರಾರಂಭವಾಗುತ್ತಿತ್ತು.

ಡಿಸೆಂಬರ್ 20ರಿಂದ ಅನ್ವಯವಾಗುವಂತೆ ನಮ್ಮ ಮೆಟ್ರೋ ರೈಲು ಸೇವೆಗಳ ಕಾರ್ಯಾಚರಣೆಯ ಸಮಯವನ್ನು ಭಾನುವಾರ ಹೊರತುಪಡಿಸಿ ಸೋಮವಾರದಿಂದ ಶನಿವಾರದವರೆಗೆ ಎಲ್ಲಾ ದಿನಗಳಂದು ಒಂದು ಗಂಟೆ ಮುಂಚಿತವಾಗಿ ರೈಲು ಸಂಚಾರ ಆರಂಭವಾಗುತ್ತಿದೆ.

ವಾರದ ದಿನಗಳಲ್ಲಿ ಎಲ್ಲಾ ಟರ್ಮಿನಲ್ ನಿಲ್ದಾಣಗಳಾದ ನಾಗಸಂದ್ರ, ರೇಷ್ಮೆ ಸಂಸ್ಥೆ, ಕೆಂಗೇರಿ ಮತ್ತು ಬೈಯ್ಯಪ್ಪನಹಳ್ಳಿಯಿಂದ ಮೊದಲ ಮೆಟ್ರೋ ರೈಲು ಸೇವೆಯು ಬೆಳಗ್ಗೆ 5 ಗಂಟೆಯಿಂದ ಲಭ್ಯವಿರುತ್ತದೆ. 

ಭಾನುವಾರಗಳಂದು ಯಾವುದೇ ಬದಲಾವಣೆಯಿಲ್ಲದೆ ರೈಲುಗಳ ಸೇವೆಯು ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗುತ್ತದೆ. ಕೊನೆಯ ಮೆಟ್ರೋ ರೈಲು ಸೇವೆಯು ಎಲ್ಲಾ ದಿನಗಳಲ್ಲಿ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ರಾತ್ರಿ 11 ಗಂಟೆಗೆ ಮತ್ತು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ ನಿಂದ 11.30ಕ್ಕೆ ಹೊರಡಲಿದೆ ಎಂದು ಮೆಟ್ರೋ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Exit mobile version