ರಾಜಭವನಕ್ಕೆ ಹುಸಿ ಬಾಂಬ್ ಕರೆ: ಆಂಧ್ರದಲ್ಲಿ ಪೋಲೀಸರ ಬಲೆಗೆ ಬಿದ್ದ ಆರೋಪಿ ಭಾಸ್ಕರ್

Bengaluru: ರಾಷ್ಟ್ರೀಯ ತನಿಖಾ ದಳದ ಸಹಾಯವಾಣಿಗೆ ಕರೆ ಮಾಡಿ ರಾಜಭವನದಲ್ಲಿ (Bomb Threat Call to Rajbhavan) ಬಾಂಬ್ ಇರಿಸಿರುವುದಾಗಿ ಹುಸಿ ಬಾಂಬ್ ಬೆದರಿಕೆ ಹಾಕಿದ

ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಪೊಲೀಸರು (Bomb Threat Call to Rajbhavan) ಬಂಧಿಸಿರುವುದಾಗಿ ವರದಿಯಾಗಿದೆ.

ಕೋಲಾರ (Kolar) ಜಿಲ್ಲೆ ಮುಳಬಾಗಿಲು ತಾಲೂಕು ವಡ್ಡಹಳ್ಳಿ ನಿವಾಸಿ ಭಾಸ್ಕರ್ ಬಂಧಿತ ಆರೋಪಿ. ಆರೋಪಿಯು ಸೋಮವಾರ ಬೆಂಗಳೂರಿಗೆ ಬಂದಿದ್ದ. ಈ ವೇಳೆ ಗೂಗಲ್ ನಲ್ಲಿ ನಂಬರ್

ಪಡೆದು ನಂತರ ರಾಜಭವನಕ್ಕೆ ಬಾಂಬ್ (Bomb) ಇಟ್ಟಿರುವುದಾಗಿ ಕರೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ತದ ನಂತರ ಈ ಆರೋಪಿಯು ಬೆಂಗಳೂರಿನಿಂದ (Bengaluru) ನೇರವಾಗಿ ಆಂಧ್ರದ ಚಿತ್ತೂರಿನ ದೇವಸ್ಥಾನವೊಂದಕ್ಕೆ ತೆರಳಿದ್ದಾನೆ. ಬಾಂಬ್ ಬೆದರಿಕೆ ಕರೆ ಬಂದಿದ್ದ ಫೋನ್ ನಂಬರ್’ ನ

ನೆಟ್ ವರ್ಕ್ ಟ್ರ್ಯಾಕ್ (Network Track) ಮಾಡಿದ ಪೊಲೀಸರು, ಆರೋಪಿ ಭಾಸ್ಕರ್ ನನ್ನು ಆಂಧ್ರದಲ್ಲಿ ಬಂಧಿಸಿದ್ದಾರೆ. ಆರೋಪಿಯನ್ನು ವಿಧಾನಸೌಧ (Vidhanasoudha) ಠಾಣೆ ಪೊಲೀಸರು

ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.

ಸೋಮವಾರ ರಾತ್ರಿ 11:30ರ ಸುಮಾರಿಗೆ ನಗರದ ದೊಮ್ಮಲೂರಿನಲ್ಲಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (National Investigation Agency) ಕಚೇರಿಯ ನಿಯಂತ್ರಣ ಕೊಠಡಿಗೆ ಅನಾಮಧೇಯ

ಕರೆಯೊಂದು ಬಂದಿದ್ದು ರಾಜಭವನದ ಆವರಣದಲ್ಲಿಟ್ಟಿರುವ ಬಾಂಬ್ ಕೆಲವೇ ಕ್ಷಣಗಳಲ್ಲಿ ಸ್ಫೋಟಿಸಲಿದೆ ಎಂದು ತಿಳಿಸಿ ಕರೆಯನ್ನು ಸ್ಥಗಿತಗೊಳಿಸಲಾಗಿತ್ತು.

ಕರೆ ಬಂದ ಕೂಡಲೇ ಪೊಲೀಸರಿಗೆ ಮಾಹಿತಿ ರವಾನಿಸಿದ್ದ ಎನ್ಐಎ (NIA) ಅಧಿಕಾರಿಗಳು ಸ್ಥಳೀಯ ಪೊಲೀಸರಿಗೂ ಮಾಹಿತಿ ರವಾನಿಸಿದ್ದು, ನಂತರ 12 ಗಂಟೆ ಸುಮಾರಿಗೆ ಪೊಲೀಸರು,

ಬಾಂಬ್ ನಿಷ್ಕ್ರೀಯ ದಳ, ಶ್ವಾನದಳ, ಬೆರಳಚ್ಚು ತಜ್ಞರು ಸ್ಥಳಕ್ಕೆ ಧಾವಿಸಿ ರಾಜಭವನದ ಸುತ್ತಮುತ್ತಾ ಪರಿಶೀಲನೆ ನಡೆಸಿದ್ದಾರೆ.

ಯಾವುದೇ ಅನುಮಾನಾಸ್ಪದ ವಸ್ತುಗಳು ಈ ಸಂದರ್ಭದಲ್ಲಿ ದೊರೆತಿಲ್ಲ. ಹಾಗಾಗಿ ಇದೊಂದು ಹುಸಿ ಬಾಂಬ್ ಕರೆ ಎಂಬುದು ತಿಳಿದುಬಂದಿದೆ.

ಇದನ್ನು ಓದಿ: ಇಂಡಿಯನ್ ಆಯಿಲ್ ಕಾರ್ಪೋರೇಷನ್ನಲ್ಲಿ 1603 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Exit mobile version