ಕಾರ್ಮಿಕ ಭವನದಲ್ಲಿ ಕಾರ್ಮಿಕರಿಗೆ ಸಕಲ ಸೌಲಭ್ಯ – ಬೊಮ್ಮಾಯಿ

ಬೆಂಗಳೂರು ಡಿ 31 : ಕಾರ್ಮಿಕರ ಸಮಸ್ಯೆಗಳನ್ನು ನೀಗಿಸುವ ಸಲುವಾಗಿ ಸಿಎಂ ಬೊಮ್ಮಾಯಿ ಹೊಸ ಯೋಜನೆಯೊಂದನ್ನು ರೂಪಿಸಿದ್ದು ಕಾರ್ಮಿಕರ ಭವನದಲ್ಲಿ ಕಾರ್ಮಿಕರಿಗೆ ಬೇಕಾದ ಎಲ್ಲ ಸವಲತ್ತುಗಳು ಒಂದೇ ಸೂರಿನಡಿ ಲಭ್ಯವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು ಕಾರ್ಮಿಕ ಇಲಾಖೆ ಅದ್ಭುತವಾಗಿ ಕೆಲಸ ಮಾಡುತ್ತಿದ್ದು, ಕಾರ್ಮಿಕರಿಗೆ ಬೇಕಾದ ಎಲ್ಲ ಸವಲತ್ತುಗಳು ಒಂದೇ ಸೂರಿನಡಿ ದೊರಕಲು ಅನುಕೂಲವಾಗುವಂತೆ ಕಾರ್ಮಿಕ ಭವನವನ್ನು ನಿರ್ಮಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ 8 ಕಾರ್ಮಿಕ ಭವನಗಳನ್ನು ನಿರ್ಮಿಸಲಾಗಿದೆ. ಬರುವ ದಿನಗಳಲ್ಲಿ ಉಳಿದೆಲ್ಲ ಜಿಲ್ಲೆಗಳಲ್ಲಿಯೂ ಕಾರ್ಮಿಕ ಭವನವನ್ನು ನಿರ್ಮಿಸಲಾಗುವುದು. ವೈದ್ಯಕೀಯ ಸೌಲಭ್ಯಗಳನ್ನು ಪೂರೈಸುವ ಸಂಚಾರಿ ಚಿಕಿತ್ಸಾ ಘಟಕಕ್ಕೆ ಚಾಲನೆ ನೀಡಲಾಗಿದೆ. ಕಾರ್ಮಿಕ ರಕ್ಷಣೆ ಹಾಗೂ ಕಾರ್ಮಿಕ ಕಲ್ಯಾಣ, ಕೋವಿಡ್ ನ ಸಂದರ್ಭದಲ್ಲಿ ಕಾರ್ಮಿಕರಿಗೆ ಪರಿಹಾರ ನೀಡಲು ಶ್ರಮಿಸುತ್ತಿರುವ ಕಾರ್ಮಿಕ ಸಚಿವರ ಸೇವೆ ಶ್ಲಾಘನೀಯ ಎಂದು ತಿಳಿಸಿದ್ದಾರೆ

ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಭಾಜಪದ ಕಾರ್ಯಕಾರಿಣಿ ಸಭೆ ನಡೆದಿದೆ. ಪಕ್ಷ ಬಲಿಷ್ಟವಾಗಿ ಬೆಳೆಯಬೇಕು, ಪಕ್ಷ ಮತ್ತು ಆಡಳಿತದಲ್ಲಿ ಸಂಯೋಜನೆ, ಪಕ್ಷ ಸಂಘಟನೆಯಿಂದ ಚುನಾವಣೆ, ರಾಜಕೀಯ ಬೆಳವಣಿಗೆ ಗಳನ್ನು ಒಗ್ಗಟ್ಟಿನಿಂದ ಎದುರಿಸಬೇಕೆನ್ನುವ ವರಿಷ್ಟರ ನಿರೀಕ್ಷೆಯನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ

