ಬೆಂಗಳೂರು ಡಿ 20 : ಬಹು ನಿರೀಕ್ಷಿತ ಮತಾಂತರ ನಿಷೇಧ ಕಾಯ್ದೆಗೆ ಸದನದಲ್ಲಿ ಕೊನೆಗೂ ಅಂಕಿತ ಬಿದ್ದಿದೆ. ಸಾಕಷ್ಟು ಹಿಂದೂಗಳು ನಿರೀಕ್ಷಿಸಿದ್ದ ಕಾಯಿದೆಗೆ ಕೊನೆಗೂ ಅಂಕಿತ ದೊರೆತಿದೆ. ವಿವಾದಿತ ಮತಾಂತರ ನಿಷೇಧ ಕಾಯ್ದೆಯ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ನಾಳೆ ವಿಧಾನಸಭೆಯಲ್ಲಿ ವಿಧೇಯಕ ಮಂಡನೆಯಾಗುವ ಸಾಧ್ಯತೆಯಿದೆ. ವಿಧೇಯಕಗಳಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಲಾಗಿದ್ದು, ಹೊಸ ಬದಲಾವಣೆಗಳೊಂದಿಗೆ ನಾಳೆ ವಿಧಾನಸಭೆಯಲ್ಲಿ ಮಂಡನೆಯಾಗಲಿದೆ. ಇತ್ತೀಚೆಗೆ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸದಂತೆ ಕ್ರೈಸ್ತ ಧರ್ಮಗುರುಗಳ ಒಕ್ಕೂಟವೊಂದು ಮುಖ್ಯಮಂತ್ರಿ ಬೊಮ್ಮಾಯಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತ್ತು.

ದೇಶ-ವಿದೇಶ
ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರನ್ನು ಹತ್ಯೆಗೈದ ಭಯೋತ್ಪಾದಕರು!
ಕಾಶ್ಮೀರಿ ಪಂಡಿತರೊಬ್ಬರನ್ನು(Kashmiri Pandits) ಗುಂಡಿಕ್ಕಿ ಕೊಂದು ಆತನ ಸಹೋದರನನ್ನು ಗಾಯಗೊಳಿಸಿದ್ದಾರೆ. ಸಂತ್ರಸ್ತ ಸಹೋದರನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.