ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ಹಾಗೂ ಉದ್ಧವ್ ಠಾಕ್ರೆ #Uddhav Thackery ಬಣದ 14 ಶಾಸಕರ (BombayHC issued notice for 14MLAs) ವಿರುದ್ಧ ಬಾಂಬೆ ಹೈಕೋರ್ಟ್
ನೋಟಿಸ್ ಜಾರಿಮಾಡಿದೆ. ಉದ್ಧವ್ ಠಾಕ್ರೆ ಬಣದ 14 ಶಾಸಕರನ್ನು ಅನರ್ಹಗೊಳಿಸದಿರುವ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರ ನಿರ್ಧಾರವನ್ನು ಏಕನಾಥ್ ಶಿಂಧೆ
(Ekanath Shinde) ಬಣದ ಮುಖ್ಯ ಸಚೇತಕ ಭರತ್ ಗೊಗವಾಲೆ ಅವರು ಬಾಂಬೆ ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು.
ಬುಧವಾರ ಈ ಕುರಿತು ಮಹಾರಾಷ್ಟ್ರ ಸ್ಪೀಕರ್ ರಾಹುಲ್ ನಾರ್ವೇಕರ್ (Rahul Narvekar) ಮತ್ತು ಉದ್ಧವ್ ಠಾಕ್ರೆ ಗುಂಪಿನ 14 ಶಾಸಕರಿಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.
ಪೀಠವು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 8ಕ್ಕೆ ನಿಗದಿಪಡಿಸಿದೆ. ಜೂನ್ 2022 ರಲ್ಲಿ ವಿಭಜನೆಯಾದ ನಂತರ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ (Shivasena) ಬಣವನ್ನು
ನಿಜವಾದ ಶಿವಸೇನೆ ಎಂದು ಘೋಷಿಸಿದ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ಅವರ ಆದೇಶವನ್ನು ಪ್ರಶ್ನಿಸಿ ಉದ್ಧವ್ ಠಾಕ್ರೆ ಬಣ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.
ಪಕ್ಷಾಂತರ ನಿಷೇಧ ಕಾಯ್ದೆಯಡಿ 2022ರಲ್ಲಿ ಪಕ್ಷ ಇಬ್ಭಾಗವಾದ ನಂತರ ಪರಸ್ಪರ ಶಾಸಕರನ್ನು ಅನರ್ಹಗೊಳಿಸಬೇಕೆಂಬ ಬೇಡಿಕೆ ಇತ್ತು. ಎರಡೂ ಬಣಗಳು ಅನರ್ಹತೆಗೆ ಆಗ್ರಹಿಸಿದ್ದವು, ಶಿಂಧೆ
ಸೇರಿದಂತೆ ಆಡಳಿತಾರೂಢ ಗುಂಪಿನ 16 ಶಾಸಕರನ್ನು ಅನರ್ಹಗೊಳಿಸುವಂತೆ ಉದ್ಧವ್ ಠಾಕ್ರೆ ಗುಂಪು ಮನವಿ ಮಾಡಿತ್ತು.
ಸುದ್ದಿ ಸಂಸ್ಥೆ ಪಿಟಿಐ ವರದಿ ಪ್ರಕಾರ, ಶಿಂಧೆ ಅವರು ಉದ್ಧವ್ ಠಾಕ್ರೆ ಬಣದ 14 ಶಾಸಕರನ್ನು ಅನರ್ಹಗೊಳಿಸುವಂತೆ ಒತ್ತಾಯಿಸಿದ್ದಾರೆ. ಆದರೂ ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ಜನವರಿ
(January) 10 ರಂದು ತಮ್ಮ ತೀರ್ಪಿನಲ್ಲಿ ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂಧೆ ಬಣ ಸಲ್ಲಿಸಿದ್ದ ಅನರ್ಹತೆ ಅರ್ಜಿಗಳನ್ನು ತಿರಸ್ಕರಿಸಿದ್ದರು. ಇನ್ನು ನ್ಯಾಯಮೂರ್ತಿ ಗಿರೀಶ್ ಕುಲಕರ್ಣಿ
(Girish Kulkarni) ಮತ್ತು ನ್ಯಾಯಮೂರ್ತಿ ಫಿರ್ದೋಶ್ ಪೂನಿವಾಲಾ ಅವರ ವಿಭಾಗೀಯ ಪೀಠವು ಮಹಾರಾಷ್ಟ್ರ ಶಾಸಕಾಂಗ ಸಚಿವಾಲಯಕ್ಕೆ ನೋಟಿಸ್ ಜಾರಿ ಮಾಡಿದೆ ಮತ್ತು ಅರ್ಜಿಯ
ಬಗ್ಗೆ ತಮ್ಮ ಅಫಿಡವಿಟ್ ಸಲ್ಲಿಸಲು ಎಲ್ಲಾ (BombayHC issued notice for 14MLAs) ಪ್ರತಿವಾದಿಗಳಿಗೆ ಸೂಚಿಸಿದೆ.
ಜುಲೈ 4, 2022 ರಂದು ವಿಧಾನಸಭೆಯಲ್ಲಿ ನಡೆಯಲಿರುವ ವಿಶ್ವಾಸಮತ ಯಾಚನೆಯ ಸಂದರ್ಭದಲ್ಲಿ ಶಿಂಧೆ ಸರ್ಕಾರದ ಪರವಾಗಿ ಮತ ಚಲಾಯಿಸುವಂತೆ ಎಲ್ಲಾ ಶಿವಸೇನೆ ಸದಸ್ಯರಿಗೆ
ಜುಲೈ 3, 2022 ರಂದು ವಿಪ್ ನೀಡಿದ್ದಾಗಿ ಗೋಗವಾಲೆ ಅರ್ಜಿಯಲ್ಲಿ ತಿಳಿಸಿದ್ದಾರೆ. 14 ಉದ್ಧವ್ ಠಾಕ್ರೆ ಶಾಸಕರು ವಿಪ್ ಉಲ್ಲಂಘಿಸಿದ್ದು ಮಾತ್ರವಲ್ಲದೆ ಶಿವಸೇನಾ ರಾಜಕೀಯ ಪಕ್ಷದ ಸದಸ್ಯತ್ವವನ್ನೂ
ತೊರೆದಿದ್ದಾರೆ. ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲು ವಿಶೇಷ ಅಧಿವೇಶನ ಕರೆಯುವಂತೆ ರಾಜ್ಯಪಾಲ ರಮೇಶ್ ಬೈಸ್ (Ramesh Bais) ಅವರನ್ನು
ಒತ್ತಾಯಿಸಲಾಗಿದೆ.