Latest News

ರಾಜಕೀಯ

ನಿತೀಶ್‌ ಕುಮಾರ್‌ ಪ್ರಧಾನಿಯಾಗುವ ಭ್ರಮೆಯಲ್ಲಿದ್ದಾರೆ, ಅದಕ್ಕಾಗಿ ವಿಪಕ್ಷಗಳ ಕೂಟ ಸೇರಿದ್ದಾರೆ : ಬಿಜೆಪಿ

ಇದು ‘ಆಯಾ ರಾಮ್, ಗಯಾ ರಾಮ್ʼ ಕಾಯಿಲೆಗೆ ಉದಾಹರಣೆ. ಹಡಗು ಜಿಗಿದು ದಾಖಲೆ ನಿರ್ಮಿಸಿದ್ದಾರೆ. ಅವರು ಉನ್ನತ ಕುರ್ಚಿಗೆ ಹಾತೊರೆಯುತ್ತಿದ್ದಾರೆ.

ದೇಶ-ವಿದೇಶ

“ನಮ್ಮ ಮೆಸ್ ಊಟವನ್ನು ಪ್ರಾಣಿಗಳೂ ಸಹ ತಿನ್ನಲು ಸಾಧ್ಯವಿಲ್ಲ”; ಕಣ್ಣೀರಿಟ್ಟ ಪೇದೆ, ವೀಡಿಯೋ ವೈರಲ್

ಅಷ್ಟೇ ಅಲ್ಲದೇ ನನ್ನನ್ನು ಕೆಲಸದಿಂದ ವಜಾಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ದಾರಿಹೋಕರ ಬಳಿ ಮನೋಜ್ ಕುಮಾರ್ ಅಳಲು ತೋಡಿಕೊಂಡಿದ್ದಾರೆ.

ದೇಶ-ವಿದೇಶ

ರೇಷನ್ ಕಾರ್ಡ್ ಹೊಂದಿರುವ ಬಡವರಿಗೆ ರಾಷ್ಟ್ರಧ್ವಜ ಖರೀದಿಸುವಂತೆ ಒತ್ತಾಯಿಸುತ್ತಿದ್ದಾರೆ : ರಾಹುಲ್ ಗಾಂಧಿ

ಇದು ಬಿಜೆಪಿ ಸರ್ಕಾರದ ಪ್ರಚಾರ ಪಿತೂರಿ. ಈ ರೀತಿ ಮಾಡುವ ಮೂಲಕ ಬಿಜೆಪಿಯು “ರಾಷ್ಟ್ರೀಯತೆ”ಯನ್ನು ಮಾರಾಟ ಮಾಡುತ್ತಿದೆ ಮತ್ತು ಬಡವರ ಆತ್ಮಗೌರವಕ್ಕೆ ಧಕ್ಕೆ ತಂದಿದೆ ಎಂದು ಆರೋಪಿಸಿದ್ದಾರೆ.

ರಾಜಕೀಯ

`ಬ್ಲ್ಯಾಕ್‌ ಮೇಲ್‌ ಕುಮಾರಸ್ವಾಮಿʼ ; ಕಣ್ಣೀರ ಕೋಡಿಯಿಂದ ಕುಟುಂಬಕ್ಕೆ ಲಾಭವೇ ಹೊರತು ಜನತೆಗೇನು ಲಾಭ? : ಅಶ್ವಥ್ ನಾರಾಯಣ್‌

ನೀವು ಈವರೆಗೆ ಹೇಳಿದ ಸುಳ್ಳುಗಳನ್ನು ಎಣಿಸಲು ಸಾಧ್ಯವೇ? ಎಂದು ಸಚಿವ(Minister) ಅಶ್ವಥ್‌ ನಾರಾಯಣ್(Ashwath Narayan) ಪ್ರಶ್ನಿಸಿದ್ದಾರೆ.