5,8,9 ಮತ್ತು 11ನೇ ತರಗತಿಗಳ ಬೋರ್ಡ್ ಎಕ್ಸಾಂ ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ಆದೇಶ!

Bengaluru: ರುಪ್ಸಾ ಸಂಘಟನೆಯ ಮನವಿಯ ಮೇರೆಗೆ (Board Exam Cancel-HC Order) ಕರ್ನಾಟಕ ಹೈಕೋರ್ಟ್ (Karnataka High court)

2023ರ ಡಿಸೆಂಬರ್ನಲ್ಲಿ ಹೊರಡಿಸಿದ ರಾಜ್ಯ ಸರ್ಕಾರದ ಸುತ್ತೋಲೆಯನ್ನು ರದ್ದುಗೊಳಿಸಲು ಆದೇಶಿಸಿದೆ. ಈ ಹಿಂದೆ ರಾಜ್ಯ ಸರ್ಕಾರ ಆದೇಶದ ಸುತ್ತೋಲೆಯು

5, 8, 9 ಮತ್ತು 11 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ಕಡ್ಡಾಯಗೊಳಿಸಿತ್ತು. ಇದೀಗ ಸಾಕಷ್ಟು ವಿರೋಧಗಳ ಮಧ್ಯೆಯೇ  5, 8,9 ಮತ್ತು 11 ನೇ ತರಗತಿಗೆ

ಬೋರ್ಡ್ ಎಕ್ಸಾಂ ಮಾಡಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು  ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಸುತ್ತೋಲೆ ರದ್ದು ಮಾಡಿ

ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ.ನ್ಯಾಯಮೂರ್ತಿ ರವಿ ಹೊಸಮಂಜ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರಕ್ಕೆ ಹಿನ್ನೆಡೆಯಾಗಿದೆ. ಡಿಸೆಂಬರ್ (December) 2023ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ  ಕರ್ನಾಟಕ ನೋಂದಾಯಿತ

ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ)  ಸಂಘಟನೆ  ಕೋರ್ಟ್ ಮೆಟ್ಟಲೇರಿತ್ತು. ವಾದ ಆಲಿಸಿದ ಹೈಕೋರ್ಟ್ ಸರ್ಕಾರ ಸುತ್ತೋಲೆ ರದ್ದುಗೊಳಿಸಿ

ಆದೇಶಿಸಿದೆ. ಅರ್ಜಿದಾರರ ಪರ (Board Exam Cancel-HC Order) ವಕೀಲ ಸುದರ್ಶನ್ (Sudarshan) ವಾದ ಮಂಡಿಸಿದ್ದರು.

ಬಿಜೆಪಿ (BJP) ಸರ್ಕಾರವಿದ್ದಾಗ ಮಾಜಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ 5 ನೇ ತರಗತಿ ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ   ಪಬ್ಲಿಕ್‌ ಮಾದರಿಯ ಮೌಲ್ಯಾಂಕನ

ಪರೀಕ್ಷೆ ಜಾರಿಗೆ ತಂದಿದ್ದರು. ಸಿದ್ದರಾಮಯ್ಯ (Siddaramaiah) ಸರ್ಕಾರ ಬಂದ ಮೇಲೆ 9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಬೋರ್ಡ್‌

ಎಕ್ಸಾಮ್‌ (Board Exam) ನಡೆಸುವ ಚಿಂತನೆ ಮಾಡಲಾಗಿತ್ತು. ಇದು ಆರಂಭದಲ್ಲಿ ಖಾಸಗಿ ಶಾಲಾ ಆಡಳಿತ ಸಂಘಗಳಿಂದ ವಿರೋಧವನ್ನು ಎದುರಿಸಿತು

ಎಂಬುದು ಗಮನಿಸಬೇಕಾದ ಸಂಗತಿಯಾಗಿದೆ. 2023-24ನೇ ಸಾಲಿನಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಸಮ್ಮೇಟಿವ್ ಅಸೆಸ್ಮೆಂಟ್ 2 ಮತ್ತು 11ನೇ ತರಗತಿ

ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿತ್ತು

9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಪಬ್ಲಿಕ್‌ ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳ ಕಲಿಕೆಯಲ್ಲಿ ಗಂಭೀರತೆ ಕಾಣಬಹುದು ಎಂದು ಹಾಲಿ

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ (Madhu Bangarappa) ಈ ಹಿಂದೆ ಹೇಳಿದ್ದರು. ಪ್ರಸ್ತುತ 9ನೇ ತರಗತಿವರೆಗೆ ವಿದ್ಯಾರ್ಥಿಗಳನ್ನು

ಅನುತ್ತೀರ್ಣ ಮಾಡುವ ಹಾಗಿಲ್ಲ. ಹಾಗಾಗಿ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳು ಎಂದಿನಂತೆ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗಲಿದ್ದು,ಸದ್ಯ ಕರ್ನಾಟಕದಲ್ಲಿ

10ನೇ ತರಗತಿ ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಪಬ್ಲಿಕ್ ಎಕ್ಸಾಮ್‌ (Public Exam) ನಡೆಸಲಾಗುತ್ತಿದೆ.

ಇದನ್ನು ಓದಿ: ಶಾಕಿಂಗ್ ನ್ಯೂಸ್: ಬೀಫ್ ರಫ್ತಿನಲ್ಲಿ ಎರಡನೇ ಸ್ಥಾನ ಪಡೆದ ಭಾರತ!

Exit mobile version