ಬಾಯ್ಲರ್ ಸ್ಪೋಟ ಇಬ್ಬರ ಸಾವು, ನಾಲ್ವರಿಗೆ ಗಾಯ

ಬೆಂಗಳೂರು ಆ 23 : ಬಾಯ್ಲರ್ ಸ್ಪೋಟಿಸಿದ ಪರಣಾಮ ಇಬ್ಬರು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರಿನ ಮಾಗಡಿ ರಸ್ತೆಯ ಅಂಜನ್ ಥಿಯೇಟರ್ ಬಳಿ ನಡೆದಿದೆ.

ಮಾಗಡಿ ರಸ್ತೆಯಲ್ಲಿರುವ ಅಂಜನ್‌ ಚಿತ್ರಮಂದಿರ ಬಳಿ ಮಧ್ಯಾಹ್ನ 1.45ರ ಸುಮಾರಿಗೆ ಘಟನೆ ನಡೆದಿದೆ. ಬಾಯ್ಲರ್‌ ಸ್ಫೋಟಗೊಂಡ ವೇಳೆ ಎಂಎಂ ಫುಡ್‌ ಫ್ಯಾಕ್ಟರಿಯಲ್ಲಿ 7 ಜನ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಚಿಪ್ಸ್, ಕಾಬೂಲ್ ಕಡಲೆ ಹಾಗೂಇನ್ನಿತರ ಉತ್ಪನ್ನಗಳನ್ನು ತಯಾರಿಸುತ್ತಿದ್ದ ಘಟಕದಲ್ಲಿ ಈ ಘಟನೆ ನಡೆದಿದ್ದು ಈ ಘಟನೆಯಿಂದ ಇಬ್ಬರು ಅಸುನೀಗಿದ್ದು ಜೊತೆಗೆ ನಾಲ್ವರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಮೃತಪಟ್ಟವರನ್ನು ಬಿಹಾರ್‌ ಮೂಲದ ಮನೀಶ್‌ ಹಾಗೂ ಸೌರಭ್‌ ಎಂದು ಗುರುತಿಸಲಾಗಿದೆ. ಶಾಂತಿ, ಧನಲಕ್ಷ್ಮೀ ಹಾಗೂ ಸಚಿನ್‌ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ಭೇಟಿ ನೀಡಿ ಪರಿಶೀಲಿಸಿದರು.

Latest News

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.

ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.